ಕಲ್ಪ ಮೀಡಿಯಾ ಹೌಸ್ | ಮೈಸೂರು |
ರಾಜ್ಯದಲ್ಲಿ ನಮ್ಮ ಸರ್ಕಾರ ದ್ವೇಷದ ರಾಜಕಾರಣ ಮಾಡದೇ, ಶಾಂತಿಯುತವಾದ ವಾತಾವರಣವನ್ನು ನಿರ್ಮಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಸರ್ಕಾರದ ವಿರುದ್ಧ ಮಾಡುತ್ತಿರುವ ಭ್ರಷ್ಟಾಚಾರದ ಆರೋಪಗಳಿಗೆ ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಉತ್ತರವನ್ನು ನೀಡಲಾಗುವುದು ಎಂದರು.
ಬಿಜೆಪಿ ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚಿಸಲು ಅವರು ಕನಸು ಕಂಡಿದ್ದರು. ಆದರೆ, ಬಿಜೆಪಿಯವರಿಗೆ ಜನರು ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿದ್ದಾರೆ. ನಮ್ಮ ಪಕ್ಷಕ್ಕೆ 136 ಸೀಟುಗಳು ದೊರೆತಿರುವುದು ಅವರಿಗೆ ಆತಂಕ ಸೃಷ್ಠಿಸಿದ್ದು, ಹೀಗಾಗಿ, ಅರ್ಥವಿಲ್ಲದೇ ಏನೇನೋ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದರು.
Also read: ಶಿವಮೊಗ್ಗದ ಶಿಕ್ಷಕಿಗೆ ಕನ್ನಡದಲ್ಲೇ ಪತ್ರದ ಮೂಲಕ ಪ್ರಧಾನಿ ಮೋದಿ ಅಭಿನಂದನೆ: ಕಾರಣವೇನು?
ಪ್ರತಿಪಕ್ಷ ನಾಯಕರ ಆಯ್ಕೆ ಬಗ್ಗೆ ಏನೆಂದರು?
ಆರ್. ಅಶೋಕ್ ಅವರನ್ನು ಪ್ರತಿಪಕ್ಷ ನಾಯಕರನ್ನಾಗಿ ಆಯ್ಕೆ ಮಾಡಿರುವಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಯಾರೇ ಪ್ರತಿಪಕ್ಷ ನಾಯಕರಾದರೂ ನಮಗೆ ಅಭ್ಯಂತರವಿಲ್ಲ. ಜನರ ಆರ್ಶೀವಾದದಿಂದ ಸರ್ಕಾರ ರಚಿಸಿರುವ ನಾವು ನೀಡಿರುವ ಎಲ್ಲ ಆಶ್ವಾಸನೆಗಳನ್ನು ಈಡೇರಿಸುತ್ತಿದ್ದೇವೆ ಎಂದರು.
ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ವಿವೇಕಾನಂದ ಎಂಬುವವರ ವರ್ಗಾವಣೆ ಬಗ್ಗೆ ಟ್ವೀಟ್ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ವಿವೇಕಾನಂದ ಎಂಬುವವರು ಮೈಸೂರು ಗ್ರಾಮಾಂತರ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿದ್ದಾರೆ. ಅವರ ಬಗ್ಗೆ ಮಾತನಾಡಲಾಗಿದೆಯೆ ಹೊರತು ಪೋಲಿಸ್ ಅಧಿಕಾರಿ ಬಗ್ಗೆಯಲ್ಲ, ವಿವಿಪುರಂ ಇನ್ಸ್’ಪೆಕ್ಟರ್ ವಿವೇಕಾನಂದ ಚಾಮರಾಜ ವಿಧಾನಸಭಾ ಕ್ಷೇತ್ರಕ್ಕೆ, ವರ್ಗಾವಣೆಯಾಗಿರುವ ಬಗ್ಗೆ ಸ್ಥಳೀಯ ಶಾಸಕರನ್ನು ಕೇಳಲಿ ಎಂದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















