ಕಲ್ಪ ಮೀಡಿಯಾ ಹೌಸ್ | ಹೈದರಾಬಾದ್ |
ಹಿಂದೂ ಧರ್ಮವನ್ನು ಪಾಲಿಸುವವರು ಮಾತ್ರ ಹಿಂದೂ ದೇಗುಲಗಳಲ್ಲಿ ಉದ್ಯೋಗ ನಿರ್ವಹಿಸಲು ಅರ್ಹರು. ಬದಲಾಗಿ ಅನ್ಯಮತೀಯರಿಗೆ ಅಲ್ಲಿ ಅವಕಾಶವಿಲ್ಲ ಎಂದು ಆಂಧ್ರಪ್ರದೇಶ ಹೈಕೋರ್ಟ್ Hyderabad High Court ಮಹತ್ವದ ಆದೇಶ ನೀಡಿದೆ.
ಶ್ರೀಶೈಲಂ ದೇವಸ್ಥಾನಂನ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಯಿಂದ ತಮ್ಮನ್ನು ವಜಾಗೊಳಿಸಿರುವ ಪ್ರಶ್ನಿಸಿ ಪಿ. ಸುದರ್ಶನ್ ಬಾಬು ಎನ್ನುವವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಈ ಮಹತ್ವದ ತೀರ್ಪು ನೀಡಿದೆ.
ಏನಿದು ಪ್ರಕರಣ?
ಅರ್ಜಿದಾರ ಪಿ. ಸುದರ್ಶನ್ ಅವರು ತಾವು ಪರಿಶಿಷ್ಟ ಜಾತಿ (ಮಾಲ) ಜಾತಿಗೆ ಸೇರಿದವರಾಗಿದ್ದು, 2002ರಲ್ಲಿ ಅನುಕಂಪಾಧಾರಿತ ಹುದ್ದೆಯನ್ನು ಪಡೆದಿದ್ದೇನೆ ಎಂದು ಹೇಳಿದ್ದರು.
Also read: ಶಿವಮೊಗ್ಗ ವಿಮಾನ ನಿಲ್ದಾಣದ ಬಳಿ ಸ್ಥಳೀಯರು ಏಕಾಏಕಿ ಪ್ರತಿಭಟನೆ ನಡೆಸಿದ್ದೇಕೆ?
ಆದರೆ, ಇವರ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿದ್ದು, 2010ರಲ್ಲಿ ಹೋಲಿ ಕ್ರಾಸ್ ಚರ್ಚ್ನಲ್ಲಿ ಕ್ರಿಶ್ಚಿಯನ್ ಮಹಿಳೆಯನ್ನು ಸುದರ್ಶನ್ ಬಾಬು ಅವರು ವಿವಾಹವಾಗಿದ್ದರೂ, ತಾನು ಹಿಂದೂ ಧರ್ಮಕ್ಕೆ ಸೇರಿದ್ದೇನೆ ಎಂದು ಸುಳ್ಳು ಹೇಳಿ ದೇವಾಲಯದಲ್ಲಿ ಹುದ್ದೆ ಪಡೆದಿದ್ದಾರೆ ಎಂದು ದೂರಲಾಗಿತ್ತು.
ತಮ್ಮ ಧರ್ಮವನ್ನು ಮುಚ್ಚಿಟ್ಟಿದ್ದಾರೆ ಎಂದು ಶ್ರೀಶೈಲಂ ದೇವಾಲಯ ಆಡಳಿತವು ಅವರನ್ನು ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಯಿಂದ ತೆಗೆದು ಹಾಕಿತ್ತು. 2012ರಲ್ಲಿ ತಮ್ಮನ್ನು ಹುದ್ದೆಯಿಂದ ವಜಾಗೊಳಿಸಿರುವ ನಿರ್ಧಾರವನ್ನು ಪ್ರಶ್ನಿಸಿ ಸುದರ್ಶನ್ ಬಾಬು ಹೈಕೋರ್ಟ್ ಮೊರೆ ಹೋಗಿದ್ದರು.
ಪ್ರಕರಣದ ಕುರಿತು ಆದೇಶ ನೀಡಿರುವ ನ್ಯಾಯಾಲಯ ಹಿಂದೂ ಧರ್ಮವನ್ನು ಪಾಲಿಸುವವರು ಮಾತ್ರ ಈ ದೇವಾಲಯಗಳಲ್ಲಿ ಕೆಲಸ ನಿರ್ವಹಿಸಲು ಅರ್ಹರು ಎಂದು ಅಭಿಪ್ರಾಯಪಟ್ಟಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post