ಕಲ್ಪ ಮೀಡಿಯಾ ಹೌಸ್ | ಸೊರಬ |
ತಾಲೂಕಿನ ಪ್ರಸಿದ್ದ ವಿದ್ಯಾ ಸಂಸ್ಥೆಗಳೊಂದಾದ ಶ್ರೀ ಸ್ವಾಮಿ ವಿವೇಕಾನಂದ #SriSwamiVivekananda ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆ ಸ್ಥಾಪನೆಯಾಗಿ 25 ವರ್ಷಗಳನ್ನು ಪೂರ್ಣಗೊಳಿಸಿದ ಅಂಗವಾಗಿ ಬೆಳ್ಳಿ ಹಬ್ಬವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಸ್ವಾಮಿ ವಿವೇಕಾನಂದ ಬೋಧನಾ ಸಂಸ್ಥೆಯ ಅಧ್ಯಕ್ಷ ದಿವಾಕರ ಭಾವೆ ಹೇಳಿದರು.
ಪಟ್ಟಣದ ಶ್ರೀ ಸ್ವಾಮಿ ವಿವೇಕಾನಂದ ಬೋಧನಾ ಸಂಸ್ಥೆಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
1992-93 ರಲ್ಲಿ ಸೊರಬ #Soraba ಪಟ್ಟಣದಲ್ಲಿ ಶ್ರೀ ವಿವೇಕಾನಂದ ಬೋಧನಾ ಸಂಸ್ಥೆಯನ್ನು ಸ್ಥಾಪಿಸಲಾಯಿತು. ಆರಂಭದಲ್ಲಿ ಹಿಂದೂ ಸೇವಾ ಪ್ರತಿಷ್ಠಾನದ #HinduSevaPratistana ಸಹಯೋಗದೊಂದಿಗೆ ಸೇವಾ ನಿರತ ಮಾತಾಜಿಯವರ ಮೂಲಕ ಅರುಣ ವರ್ಗ ಮತ್ತು ಉದಯ ವರ್ಗವೆಂಬ ಪೂರ್ವ ಪ್ರಾಥಮಿಕ ತರಗತಿ ಆರಂಭದೊಂದಿಗೆ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಸೇವೆಯನ್ನು ಸಲ್ಲಿಸುತ್ತಿದೆ ಎಂದರು.
20 ವಿದ್ಯಾರ್ಥಿಗಳಿಂದ ಆರಂಭವಾಗಿ ಇಂದು 723 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಸತತ 7 ವರ್ಷಗಳ ಕಾಲ ಶೇ.100ರಷ್ಟು ಫಲಿತಾಂಶವನ್ನು ಎಸ್’ಎಸ್’ಎಲ್’ಸಿಯಲ್ಲಿ #SSLC ಪಡೆದು ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನದಲ್ಲಿದೆ ಎಂದರು.
ಸ್ವಾಮಿ ವಿವೇಕಾನಂದ ಸಂಸ್ಥೆ 25 ವರ್ಷಗಳನ್ನು ಪೂರ್ಣಗೊಳಿಸಿದ ನೆನಪಿಗಾಗಿ ಬೆಳ್ಳಿ ಹಬ್ಬ #SilverJubilee ಇದೇ ತಿಂಗಳ 24 ಮತ್ತು 25 ರಂದು ಹಮ್ಮಿಕೊಳ್ಳಲಾಗಿದ್ದು, ಅಂದು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಡಿಸೆಂಬರ್ 2 ಮತ್ತು 3 ರಂದು ವಿಜ್ಞಾನ – ಗಣಿತ ಮಾದರಿಗಳ ವಸ್ತು ಪ್ರದರ್ಶನ ಡಿಸೆಂಬರ್ ಮತ್ತು ಜನವರಿಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಈ ಸಂದರ್ಭದಲ್ಲಿ ಸಂಸ್ಥೆಯ ಖಜಾಂಚಿ ದತ್ತಾತ್ರೇಯ ಪುರಾಣಿಕ್, ಶಾಲೆಯ ಮುಖ್ಯ ಶಿಕ್ಷಕ ಸಂದೀಪ್ ಕುಮಾರ್ ರಾಯ್ಕರ್, ಮುಖ್ಯ ಶಿಕ್ಷಕಿ ಶಿಲ್ಪಾ ಸೇರಿದಂತೆ ಮೊದಲಾದವರಿದ್ದರು.
(ವರದಿ: ಮಧುರಾಮ್, ಸೊರಬ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















