No Result
View All Result
Minister Somanna Inspects & Inaugurates Road Under Bridges in Tumkur District eliminating level Crossing gates
English Articles

Minister Somanna Inspects & Inaugurates Road Under Bridges in Tumkur District eliminating level Crossing gates

by ಕಲ್ಪ ನ್ಯೂಸ್
February 26, 2026
0

Kalpa Media House  |  Bengaluru  | Union Minister of State for Railways and Jal Shakti, V. Somanna, today inaugurated three...

Read moreDetails
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
  • Advertise With Us
  • Grievances
  • About Us
  • Contact Us
Sunday, March 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ರಾಜ್ಯದ ಜನರಿಗೆ ಮೋಸ ಮಾಡುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ತೆಲಂಗಾಣದ ಮುಖ್ಯಮಂತ್ರಿಗಳ ಆರೋಪ ಚುನಾವಣಾ ಪ್ರೇರಿತ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 28, 2023
in ರಾಜಕೀಯ
0
ರಾಜ್ಯದ ಜನರಿಗೆ ಮೋಸ ಮಾಡುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ತೆಲಂಗಾಣ |

ತೆಲಂಗಾಣದ ಮುಖ್ಯಮಂತ್ರಿಗಳು ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳನ್ನು ಸರಿಯಾಗಿ ಜಾರಿ ಮಾಡಲಾಗುತ್ತಿಲ್ಲ ಎಂಬ ಆರೋಪಗಳು ಚುನಾವಣಾ ಪ್ರೇರಿತ ಮತ್ತು ಸತ್ಯಕ್ಕೆ ದೂರವಾಗಿದೆ. ಕರ್ನಾಟಕ ರಾಜ್ಯದ ಜನತೆಯನ್ನು ಮೋಸ ಮಾಡಿರುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಕಾಂಗ್ರೆಸ್ ಪಕ್ಷ ನೀಡಿರುವ ಎಲ್ಲ ಪಂಚ ಗ್ಯಾರಂಟಿಗಳನ್ನು 5 ವರ್ಷಗಳವರೆಗೆ ಅನುಷ್ಠಾನಗೊಳಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ತಿಳಿಸಿದರು.

ಅವರು ತೆಲಂಗಾಣ Thelangana ರಾಜ್ಯಕ್ಕೆ ಭೇಟಿ ನೀಡಿ ಕಾಂಗ್ರೆಸ್ ಪಕ್ಷದ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮೇ ತಿಂಗಳಲ್ಲಿ ಅಧಿಕಾರಕ್ಕೆ ಬಂದಿತು. ನಾವು ಅಧಿಕಾರ ಸ್ವೀಕರಿಸಿದ ಮೇ 20 ರ ದಿನದಂದೇ ಕಾಂಗ್ರೆಸ್ ನೀಡಿದ್ದ ಐದೂ ಗ್ಯಾರಂಟಿಗಳ ಅನುಷ್ಠಾನಗೊಳಿಸಲು ಸಂಪುಟ ಸಭೆ ನಡೆಸಿ ತೀರ್ಮಾನಿಸಿ, ಸಂಬಂಧಪಟ್ಟ ಸರ್ಕಾರಿ ಆದೇಶಗಳನ್ನು ಅಂದೇ ನೀಡಲಾಯಿತು ಎಂದರು.
ಶಕ್ತಿ ಯೋಜನೆಗೆ ಮಹಿಳೆಯರ ಮೆಚ್ಚುಗೆ
ನಮ್ಮ ಮೊದಲ ಗ್ಯಾರಂಟಿಯಾದ ಮಹಿಳೆರಿಗೆ ಉಚಿತ ಪ್ರಯಾಣ ಸೌಲಭ್ಯ ಒದಗಿಸುವ ಶಕ್ತಿ ಯೋಜನೆಯನ್ನು ಜೂನ್ 11 ರಿಂದ ಜಾರಿಗೊಳಿಸಲಾಯಿತು. ನಿನ್ನೆಯ ದಿನ ರಾಜ್ಯದಲ್ಲಿ 100.47 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ ಶಕ್ತಿ ಯೋಜನೆಯ ಯಶಸ್ವಿ ಅನುಷ್ಠಾನದ ಸಂಭ್ರಮವನ್ನು ಆಚರಿಸಲಾಯಿತು. ರಾಜ್ಯದಲ್ಲಿ ಯಾವ ಜಾತಿಧರ್ಮಗಳ ಬೇಧವಿಲ್ಲದೇ ಪ್ರತಿದಿನ 60 ಲಕ್ಷ ಮಹಿಳೆಯರು ಸರ್ಕಾರಿ ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸುತ್ತಾತೆ. ಶ್ರಮಿಕ , ಉದ್ಯೋಗಸ್ಥ ಸೇರಿದಂತೆ ಎಲ್ಲ ವರ್ಗದ ಮಹಿಳೆಯರು ಯೋಜನೆಯ ಲಾಭಪಡೆಯುತ್ತಿದ್ದು, ಇದರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ತೆಲಂಗಾಣದ ಮುಖ್ಯಮಂತ್ರಿಗಳು ಚುನಾವಣೆಯ ಹಿನ್ನಲೆಯಲ್ಲಿ ಕರ್ನಾಟಕ ಸರ್ಕಾರದ ಬಗ್ಗೆ ಸುಳ್ಳು ಹೇಳುತ್ತಿದ್ದಾರೆ. ಆದರೆ ಇಲ್ಲಿನ ಇತರೆ ಪಕ್ಷಗಳು ಏಕೆ ಸುಳ್ಳು ಹೇಳುತ್ತಿವೆ ಎಂದು ಪ್ರಶ್ನಿಸಿದರು.

ಅನ್ನಭಾಗ್ಯ
ಕಾಂಗ್ರೆಸ್ ನ ಪಂಚ ಗ್ಯಾರಂಟಿಗಳಲ್ಲಿ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿಯನ್ನು ನೀಡುವ ಭರವಸೆಯನ್ನು ನೀಡಿತು. ಇದರ ಅನುಷ್ಠಾನಕ್ಕಾಗಿ ಹೆಚ್ಚುವರಿ 5 ಕೆಜಿ ಅಕ್ಕಿಯನ್ನು ನೀಡಲು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಆದರೆ ಕೇಂದ್ರ ಸರ್ಕಾರ ರಾಜ್ಯದ ಈ ಮನವಿಗೆ ಸ್ಪಂದಿಸಲಿಲ್ಲ. ಆದ್ದರಿಂದ 5 ಕೆಜಿ ಅಕ್ಕಿಯ ಬದಲು ಅದರ ಮೊತ್ತವನ್ನು ಜನರಿಗೆ ನೀಡಲು ಸರ್ಕಾರ ನಿರ್ಧರಿಸಿತು.ಈ ನಿಟ್ಟಿನಲ್ಲಿ 4.37 ಕೋಟಿ ಪ್ರತಿಯೊಬ್ಬರಿಗೆ ತಲಾ 700 ರೂ.ಗಳನ್ನು ಪ್ರತಿ ಫಲಾನುಭವಿಯ ಖಾತೆಗೆ ನೀಡಲಾಗುತ್ತಿದೆ ಎಂದರು.
ಗೃಹಜ್ಯೋತಿ
ಗೃಹಜ್ಯೋತಿ ಯೋಜನೆಯನ್ನು ಜುಲೈ 2023 ರಿಂದಲೇ ಜಾರಿಗೊಳಿಸಲಾಗಿದ್ದು,ರಾಜ್ಯದ ಪ್ರತಿ ಮನೆಗೆ 200 ಯೂನಿಟ್ವರೆಗೆ ಉಚಿತ ವಿದ್ಯುತ್ ನ್ನು ಉಚಿತವಾಗಿ ನೀಡಲಾಗುತ್ತಿದೆ. 12 ತಿಂಗಳ ವಿದ್ಯುತ್ ಬಳಕೆಯ ಸರಾಸರಿಗೆ ಶೇ. 10 ರಷ್ಟು ಹೆಚ್ಚಿನ ಯೂನಿಟ್ ಸೇರಿಸಿ ನೀಡಲಾಗುತ್ತಿದೆ ಎಂದರು.

ಗೃಹಲಕ್ಷ್ಮಿ
ಗೃಹಲಕ್ಷ್ಮಿ ಯೋಜನೆಯಡಿ 1.14 ಕೋಟಿ ಮಹಿಳಾ ಯಜಮಾನಿಗೆ ತಲಾ 2000 ರೂ. ಗಳನ್ನು ವಿತರಿಸಲಾಗುತ್ತಿದೆ. ಈ ಯೋಜನೆಯ ನೋಂದಣಿ ನಿರಂತರವಾಗಿ ನಡೆಯುತ್ತಿದ್ದು, ಯಾವುದೇ ಅಡಚಣೆಗಳಿಲ್ಲದೇ ಯೋಜನೆಯ ಲಾಭವನ್ನು ಮಹಿಳೆಯರು ಪಡೆಯಬಹುದಾಗಿದೆ ಎಂದರು.
ಜನವರಿ 2024ರಲ್ಲಿ ಯುವನಿಧಿ
ಯುವನಿಧಿ ಯೋಜನೆಯಡಿ ರಾಜ್ಯದ ನಿರುದ್ಯೋಗಿ ಯುವಜನರನ್ನು ಸಶಕ್ತಗೊಳಿಸುವ ಉದ್ದೇಶದಿಂದ ಜಾರಿಗೊಳಿಸಲಾಗುವುದು. 2022-23ನೇ ಸಾಲಿನಲ್ಲಿ ಪದವಿ ಪಡೆದ ಯುವಜನರಿಗೆ 2 ವರ್ಷಗಳವರೆಗೆ ಮಾಸಿಕ 3000 ರೂ. ಹಾಗೂ 2 ವರ್ಷದವರಗೆ ಡಿಪ್ಲೊಮಾ ಮಾಡಿದ ಯುವಜನರಿಗೆ ಮಾಸಿಕ 1500 ರೂ.ಗಳನ್ನು ನೀಡಲಾಗುವುದು. ಇದಲ್ಲದೇ ಯುವಜನರಿಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನೂ ನೀಡಲಾಗುತ್ತದೆ. ಈ ಯೋಜನೆಯನ್ನು ಜನವರಿ 2024 ರಿಂದ ಜಾರಿಗೆ ತರಲಾಗುವುದು. ಕರ್ನಾಟಕ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಒಂದೇ ವರ್ಷದೊಳಗೇ ಜಾರಿಗೊಳಿಸಿದೆ. ಈ ವರ್ಷ ಎಲ್ಲ ಗ್ಯಾರಂಟಿ ಯೋಜನೆಗಳಿಗೆ ಸುಮಾರು 38 ಸಾವಿರ ಕೋಟಿಗಳು ವೆಚ್ಚವಾಗುತ್ತಿದೆ ಎಂದರು.

ಬಿಜೆಪಿ ತನ್ನ ಪ್ರಣಾಳಿಕೆಯ ಭರವಸೆಗಳನ್ನು ಈಡೇರಿಸಿಲ್ಲ
ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದಿದ್ದೇವೆ. ಈ ಹಿಂದೆಯೂ ಕಾಂಗ್ರೆಸ್ ಸರ್ಕಾರ ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿತ್ತು. ಆದರೆ ಬಿಜೆಪಿ ಸರ್ಕಾರ ತಮ್ಮ ಪ್ರಣಾಳಿಕೆಯಲ್ಲಿ ಸಾಕಷ್ಟು ಭರವಸೆಗಳನ್ನು ನೀಡಿದ್ದರೂ , 2019-2023ರ ತಮ್ಮ ಅವಧಿಯಲ್ಲಿ ಕೇವಲ ಶೇ. 10 ರಷ್ಟು ಭರವಸೆಗಳನ್ನು ಈಡೇರಿಸಿದ್ದಾರೆ. ಪ್ರಧಾನಿ ಮೋದಿಯವರು ಬಿಡುಗಡೆಗೊಳಿಸಿದ್ದ ಬಿಜೆಪಿ ಪ್ರಣಾಳಿಕೆಯಲ್ಲಿನ ಭರವಸೆಗಳನ್ನು ಈಡೇರಿಸದೇ ಇರುವುದು ಸತ್ಯ. ಆದ್ದರಿಂದ ರಾಜ್ಯದ ಕಾಂಗ್ರೆಸ್ ಸರ್ಕಾರದ ಮೇಲೆ ವಿರೋಧಪಕ್ಷಗಳು ಮಾಡುತ್ತಿರುವ ಆರೋಪಗಳು ಚುನಾವಣಾ ಪ್ರೇರಿತವಾಗಿದ್ದು, ಸತ್ಯಕ್ಕೆ ದೂರವಾಗಿದೆ ಎಂದರು.
ರಾಜ್ಯದ ಆರ್ಥಿಕತೆ ಸದೃಢವಾಗಿದೆ
ಪ್ರಧಾನಿ ಮೋದಿಯವರು ರಾಜಸ್ಥಾನದ ತಮ್ಮ ಚುನಾವಣಾ ಭಾಷಣದಲ್ಲಿ ಕರ್ನಾಟಕ ಗ್ಯಾಟಂಟಿ ಯೋಜನೆಗಳನ್ನು ಜಾರಿ ಮಾಡಲಾಗುವುದಿಲ್ಲ. ಹಾಗೂ ರಾಜ್ಯದ ಆರ್ಥಿಕತೆ ಕುಂಠಿತವಾಗುತ್ತದೆ ಎಂದು ಟೀಕಿಸಿದ್ದರು. ಅವರ ಈ ಮಾತು ಸತ್ಯಕ್ಕೆ ದೂರವಾಗಿದ್ದು, ರಾಜ್ಯದ ಆರ್ಥಿಕತೆ ಸದೃಢವಾಗಿದ್ದು, ಅನುದಾನಕ್ಕೆ ಕೊರತೆ ಇಲ್ಲ. ಆದ್ದರಿಂದ ತೆಲಂಗಾಣ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಖಂಡಿತ ಜಯ ಸಾಧಿಸಲಿದ್ದು, ಅಧಿಕಾರಕ್ಕೆ ಬರಲಿದೆ. ತೆಲಂಗಾಣದಲ್ಲಿ ಪಕ್ಷ ನೀಡಿರುವ ಆರು ಗ್ಯಾರಂಟಿಗಳನ್ನು ಕಾಂಗ್ರೆಸ್ ಈಡೇರಿಸಲಿದ್ದು, ಇದರ ಬಗ್ಗೆ ತೆಲಂಗಾಣ ಜನರಿಗೆ ಯಾವುದೇ ಸಂಶಯ ಬೇಡ ಎಂದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited    

Tags: CM SiddaramaiahKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaThelanganaತೆಲಂಗಾಣಮುಖ್ಯಮಂತ್ರಿ ಸಿದ್ದರಾಮಯ್ಯ
Share197Tweet123Send
Previous Post

ರಸಿಕರ ಮನ ಸೆಳೆದ ಮಹಾಕಾವ್ಯ ಮತ್ತು ಶಾಸ್ತ್ರೀಯ ನೃತ್ಯದ ಸಂಗಮ

Next Post

ಜನತಾದರ್ಶನ ಅಲ್ಲ ಇದು ಬೋಗಸ್ ದರ್ಶನ: ಪ್ರತಿಪಕ್ಷ ನಾಯಕ ಅಶೋಕ್ ಲೇವಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕರೆಂಟ್ ಬಿಲ್‌ ಕಟ್ಟಿದರೆ ಮುಖ್ಯಮಂತ್ರಿ ಸ್ಥಾನಕ್ಕೆ ಅವಮಾನ ಮಾಡಿದಂತೆ: ಮಾಜಿ ಸಚಿವ ಅಶೋಕ್‌

ಜನತಾದರ್ಶನ ಅಲ್ಲ ಇದು ಬೋಗಸ್ ದರ್ಶನ: ಪ್ರತಿಪಕ್ಷ ನಾಯಕ ಅಶೋಕ್ ಲೇವಡಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ರಕ್ತದಾನದಿಂದ ಕನಿಷ್ಠ ಮೂರು ಜೀವಗಳನ್ನು ಉಳಿಸಬಹುದು: ಡಾ. ನಾಗರಾಜ ಅಭಿಪ್ರಾಯ

ರಕ್ತದಾನದಿಂದ ಕನಿಷ್ಠ ಮೂರು ಜೀವಗಳನ್ನು ಉಳಿಸಬಹುದು: ಡಾ. ನಾಗರಾಜ ಅಭಿಪ್ರಾಯ

February 28, 2026
ಬೆಂಗಳೂರು | ‘ಮ್ಯಾಚ್ ಡೇ 2026’ ವಿನೂತನ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ

ಬೆಂಗಳೂರು | ‘ಮ್ಯಾಚ್ ಡೇ 2026’ ವಿನೂತನ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ

February 28, 2026
ಪ್ರೇರಣ ಪಬ್ಲಿಕ್ ಶಾಲೆ ನಾವಿನ್ಯಯುತ ಚಿಂತನಾತ್ಮಕ ಕಲಿಕೆಗೆ ವೇದಿಕೆ: ಸೋಮಶೇಖರಯ್ಯ

ಪ್ರೇರಣ ಪಬ್ಲಿಕ್ ಶಾಲೆ ನಾವಿನ್ಯಯುತ ಚಿಂತನಾತ್ಮಕ ಕಲಿಕೆಗೆ ವೇದಿಕೆ: ಸೋಮಶೇಖರಯ್ಯ

February 28, 2026
ಶೀಘ್ರದಲ್ಲೇ ಚಿತ್ರದುರ್ಗ-ದಾವಣಗೆರೆ ರೈಲು ಸಂಚಾರ ಪ್ರಾರಂಭ: ಕೇಂದ್ರ ಸಚಿವ ಸೋಮಣ್ಣ

ಶೀಘ್ರದಲ್ಲೇ ಚಿತ್ರದುರ್ಗ-ದಾವಣಗೆರೆ ರೈಲು ಸಂಚಾರ ಪ್ರಾರಂಭ: ಕೇಂದ್ರ ಸಚಿವ ಸೋಮಣ್ಣ

February 28, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಮಾರ್ಚ್ 1 ರಂದು ಬೆಂಗಳೂರಿನಿಂದ ಮುಂಬೈಗೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ

February 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL