No Result
View All Result
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8
English Articles

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

by ಕಲ್ಪ ನ್ಯೂಸ್
June 5, 2026
0

Kalpa Media House  |  Special Article  | On June 8, Indian fans will be amongst the first in the world...

Read moreDetails
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

Young Woman Dies of Cardiac Arrest; Parents Give New Life Through Organ Donation

June 3, 2026
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
  • Advertise With Us
  • Grievances
  • About Us
  • Contact Us
Friday, June 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ತುಂಗಾ ಪಾನ ಗಂಗಾ ಸ್ನಾನ ಮಾತಿಗೆ ಅಪವಾದವಾಗಿದೆ ತುಂಗೆಯ ನೀರು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 28, 2023
in ಶಿವಮೊಗ್ಗ
0
ತುಂಗಾ ಪಾನ ಗಂಗಾ ಸ್ನಾನ ಮಾತಿಗೆ ಅಪವಾದವಾಗಿದೆ ತುಂಗೆಯ ನೀರು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ತುಂಗಾ ಪಾನ ಗಂಗಾ ಸ್ನಾನ Tunga Paana Ganga Snana ಎಂಬ ಗಾಧೆ ಮಾತಿಗೆ ಅಪವಾದವಾಗಿದ್ದು, ತುಂಗೆ ಅಪವಿತ್ರವಾಗಿದೆ ಕುಡಿಯಲು ಯೋಗ್ಯವಲ್ಲದ ಅಂಶಗಳು ನೀರಿನಲ್ಲಿ ಕಂಡುಬಂದಿದ್ದು, ಶಿವಮೊಗ್ಗ ನಗರಕ್ಕೆ ನೀರಿನಿಂದಲೇ ಅನಾರೋಗ್ಯ ಕಾಡುವ ಅಪಾಯದ ಗಂಟೆ ಬಾರಿಸಿದೆ ಎಂದು ನಗರ ಪಾಲಿಕೆಯ ಕೊನೆಯ ವಿಶೇಷ ಸಭೆಯಲ್ಲಿ ಎಲ್ಲಾ ಪಕ್ಷದ ಸದಸ್ಯರುಗಳು ಒಕ್ಕೊರಲಿನಿಂದ ತುಂಗೆಯ ಶುದ್ಧೀಕರಣಕ್ಕೆ ಆಗ್ರಹಿಸಿದರು.

ಪಾಲಿಕೆ ಸದಸ್ಯರಾದ ರಮೇಶ್ ಹೆಗಡೆ ಮಾತನಾಡಿ, ತುಂಗೆಯನ್ನು ಉಳಿಸುವುದು ಮಹಾನಗರ ಪಾಲಿಕೆ ಕರ್ತವ್ಯವಾಗಿದೆ ಯುಜಿಡಿ ಮುಖಾಂತರವೇ ಮಲೀನ ನೀರು ಹರಿಯಬೇಕು ಎಂಬ ನಿರ್ಣಯ ಮಾಡೋಣ ಎಂದರು.
ಶಂಕರ್ ಗನ್ನಿ ಮಾತನಾಡಿ, ಪಂಪ್ ಹೌಸ್‍ಗೆ ನೇರವಾಗಿ ಕಲುಷಿತ ನೀರು ಬರುತ್ತಿದೆ ಎಂದರು. ಲಕ್ಷ್ಮೀ ಶಂಕರ್‍ನಾಯಕ್ ಅದಕ್ಕೆ ಧ್ವನಿಗೂಡಿಸಿದರು. ವಿಶ್ವನಾಥ್ ಮಾತನಾಡಿ ಉತ್ತಮ ಅಭಿವೃದ್ಧಿಯಾದ ಕನ್ಸರ್‍ವೆನ್ಸಿಗಳ ನಗರ ಎಂಬ ಪ್ರಶಸ್ತಿ ಬಂದಿದ್ದರೂ ಮಿಳಘಟ್ಟ ಸೇರಿದಂತೆ ನನ್ನ ವಾರ್ಡಿನಲ್ಲಿ ಕನ್ಸರ್‍ವೆನ್ಸಿ ಅಭಿವೃದ್ಧಿಯಾಗಿಲ್ಲ ಆಗಾಗಿ ಕಲುಷಿತ, ತ್ಯಾಜ್ಯ ನೀರು ಎಲ್ಲವೂ ಕನ್ಸರ್‍ವೆನ್ಸಿಗೆ ಬಿಡುತ್ತಿದ್ದು, ಅದು ನೇರವಾಗಿ ಕಾಲುವೆ ಸೇರುತ್ತಿದೆ. ಮೊದಲು ಪಾಲಿಕೆ ವ್ಯಾಪ್ತಿಯ ಎಲಾ ಕನ್ಸರ್‍ವೆನ್ಸಿ ಅಭಿವೃದ್ದಿಗೊಳಿಸಿ ಮೂಲಭೂತ ಸೌಲಭ್ಯ ಕಲ್ಪಿಸಿ ಎಂದರು.

ಧೀರರಾಜ್ ಹೊನ್ನಾವಿಲೆ ಮಾತನಾಡಿ, ಖಾಯಿಲೆಗಳ ನಗರವಾಗುತ್ತಿದ್ದು, ಯುಜಿಡಿ ನೀರು ಚಾನಲ್‍ಗೆ ಸೇರದಂತೆ ಕ್ರಮವಹಿಸಿ ಎಂದರು.
ಯಮುನಾ ರಂಗೇಗೌಡ ಮಾತನಾಡಿ, ಹಲವು ವರ್ಷಗಳಿಂದ ಸಾಕಷ್ಟು ಸಂಘ ಸಂಸ್ಥೆಗಳು ಶುದ್ಧ ತುಂಗೆಗಾಗಿ ಹೋರಾಟ ಮಾಡುತ್ತ ಬಂದಿದ್ದರು ಪರಿಣಾಮ ಸೊನ್ನೆ ಎಂದರು.
ರಾಜು ಮಾತನಾಡಿ, 24×7 ಕುಡಿಯುವ ನೀರು ಮತ್ತು ಒಳಚರಂಡಿ ವಿಭಾಗವನ್ನು ನೀರು ಸರಬರಾಜು ಮಂಡಳಿಗೆ ಕೊಟ್ಟಿದ್ದೆ ತಪ್ಪಾಗಿದೆ ಎಂದರು. ನಗರಾಜು ಕಂಕಾರಿ ಮಾತನಾಡಿ ಸ್ಮಾರ್ಟ್ ಸಿಟಿ ಹಳೆ ಸೇತುವೆಯಿಂದ ಹೊಸ ಸೇತುವೆಯವರೆಗೆ ಕೋಟ್ಯಾಂತರ ರೂ. ವೆಚ್ಚದಲ್ಲಿ ಪ್ರಾಜೆಕ್ಟ್ ತಯಾರಿಸಿ ಅಭಿವೃದಿಗೊಳಿಸಿದ್ದು ಆಯಿತು. ಆದರೂ ತುಂಗೆಯ ಒಡಲಿಗೆ ಮಲೀನ ನೀರು ಸೇರುತ್ತಲೆ ಇದೆ. ಇವತ್ತಿಗೂ ಹಲವೆಡೆ ಫಿಟ್ ವ್ಯವಸ್ಥೆ ಇದೆ. ಮಳೆ ನೀರು ಮತ್ತು ಟಾಯ್ಲೆಟ್ ನೀರು ಎಲ್ಲವೂ ಮಳೆಗಾಲದಲ್ಲಿ ಮೇಲೆ ಉಕ್ಕಿ ಹರಿದು ಚಾನಲ್ ಪಾಲಾಗುತ್ತಿದೆ. ಆಟೋ ಕಾಂಪ್ಲೆಕ್ಸ್‍ನ್ ಎಲ್ಲಾ ತ್ಯಾಜ್ಯ ನೀರು ಚಾನಲ್‍ಗೆ ಸೇರುತ್ತಿದೆ ಎಂದರು.

ವಿಫಕ್ಷ ನಾಯಕ ಮೆಹಕ್ ಷರೀಪ್ ಮಾತನಾಡಿ, ನೀರಿನ ಗುಣಮಟ್ಟ ಪರೀಕ್ಷೆಗೆ ಲ್ಯಾಬ್ ನಿರ್ಮಾಣ ಮಾಡಲು ಪಾಲಿಕೆಯಲ್ಲಿ ಹಣ ಇಟ್ಟಿದ್ದೇವೆ. ಆದರೆ ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ ಎಂದರು.
ಜ್ಞಾನೇಶ್ವರ ಮಾತನಾಡಿ, 25 ವರ್ಷಗಳಿಂದ ಹೋರಾಟ ನಡೆಯುತ್ತಿದೆ. ನಗರ ವಿಪರೀತವಾಗಿ ಬೆಳೆದಿದೆ. ಸಮಸ್ಯೆಗಳು ಉಲ್ಭಣವಾಗಿದೆ. ಸಣ್ಣ ಪುಟ್ಟ ಸಮಸ್ಯೆಗಳನ್ನು ಬಗೆಹರಿಸಿದ್ದರು, ಒಂದು ಒಳ್ಳೆ ಯೋಜನೆ ಮೂಲಕ ಶಾಶ್ವತ ಪರಿಹಾರ ಮಾಡಬೇಕು ಎಂದರು.

ಶಾಸಕ ಚೆನ್ನಬಸಪ್ಪನವರು ಸಮಸ್ಯೆ ಪರಿಹಾರಕ್ಕೆ ವ್ಯಾಪಾಕ ಪ್ರಯತ್ನ ಮಾಡಲಾಗುತ್ತಿದೆ. ಸರ್ಕಾರದ ಮಟ್ಟದಲ್ಲಿ ಶಾಶ್ವತವಾದ ಪರಿಹಾರ ಬೇಕಾಗಿದೆ. ಜನರಲ್ಲಿ ಜಾಗೃತಿ ಕೂಡ ಅವಶ್ಯ ಎಂದರು.
ಆಯುಕ್ತ ಮಾಯಣ್ಣಗೌಡ ಮಾತನಾಡಿ, ಈಗಾಗಲೇ ಹಲವಾರು ಸಭೆಗಳನ್ನು ಪರಿಸರ ಪ್ರೇಮಿಗಳು ಮತ್ತು ಜಿಲ್ಲಾಧಿಕಾರಿಗಳೊಂದಿಗೆ ಹಾಗು ಸಂಬಂದಪಟ್ಟ ಅನೇಕ ವಿಭಾಗಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ. ನಗರದಲ್ಲಿ 37 ಎಂಎಲ್‍ಡಿ ಕೊಳಚೆ ನೀರು ಬರುತ್ತಿದ್ದು, ಕೇವಲ 11 ಎಂಎಲ್‍ಡಿ ನೀರು ಮಾತ್ರ ಎಸ್‍ಟಿಪಿ ಶುದ್ಧೀಕರಣ ಘಟಕಕ್ಕೆ ಹೋಗುತ್ತಿದೆ. ಆದರೆ ಉಳಿದ ನೀರು ಎಲ್ಲಿಗೆ ಹೋಯಿತು. ನಗರ ಶುದ್ಧ ಕುಡಿಯುವ ನೀರು ಸರಬರಾಜು ಮಂಡಳಿ ಮತ್ತು ಒಳಚರಂಡಿ ಮಂಡಳಿ ಎರಡು ಬೇರೆ ಬೇರೆ ವಿಭಾಗಗಳಾಗಿದ್ದು, ತ್ಯಾಜ್ಯ ನೀರು, ಮಲೀನ ನೀರು, ಮತ್ತು ಮಳೆ ನೀರು ಹಾಗೂ ಮನೆಯ ಕೊಳಚೆ ನೀರು ಎಲ್ಲವೂ ಕೂಡ ಬೇರೆ ಬೇರೆ ಸಂಪರ್ಕ ವ್ಯವಸ್ಥೆ ಇದ್ದು, ಹೆಚ್ಚಿನ ಕಡೆ ಯುಜಿಡಿಗೆ ಬಿಡಲಾಗುತ್ತಿದೆ. ಇನ್ನೂ ಶೇ.30 ರಷ್ಟು ಜನ ಯುಜಿಡಿ ಸಂಪರ್ಕ ಹೊಂದಿಲ್ಲ. ಒಳಚರಂಡಿ ವಿಭಾಗ 5 ಹಂತದಲ್ಲಿ ಮಲೀನ ನೀರನ್ನು ಬೇರ್ಪಡಿಸಿ ಶುದ್ಧಿಕರಣಗೊಳಿಸಿ ಬಳಿಕ ತುಂಗೆಗೆ ಬಿಡುವ ಕಾರ್ಯ ಮಾಡಬೇಕು ಈ ಬಗ್ಗೆ ಅನೇಕ ಚರ್ಚೆಗಳಾಗಿದೆ. ಸೂಕ್ತ ಯೋಜನೆ ನಿರ್ಮಿಸಿ ಸಮಸ್ಯೆ ಬಗೆಹರಿಸಲು 15 ದಿನಗಳ ಗಡವುನ್ನು ಈಗಾಗಲೇ ಡಿಸಿಯವರು ನೀಡಿದ್ದಾರೆ. ಆದರೆ, ಅದು ಕಾರ್ಯರೂಪಕ್ಕೆ ಬರಲು ತಿಂಗಳುಗಳೇ ಹಿಡಿಯುತ್ತದೆ ಎಂದರು.

Also read: ಮಾನವೀಯತೆಯ ಪಾಠ ಸಾಲದು, ಅದನ್ನು ಪಾಲಿಸಿ: ಸಿದ್ದರಾಮಯ್ಯಗೆ ಯತ್ನಾಳ್ ಟಾಂಗ್

ಒಳಚರಂಡಿ ವಿಭಾಗದ ಮಿಥುನ್‍ಕುಮಾರ್ ಮಾತನಾಡಿ, ರಾಜಕಾಲುವೆಯ ಬಳಿ 9 ಕಡೆ ಮಲೀನ ನೀರು ಸಂಗ್ರಹಿಸಿ, ತ್ಯಾಜ್ಯವನ್ನು ಬೇರ್ಪಡಿಸಿ ರಾಜಕಾಲುವೆಗೆ ಬಿಡಲು 9 ವೆಟ್‍ವೆಲ್‍ಗಳ ನಿರ್ಮಾಣ ಮಾಡಲಾಗಿದೆ. ಈಗಾಗಲೇ 5 ಕಾರ್ಯಾರಂಭ ಮಾಡುತ್ತಿದೆ. ತುಂಗಾ ನದಿ ಬಲಭಾಗದ ಕೊಳಚೆ ನೀರು ಪುರಲೆಯ ಶುದ್ಧಿಕರಣ ಘಟಕಕ್ಕೆ ಬರುತ್ತಿದೆ. ಹಲವಾರು ಕಡೆ ಬೇಸಿಗೆ ಮತ್ತು ಚಳಿಗಾಲದಲ್ಲಿ ನೇರವಾಗಿ ಕಲುಷಿತ ನೀರು ರಾಜಕಾಲುವೆಗೆ ಬಿಡುತ್ತಿದ್ದಾರೆ. 3ನೇ ಹಂತದ ಒಳಚರಂಡಿ ಯೋಜನೆ ಪೈಪ್ ಅಳವಡಿಕೆ ಕೆಲವೊಂದು ಖಾಸಗಿ ಜಾಗದಲ್ಲಿ ಹೋಗಬೇಕಾಗಿರುವುದರಿಂದ ಅವರ ವಿರೋಧ ಮತ್ತು 2 ವರ್ಷದ ಕರೋನ ಅವಧಿಯಲ್ಲಿ ಕಾಮಗಾರಿಗೆ ಹಿನ್ನೆಡೆಯಾಗಿದೆ. ವೆಟ್‍ವೆಲ್‍ಗಳ ನಿರ್ವಾಹಣೆ 3 ವರ್ಷದ ಅವಧಿ ಮುಗಿದ್ದಿದ್ದು, ಇನ್ನೂ ಮುಂದೆ ಪಾವತಿ ಅವಧಿಯಿಂದಲೇ ಮ್ಯಾನ್ ಪವರ್ ನೀಡಿ ಮುಂದುವರಿಸಬೇಕು ಎಂದರು. ಅದಕ್ಕೆ ಪಾಲಿಕೆಯಲ್ಲಿ ಸರ್ವಾನುಮತದಿಂದ ನಿರ್ಣಯದಿಂದ ಒಪ್ಪಿಗೊಳ್ಳಲಾಯಿತು. ಒಂದು ಸಂಸ್ಕರಣ ಘಟಕಕ್ಕೆ ಕನಿಷ್ಠ 3 ಜನ ಮ್ಯಾನ್ ಪವರ್ ಬೇಕು ಎಂದರು.

ಒಳಚರಂಡಿ ವಿಭಾಗದ ಹಿರಿಯ ಅಧಿಕಾರಿ ಚಂದ್ರಶೇಖರ್ ಮಾತನಾಡಿ, ಎರಡನೇ ನಿರ್ಣಯದಂತೆ ವಿದ್ಯುತ್ ವ್ಯವಸ್ಥೆ ಇನ್ನಿತರ ಸಮಸ್ಯೆಗಳನ್ನು ಈಗಾಗಲೇ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದೇವೆ. ಕಲುಷಿತ ನೀರು ಶುದ್ಧಿಕರಣ ಘಟಕಗಳು ಹೆಚ್ಚಳ ಮಾಡಲು ಮತ್ತು ಒಳಚರಂಡಿ ವ್ಯವಸ್ಥೆ ಪೂರ್ಣವಾಗಿ ಮುಗಿಸಲು ಸರ್ಕಾರದ ಗಮನಕ್ಕೆ ಈಗಾಗಲೇ ತರಲಾಗಿದೆ ಎಂದರು.

ಆಯುಕ್ತ ಮಾಯಣ್ಣಗೌಡ ಮಾತನಾಡಿ, ಅಲ್ಯೂಮಿನಿಯಂ ಅಂಶ ನೀರಿನಲ್ಲಿ ಇದೆ ಎಂದು ಗಮನಕ್ಕೆ ಬಂದಾಗ, ಎಲ್ಲಾ ವಿಭಾಗಗಳೊಂದಿಗೆ ಚರ್ಚೆ ಮಾಡಿ, ಎಲ್ಲಿಂದ ಬಂತು, ಹೇಗೆ ಬಂತು, ಕಲುಷಿತ ನೀರಿಗೆ ಈ ಅಂಶ ಸೇರ್ಪಡೆಯಾದ ಬಗ್ಗೆ ಅಧ್ಯಯನಕ್ಕೆ ಪ್ರಾರಂಭ ಮಾಡಿದ್ದೇವೆ. 9 ಕಡೆ ನೀರಿನ ಸ್ಯಾಪಲ್ ಸಂಗ್ರಹಿಸಿ ಕೊನೆಗೆ ಗಾಜನೂರು ಡ್ಯಾಮ್‍ನಿಂದಲೂ ಸಂಗ್ರಹಿಸಿದಾಗ ಎಲ್ಲಾ ಕಡೆಯೂ ಅಲ್ಯೂಮಿನಿಯಂ ಅಂಶ ಇರುವುದು ಕಾತರಿಯಾಗಿದೆ. ಈಗ ನೀರಿನ ಮೂಲದಲ್ಲಿ ಶೃಂಗೇರಿಯವರೆಗೆ ಮತ್ತು ಭದ್ರಾ ನದಿಯ ಮೂಲದಲ್ಲೂ ಕೂಡ ದೊಡ್ಡ ಮಟ್ಟದಲ್ಲಿ ತಜ್ಞರಿಂದ ಮೂಲವನ್ನು ಪರೀಕ್ಷಿಸಲು ಕ್ರಮಕೈಗೊಳ್ಳಲಾಗಿದ್ದು, ಪರಿಣಿತರು ನೀರಿನ ಸ್ಯಾಂಪಲ್‍ಗಳನ್ನು ಸಂಗ್ರಹಿಸಿ ಅಧ್ಯಯನ ಮಾಡಿ 3 ತಿಂಗಳಿನಲ್ಲಿ ಸಂಪೂರ್ಣ ವರದಿ ನೀಡುವುದಾಗಿ ತಿಳಿಸಿದ್ದಾರೆ. ಇದಕ್ಕಾಗಿ 30 ಲಕ್ಷ ರು. ವೆಚ್ಚವಾಗಲಿದ್ದು, ಪಾಲಿಕೆ ಅದನ್ನು ಬರಿಸಲಿದೆ. ಬರುವ ದಿನಗಳಲ್ಲಿ ತುಂಗೆಯ ಮಲೀನಕ್ಕೆ ಕಾರಣವಾದ ನಿರ್ದಿಷ್ಟ ಅಂಶಗಳು ಬೆಳಕಿಗೆ ಬರಲಿದೆ ಎಂದರು.

ಒಟ್ಟಾರೆಯಾಗಿ ಶುದ್ಧ ತುಂಗೆಯ ನೀರಿಗೆ ವ್ಯಾಪಾಕವಾದ ಚರ್ಚೆಯೊಂದಿಗೆ ಈ ಸಾಲಿನ ಪಾಲಿಕೆಯ ಸಭೆ ಕೆಲವು ನಿರ್ಣಯಗಳೊಂದಿಗೆ ಅಂತ್ಯಗೊಂಡಿದ್ದು, ಪಾಲಿಕೆಯ ಪಾರಂಪರಿಕ ಕಟ್ಟಡದ ಮುಂದೆ ಆಯುಕ್ತ ಮಾಯಣ್ಣ ಗೌಡ ಹಾಗೂ ಎಲ್ಲಾ ಸದಸ್ಯರು ಸೇರಿ ಛಾಯಾಚಿತ್ರವನ್ನು ಪಡೆದರು. ಇಂದಿನ ಸಭೆಯಲ್ಲಿ ಪಾಲಿಕೆ ಮೇಯರ್ ಶಿವಕುಮಾರ್, ಉಪಮೇಯರ್ ಲಕ್ಷ್ಮೀ ಶಂಕರ್ ನಾಯಕ್ ಮತ್ತಿತರರು ಇದ್ದರು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaShivamoggaNewsTunga Paana Ganga Snanaತುಂಗಾ ಪಾನ ಗಂಗಾ ಸ್ನಾನಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share227Tweet123Send
Previous Post

ಮಾನವೀಯತೆಯ ಪಾಠ ಸಾಲದು, ಅದನ್ನು ಪಾಲಿಸಿ: ಸಿದ್ದರಾಮಯ್ಯಗೆ ಯತ್ನಾಳ್ ಟಾಂಗ್

Next Post

ಗಮನಿಸಿ! ನ.29ರಂದು ಶಿವಮೊಗ್ಗ ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ನ.29ರಂದು ಶಿವಮೊಗ್ಗ ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವಿಐಎಸ್‌ಎಲ್‌ ಕಾರ್ಖಾನೆ ಅಭಿವೃದ್ಧಿಗೆ ಅಗತ್ಯ ಬಂಡವಾಳ: ಕೇಂದ್ರ ಸಚಿವ ಕುಮಾರಸ್ವಾಮಿ ಭರವಸೆ

ವಿಐಎಸ್‌ಎಲ್‌ ಕಾರ್ಖಾನೆ ಅಭಿವೃದ್ಧಿಗೆ ಅಗತ್ಯ ಬಂಡವಾಳ: ಕೇಂದ್ರ ಸಚಿವ ಕುಮಾರಸ್ವಾಮಿ ಭರವಸೆ

June 5, 2026
SWR to run special trains for Good Friday, Easter rush

ಮೈಸೂರು – ಬೆಂಗಳೂರು ವಿಶೇಷ ರೈಲು ಸೇವೆ ಕಾಯಂ

June 5, 2026
ದೃಷ್ಠಿ ಕಳೆದುಕೊಳ್ಳುವ ಸ್ಥಿತಿಯಲ್ಲಿದ್ದ ಯುವತಿ | ಮರುದೃಷ್ಠಿ ನೀಡಿದ ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆ

ದೃಷ್ಠಿ ಕಳೆದುಕೊಳ್ಳುವ ಸ್ಥಿತಿಯಲ್ಲಿದ್ದ ಯುವತಿ | ಮರುದೃಷ್ಠಿ ನೀಡಿದ ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆ

June 5, 2026
ಭಾರತ-ಅಫ್ಘಾನಿಸ್ತಾನ ಟೆಸ್ಟ್ | ರಿಷಭ್ ಪಂತ್‌ಗೆ 50ನೇ ಟೆಸ್ಟ್ ಮೈಲಿಗಲ್ಲು | ಎಂಎಸ್ ಧೋನಿ ಎಲೈಟ್ ಪಟ್ಟಿಗೆ

ಭಾರತ-ಅಫ್ಘಾನಿಸ್ತಾನ ಟೆಸ್ಟ್ | ರಿಷಭ್ ಪಂತ್‌ಗೆ 50ನೇ ಟೆಸ್ಟ್ ಮೈಲಿಗಲ್ಲು | ಎಂಎಸ್ ಧೋನಿ ಎಲೈಟ್ ಪಟ್ಟಿಗೆ

June 5, 2026
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

June 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL