ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬಿಜೆಪಿ ರಾಜ್ಯಾಧ್ಯಕ್ಷರಾದ ನಂತರ ಇದೇ ಮೊದಲ ಬಾರಿಗೆ ತಮ್ಮ ತವರು ಜಿಲ್ಲೆ ಶಿವಮೊಗ್ಗಕ್ಕೆ ಆಗಮಿಸಿರುವ ಬಿ.ವೈ. ವಿಜಯೇಂದ್ರ BYVijayendra ಅವರನ್ನು ನಗರದಲ್ಲಿ ಅದ್ದೂರಿಯಾಗಿ ಪೂರ್ಣಕುಂಭದೊಂದಿಗೆ ಸ್ವಾಗತಿಸಿದ್ದು, ಕಾರ್ಯಕರ್ತರ ಹರ್ಷೋದ್ಗಾರ ಮುಗಿಲುಮುಟ್ಟಿದೆ.
ಇಂದು ಮುಂಜಾನೆ ಜಿಲ್ಲಾ ಬಿಜೆಪಿ ಕಚೇರಿಗೆ ಆಗಮಿಸಿದ ವಿಜಯೇಂದ್ರ ಅವರನ್ನು ಮಹಿಳಾ ಮೋರ್ಚಾ ಕಾರ್ಯಕರ್ತೆಯರು ಪೂರ್ಣಕುಂಭದೊಂದಿಗೆ ಸ್ವಾಗತ ಕೋರಿದರು.
ಬಿಜೆಪಿ ಕಚೇರಿ ರಸ್ತೆಯಲ್ಲಿ ಅದ್ದೂರಿ ಸ್ವಾಗತ ಕೋರಿದ ವೇಳೆ ಕರಾವಳಿಯ ಪ್ರಖ್ಯಾತ ಚಂಡೆ ವಾದ್ಯ ಹೆಚ್ಚಿನ ಮೆರುಗು ನೀಡಿತ್ತು. ಈ ವೇಳೆ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ಸಾವಿರಾರು ಕಾರ್ಯಕರ್ತರ ಹರ್ಷೋದ್ಗಾರ ಮುಗಿಲುಮುಟ್ಟಿತ್ತು.
Also read: ಶಿವಮೊಗ್ಗ | ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ರೈಲ್ವೆ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ
ಮತ್ತೊಮ್ಮೆ ಮೋದಿ ಕೈ ಬಲಪಡಿಸೋಣ
ಈ ವೇಳೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ವಿಜಯೇಂದ್ರ, ಮುಂಬರುವ ಲೋಕಸಭಾ ಚುನಾವಣೆ ನಮ್ಮ ಸವಾಲಾಗಿದೆ. ಮತ್ತೊಮ್ಮೆ ಪ್ರಧಾನಮಂತ್ರಿ ನರೇಂದ್ರ ಮೋದಿ PMNarendraModi ಕೈ ಬಲಪಡಿಸಬೇಕಿದೆ ಅದಕ್ಕಾಗಿ ಎಲ್ಲರೂ ಕೈ ಜೋಡಿಸಬೇಕಿದೆ ಎಂದು ಕರೆ ನೀಡಿದರು.
ಎಲ್ಲರೂ ಒಂದಾಗಿ ಪಕ್ಷವನ್ನು ಇನ್ನಷ್ಟು ಬಲವಾಗಿ ಸಂಘಟಿಸಬೇಕಿದೆ. ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ನಮ್ಮ ಪಕ್ಷದ ಎಲ್ಲ ಅಭ್ಯರ್ಥಿಗಳೂ ಗೆಲುವು ಸಾಧಿಸುವಂತೆ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದರು.
ಸಂಸದ ಬಿ.ವೈ. ರಾಘವೇಂದ್ರ, MPRaghavendra ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ನಗರ ಶಾಸಕ ಎಸ್.ಎನ್. ಚನ್ನಬಸಪ್ಪ, MLA Channabasappa ವಿಧಾನ ಪರಿಷತ್ ಸದಸ್ಯರಾದ ಎಸ್. ರುದ್ರೇಗೌಡ, ಡಿ.ಎಸ್. ಅರುಣ್, ಪ್ರಮುಖರಾದ ಗಿರೀಶ್ ಪಟೇಲ್ ಸೇರಿದಂತೆ ಹಲವರು ಇದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















