ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯದಲ್ಲಿ ಸುಮಾರು ನೂರಕ್ಕೂ ಹೆಚ್ಚು ಸ್ಥಳೀಯ ಸಂಸ್ಥೆಗಳ ಮೊದಲ ಅವಧಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಡಳಿತ ಅವಧಿ ಮುಕ್ತಾಯವಾಗಿ ಹಲವು ತಿಂಗಳು ಕಳೆದರೂ ಇದುವರೆಗೂ ಮೀಸಲು ಪ್ರಕಟಗೊಳಿಸಿಲ್ಲದಿರುವುದರಿಂದ ಚುನಾಯಿತ ಪ್ರತಿನಿಧಿಗಳ ಹಕ್ಕು ಮೊಟಕುಗೊಳಿಸಿದಂತಾಗುತ್ತದೆ. ಹೀಗಾಗಿ ಅಗತ್ಯಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ DSArun ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿದೆ.
ಸ್ಥಳೀಯ ಆಡಳಿತದ ಮೀಸಲು ಕುರಿತ ನಿರ್ಲಕ್ಷ ವಿಳಂಬ ಪರಿಣಾಮ ಅವಧಿ ಮುಗಿದು ಹಲವು ವರ್ಷಗಳಾದರೂ ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ನಡೆದಿಲ್ಲದಿರುವುದರ ಕಾರಣ ಇಂದು ಸುವರ್ಣ ವಿಧಾನಸೌಧ ಬೆಳಗಾವಿಯಲ್ಲಿ ಪೌರಾಡಳಿತ ಸಚಿವ ರಹೀಂಖಾನ್ ಹಾಗೂ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಅಜಯ್ ನಾಗಭೂಷಣ್ ಅವರನ್ನು ಭೇಟಿ ಮಾಡಿ ಸದರಿ ವಿಷಯದ ಗಂಭೀರತೆ ಕುರಿತು ಶೀಘ್ರವಾಗಿ ಮುಖ್ಯಮಂತ್ರಿಗಳೊಡನೆ ಚರ್ಚಿಸಿ ಕೂಡಲೇ ಸ್ಥಳೀಯ ಸಂಸ್ಥೆಯ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಮೀಸಲು ಪಟ್ಟಿಯನ್ನು ಪ್ರಕಟಿಸಬೇಕೆಂದು ವಿನಂತಿಸಿಕೊಂಡರು.
ಈ ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆಯಿಂದ ಆಯ್ಕೆಯಾದ ವಿಧಾನ ಪರಿಷತ್ ಶಾಸಕರಾದ ಸುಜಾ ಕುಶಾಲಪ್ಪ,ಕೆ.ಎಸ್ ನವೀನ್, ಪಿ.ಹೆಚ್. ಪೂಜಾರ್, ಪ್ರದೀಪ್ ಶೆಟ್ಟರ್ ಉಪಸ್ಥಿತರಿದ್ದರು.
Also read: ಸೊರಬ | ಕೇರಳ ಮೂಲದ ಕೂಲಿ ಕಾರ್ಮಿಕನ ಹತ್ಯೆ | ಕಾರಣವೇನು?


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















