ಕಲ್ಪ ಮೀಡಿಯಾ ಹೌಸ್ | ಚೆನ್ನೈ |
ಮಿಚಾಂಗ್ ಚಂಡಮಾರುತದಿಂದ Michong Cyclone ತಮಿಳುನಾಡಿನಲ್ಲಿ ಉಂಟಾದ ಪ್ರವಾಹದ ಪರಿಣಾಮ ಅಪಾರ ಪ್ರಮಾಣದ ಆಸ್ತಿ ನಷ್ಟವಾಗಿದ್ದು, 17 ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಮಿಚಾಂಗ್ ಚಂಡಮಾರುತ ಚೆನ್ನೈನಲ್ಲಿ ಭಾರೀ ಅವಾಂತರವನ್ನೇ ಸೃಷ್ಟಿಸಿದ್ದು, ಕರಪಕ್ಕಂ ಪ್ರದೇಶ ಸಂಪೂರ್ಣ ಜಲಾವೃತಗೊಂಡಿದೆ. ತಮಿಳು ನಟ ವಿಷ್ಣು ವಿಶಾಲ್ ಮನೆಯಲ್ಲಿ ಸಿಲುಕಿದ್ದ ಬಾಲಿವುಡ್ ನಟ ಅಮೀರ್ ಖಾನ್ Actor Amir Khan ಸೇರಿದಂತೆ ಹಲವರನ್ನು 24 ಗಂಟೆಯ ಬಳಿಕ ರಕ್ಷಿಸಲಾಗಿದೆ.
ಈ ಬಗ್ಗೆ ನಟ ವಿಷ್ಣು ವಿಶಾಲ್ Actor Vishnu Vishal ಅವರು ಎಕ್ಸ್‌ನಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದು, ನಟ ವಿಷ್ಣು ವಿಶಾಲ್, ಅಮಿರ್ ಖಾನ್ ಹಾಗೂ ಇತರೆ ಪ್ರವಾಹ ಸಂತ್ರಸ್ತರನ್ನು ರಕ್ಷಣಾ ಸಿಬ್ಬಂದಿ ದೋಣಿಯಲ್ಲಿ ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಪ್ರವಾಹ ಪರಿಹಾರ ಕಾರ್ಯಾಚರಣೆಗಾಗಿ ಚೆನ್ನೈನಲ್ಲಿ ಭಾರತೀಯ ವಾಯುಪಡೆ ಚೇತಕ್ ಹೆಲಿಕಾಪ್ಟರ್‌ಗಳನ್ನು ನಿಯೋಜಿಸಲಾಗಿದ್ದು, ಮಿಚಾಂಗ್ ಚಂಡಮಾರುತದಿಂದ ಯಾವ ಪ್ರದೇಶದಲ್ಲಿ ಎಷ್ಟು ಹಾನಿಯಾಗಿದೆ ಎಂಬ ಬಗ್ಗೆ ಭಾರತೀಯ ವಾಯುಪಡೆ ವಾಯುಸಮೀಕ್ಷೆ ನಡೆಸಿದೆ.
ಅಡ್ಯಾರ್‌ನ ಸಾಮಾನ್ಯ ಪ್ರದೇಶದಲ್ಲಿ ಮತ್ತು ಚೆನ್ನೈ ಬಂದರಿನ ಸಮೀಪದಲ್ಲಿ ಪರಿಹಾರ ಸಾಮಗ್ರಿಗಳನ್ನು ವಿತರಿಸಲಾಗಿದ್ದು, ಪರಿಹಾರ ಸಾಮಗ್ರಿಗಳೊಂದಿಗೆ ಎರಡು ಹೆಲಿಕಾಪ್ಟರ್‌ಗಳನ್ನು ನಿನ್ನೆ ಸಂಜೆ ತಡವಾಗಿ ಉಡಾವಣೆ ಮಾಡಲಾಯಿತು ಎಂದು ಭಾರತೀಯ ವಾಯುಪಡೆ ಹೇಳಿಕೆಯಲ್ಲಿ ತಿಳಿಸಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















