ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ |
ಡಾ. ಬಿ. ಆರ್ ಅಂಬೇಡ್ಕರ್ Dr.B.R. Ambedkar ಅವರು ಸಾವಿರಾರು ಸಂಕಟಗಳು ಬಂದರು, ಸಹನೆ ಮೀರದೆ, ಸಾಧನೆಯ ಹಾದಿಯಲ್ಲಿ ಸಾಗಿದವರು. ಅವರು ಭಾರತೀಯ ಸಾಮಾಜಿಕ ಸ್ಥರವಿನ್ಯಾಸದ ಕೂಪದಲ್ಲಿ ನರಳಿ, ನರಳಿ ಅರಳಿದ್ದು ಒಂದು ರೀತಿ ವಿಸ್ಮಯವೇ ಸರಿ. ಭಾರತೀಯ ಸಾಮಾಜಿಕ ವ್ಯವಸ್ಥೆಯ ನಾಡಿಮಿಡಿತವನ್ನು ಅರಿತು, ಮಾನವೀಯತೆಯ ಔಷಧಿಯನ್ನು ನೀಡಿದ ಸಾಮಾಜಿಕ ವೈದ್ಯರು. ಅಂಬೇಡ್ಕರ್ ಅವರದು ಅಂತಹ ಅನುಭವರೂಪಿತ ವ್ಯಕ್ತಿತ್ವವೆಂದು ಖ್ಯಾತ ಸಾಹಿತಿ ಡಾ. ಅರ್ಜುನ ಗೋಳಸಂಗಿ ಅವರು ಅಭಿಪ್ರಾಯಪಟ್ಟರು.
ಕುವೆಂಪು ವಿಶ್ವವಿದ್ಯಾಲಯದ Kuvempu University ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರವು ಬಸವ ಸಭಾಭವನದಲ್ಲಿ ಏರ್ಪಡಿಸಿದ್ದ ಅಂಬೇಡ್ಕರ್ ಅವರ 67ನೇ ಮಹಾ ಪರಿನಿಬ್ಬಾಣ ದಿನದ ನಿಮ್ಮಿತ ಏರ್ಪಡಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ “ಡಾ.ಬಿ.ಆರ್.ಅಂಬೇಡ್ಕರ್ ವ್ಯಕ್ತಿತ್ವ”ಕುರಿತು ಮಾತನಾಡಿದರು.
ದಾರಿ ತಪ್ಪಿಸುತ್ತಿರುವ ಮತ್ತು ದಾರಿ ತಪ್ಪ್ಪಿರುವವರಿಗೆ ದಾರಿ ತೋರಿಸುವರು ಡಾ. ಬಿ.ಆರ್.ಅಂಬೇಡ್ಕರ್ ಅವರು. ಅಕ್ಷರ, ಅರಿವು, ಆಚಾರಗಳನ್ನು ಪರಿಶುದ್ಧತೆಯಿಂದ ಸಂಪಾದಿಸಿಕೊಳ್ಳಲು ಪ್ರೇರಕರಾದವರು. ಇಡೀ ಜಗತ್ತೇ ಅಚ್ಚರಿ ಪಡುವಂತಹ ಬೌದ್ಧಿಕ ಶಕ್ತಿಯನ್ನು ಅಂಬೇಡ್ಕರ್ ಅವರು ಸಂಪಾದಿಸಿದವರು. ಛಲದ ವ್ಯಕ್ತಿತ್ವ ಅಂಬೇಡ್ಕರ್ ಅವರದು ಎಂದು ತಿಳಿಸಿದರು.
Also read: ಡಿ.8ರಂದು ಸಾರ್ಥಕ ಸುವರ್ಣ: ಸಂಸದ ರಾಘವೇಂದ್ರ ಅವರಿಗೆ ಅಭಿನಂದನಾ ಕಾರ್ಯಕ್ರಮ
ಕಾರ್ಯಕ್ರಮ ಉದ್ಘಾಟಿಸಿದ ಕುಲಪತಿ ಪ್ರೊ.ಎಸ್. ವೆಂಕಟೇಶ್ ಮಾತನಾಡಿ, ಅಂಬೇಡ್ಕರ್ ಅವರ ಜೀವನಚರಿತ್ರೆಯೆಂದರೆ ವಿರೂಪಗೊಂಡಿರುವ ಭಾರತೀಯ ಸಾಮಾಜಿಕ ಸ್ವರೂಪವನ್ನು ಸುರೂಪಗೊಳಿಸುವ ಪ್ರಯತ್ನದ ಚರಿತ್ರೆ. ಅದು ಅನನ್ಯವಾದುದು. ಸಂಶೋಧಕರು, ಸಂಸ್ಕೃತಿ ಚಿಂತಕರು, ಸಮಸಮಾಜದ ಕನಸುಗಾರರು ಆದ ಅಂಬೇಡ್ಕರ್ ಅವರು ದೃಷ್ಟಿ ಧೋರಣೆಗಳನ್ನು ಸಮಗ್ರವಾಗಿ ಅಭ್ಯಸಿಸಿದಾಗ ಅವರ ವಿದ್ವತ್, ಬರವಣಿಗೆಯ ಶಕ್ತಿ, ಚಿಂತನೆಗಳ ಒಳನೋಟಗಳು ಅಚ್ಚರಿಗೊಳಿಸುತ್ತವೆ ಎಂದರು.
ಈ ಸಂದರ್ಭದಲ್ಲಿ ವಿವಿಯ ಪರೀಕ್ಷಾಂಗ ಕುಲಸಚಿವರಾದ ಪ್ರೊ. ಎಸ್. ಎಂ. ಗೋಪಿನಾಥ್, ಹಣಕಾಸು ಅಧಿಕಾರಿ ಜಿ. ಬಂಗಾರಪ್ಪ, ಲೆಕ್ಕಪರಿಶೋಧನಾ ಇಲಾಖೆಯ ಜಂಟಿನಿರ್ದೇಶಕರಾದ ಕೆ.ಎಚ್. ಓಂಕಾರಪ್ಪ, ಡಾ.ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕರಾದ ಡಾ. ನೆಲ್ಲಿಕಟ್ಟೆ ಎಸ್. ಸಿದ್ದೇಶ್ ಮಾತನಾಡಿದರು. ಕಲಾನಿಕಾಯದ ಡೀನರಾದ ಪ್ರೊ. ಗುರುಲಿಂಗಯ್ಯ, ಡಾ. ಶಿವಾನಂದ ಕೆಳಗಿನಮನಿ, ವಿವಿಯ ವಿವಿಧ ವಿಭಾಗಗಳ ಸಂಶೋಧನಾರ್ಥಿಗಳು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post