ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿದ್ಯಾನಗರದಲ್ಲಿ ಅಂತಿಮ ಹಂತದ ಕಾಮಗಾರಿಯಲ್ಲಿರುವ ವೃತ್ತಾಕಾರದ ರೈಲ್ವೆ ಮೇಲ್ಸೇತುವೆ ಜನವರಿಯಲ್ಲಿ ಲೋಕಾರ್ಪಣೆಯಾಗಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ MPRaghavendra ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಮುಂದಿನ ವಾರದಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಲಿದ್ದೇನೆ. ಮೇಲ್ಸೇತುವ ಉದ್ಘಾಟನೆ ಕುರಿತು ಅವರೊಂದಿಗೆ ಚರ್ಚೆ ನಡೆಸಿ, ದಿನಾಂಕ ನಿಗದಿಪಡಿಸಿ, ಅವರನ್ನು ಆಹ್ವಾನಿಸುತ್ತೇನೆ ಎಂದರು.
ಬಹುತೇಕ ಜನವರಿ ಮೊದಲ ವಾರದಲ್ಲಿ ಮೇಲ್ಸೇತುವೆ ಉದ್ಘಾಟನೆಯಾಗುವ ಎಲ್ಲ ಸಾಧ್ಯತೆಗಳಿವೆ ಎಂದಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















