ವಿರೋಧ ಪಕ್ಷವಾಗಿ ಸಮರ್ಥವಾಗಿ ಸದನದಲ್ಲಿ ಕೆಲಸ ನಿರ್ವಹಿಸಲು ಬಿಜೆಪಿ ವಿಫಲವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಸುಂದರೇಶ್ ಹೇಳಿದರು.
ಅವರು ಇಂದು ಕಾಂಗ್ರೆಸ್ ಕಚೇರಿಯಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಹಲವು ಸಮಸ್ಯೆಗಳು ಇವೆ, ಬರಗಾಲ ಬಂದಿದೆ, ರೈತರು ಸಂಕಷ್ಠದಲ್ಲಿದ್ದಾರೆ, ಕುಡಿಯುವ ನೀರಿಗೆ ತೊಂದರೆ ಇದೆ ಹೀಗೆ ಹಲವು ಸಮಸ್ಯೆಗಳಿಗೆ ಸಂಬಂಧಿಸಿದಂತೆ ಗಂಭೀರ ಚರ್ಚೆ ಮಾಡುವುದು ಬಿಟ್ಟು ಬೇಡವಾದ ವಿಚಾರವನ್ನು ಎತ್ತಿಕೊಂಡು ಸದನದ ಸಮಯವನ್ನು ಸಂಪೂರ್ಣವಾಗಿ ಹಾಳುಗೆಡವಿದ್ದಾರೆ ಎಂದು ಆರೋಪಿಸಿದರು.

ಶಿವಮೊಗ್ಗ ಕ್ಷೇತ್ರದ ಲೋಕಸಭಾ ಚುನಾವಣೆಗೆ ನಾನು ಪ್ರಬಲ ಅಭ್ಯರ್ಥಿಯಾಗಿದ್ದೇನೆ. ಈ ಬಗ್ಗೆ ಟಿಕೇಟ್ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ಇದ್ದೇನೆ. ಪಕ್ಷವನ್ನು ಸಂಘಟಿಸಿದ ಅನುಭನ ನನಗಿದೆ. ನಾನು ಕೂಡ ಪಕ್ಷಕ್ಕಾಗಿ ದುಡಿದಿದ್ದೇನೆ. ಟಿಕೇಟ್ ಸಿಕ್ಕೆ ಸಿಗುತ್ತದೆ ಎಂಬ ವಿಶ್ವಾಸವಿದೆ. ಎಂ.ಪಿ. ಸ್ಥಾನಕ್ಕಾಗಿ ಕಾಂಗ್ರೆಸ್‍ನಲ್ಲಿ ನನ್ನ ಹಾಗೆಯೇ ಹಲವರು ಆಕಾಂಕ್ಷಿಗಳಿದ್ದಾರೆ ಎನ್ನುವುದು ನಿಜ. ಹೈಕಮಾಂಡ್ ಏನು ನಿರ್ಧಾರ ಕೈಗೊಳ್ಳುತ್ತದೆಯೋ ಅದಕ್ಕೆ ನಾವು ಬದ್ಧರಾಗಿದ್ದೇವೆ. ಯಾರಿಗೆ ಟಿಕೇಟ್ ಸಿಕ್ಕರೂ ಕೂಡ ಅವರನ್ನು ಗೆಲ್ಲಿಸುತ್ತೇವೆ. ಈ ಬಾರಿ ಶಿವಮೊಗ್ಗವು ಸೇರಿದಂತೆ ರಾಜ್ಯದಲ್ಲಿ ಅತಿ ಹೆಚ್ಚು ಎಂ.ಪಿ. ಸ್ಥಾನವನ್ನು ನಾವು ಗೆಲ್ಲುತ್ತೇವೆ.ಎಚ್.ಎಸ್. ಸುಂದರೇಶ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ

Also read: ರಾಜ್ಯದಲ್ಲಿ ಯಾವುದೇ ಸರ್ಕಾರವಿದ್ದರೂ ಶಿವಮೊಗ್ಗ ಕ್ಷೇತ್ರದ ಅಭಿವೃದ್ಧಿಗೆ ಸದಾ ಬದ್ಧ: ಸಂಸದ ರಾಘವೇಂದ್ರ
ರಾಜ್ಯಸ್ಥಾನ ಮಧ್ಯಪ್ರದೇಶ ಚುನಾವಣಾ ಫಲಿತಾಂಶಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು ಇ.ವಿ.ಎಂ. ಮಿಷನ್‍ಗಳ ದುರುಪಯೋಗವಾಗುತ್ತಿದೆ ಎಂದು ದೂರುಗಳು ಕೇಳಿ ಬರುತ್ತಿದೆ. ಈಗಾಗಲೇ ಸಂಶಯ ಭಲವಾಗುತ್ತಿದೆ. ಈ ತಾಂತ್ರಿಕ ಕಾಲದಲ್ಲಿ ಏನು ಬೇಕಾದರೂ ಮಾಡಬಹುದು. ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮಾತನ್ನು ಕೇಳುತ್ತಿದೆ. ಇವಿಎನ್ ಮಿಷನ್ ಬಿಟ್ಟು ಬ್ಯಾಲೆಟ್ ಪೇಪರ್‍ನಲ್ಲಿ ಮತ ಚಲಾವಣೆಯಾಗಬೇಕು ಎಂಬುವುದು ನಮ್ಮ ಒತ್ತಾಯ. ಆದರೆ ಇದಕ್ಕೆ ಬಿಜೆಪಿ ಒಪ್ಪುತ್ತಿಲ್ಲ. ಚುನಾವಣಾ ಆಯೋಗದ ಬಗ್ಗೆ ನಮಗೆ ನಂಬಿಕೆ ಇಲ್ಲಾ ಆದ್ದರಿಂದ ಈ ಚುನಾವಣೆಗೆ ಸಂಬಂಧಿಸಿದಂತೆ ಇವಿಎಂ ದುರುಪಯೋಗವಾದ ಬಗ್ಗೆ ಸುಪ್ರೀಂ ಕೋರ್ಟ್‍ನ ಮೊರೆ ಹೋಗುತ್ತೇವೆ ಎಂದರು.

ಪತ್ರಿಕಾ ಗೋಷ್ಠಿಯಲ್ಲಿ ಪ್ರಮುಖರಾದ ಚಂದ್ರಭೂಪಾಲ್, ಎಸ್.ಟಿ. ಚಂದ್ರಶೇಖರ್, ಈಕ್ಕೇರಿ ರಮೇಶ್, ಮುಜೀಬ್, ಚಂದನ್, ಖಲೀಂ ಪಾಶಾ, ಶಾಮೀನ್ ಬಾನು, ಎನ್.ಡಿ. ಪ್ರವೀಣ್ ಕುಮಾರ್ ಸೇರಿದಂತೆ ಹಲವರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp:






Discussion about this post