No Result
View All Result
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp
English Articles

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

by ಕಲ್ಪ ನ್ಯೂಸ್
March 18, 2026
0

Kalpa Media House  |  Manipal | Manipal Institute of Technology (MIT), Manipal, a constituent unit of Manipal Academy of Higher...

Read moreDetails
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
  • Advertise With Us
  • Grievances
  • About Us
  • Contact Us
Wednesday, March 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹಾಸನ

ನಿವೃತ್ತ ಮುಖ್ಯ ಅರಣ್ಯ ಪರಿಪಾಲಕರ ನೇತೃತ್ವದ ಸಮಿತಿಯಿಂದ ಅರ್ಜುನನ ಸಾವಿನ ತನಿಖೆ: ಈಶ್ವರ ಖಂಡ್ರೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 11, 2023
in ಹಾಸನ
0
ನಿವೃತ್ತ ಮುಖ್ಯ ಅರಣ್ಯ ಪರಿಪಾಲಕರ ನೇತೃತ್ವದ ಸಮಿತಿಯಿಂದ ಅರ್ಜುನನ ಸಾವಿನ ತನಿಖೆ: ಈಶ್ವರ ಖಂಡ್ರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಹಾಸನ |

ಯಸಳೂರು ಅರಣ್ಯ ವಲಯದಲ್ಲಿ ಕಾರ್ಯಾಚರಣೆ ವೇಳೆ ಕಾಡಾನೆ ದಾಳಿ ಮಾಡಿದರೂ, ಅರಣ್ಯ ಸಿಬ್ಬಂದಿಯನ್ನು ರಕ್ಷಿಸಲು ಏಕಾಂಗಿಯಾಗಿ ಹೋರಾಡಿ ಹುತಾತ್ಮನಾದ ಕ್ಯಾಪ್ಟನ್ ಅರ್ಜುನನ ಸಾವಿನ ಕುರಿತಂತೆ ಕೆಲವರು ಅನುಮಾನ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ನಿವೃತ್ತ ಮುಖ್ಯ ಅರಣ್ಯ ಪರಿಪಾಲಕರ ನೇತೃತ್ವದ ಉನ್ನತ ತನಿಖಾ ಸಮಿತಿ ರಚಿಸಲಾಗಿದ್ದು, 15 ದಿನಗಳಲ್ಲಿ ವರದಿ ನೀಡುವಂತೆ ತಿಳಿಸಲಾಗಿದೆ. ಸಮಿತಿ ವರದಿ ಸಲ್ಲಿಸಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ Minister Eshwarkhandre ತಿಳಿಸಿದ್ದಾರೆ.

ಹಾಸನ ಜಿಲ್ಲೆ ಯಸಳೂರು ಅರಣ್ಯದ ನೆಡುತೋಪಿಗೆ ಭೇಟಿ ನೀಡಿ, ಅರ್ಜುನ ಆನೆಯ ಸಮಾಧಿಗೆ ಪುಷ್ಪ ನಮನ ಹಾಗೂ ಶ್ರದ್ಧಾಂಜಲಿ ಸಲ್ಲಿಸಿದ ತರುವಾಯ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರ ಖಂಡ್ರೆ, ಅರ್ಜುನನ ಸಾವು ನಮಗೆಲ್ಲರಿಗೂ ಅತ್ಯಂತ ದುಃಖದ ವಿಷಯವಾಗಿದೆ. ಅರ್ಜುನ ಅರಣ್ಯ ಇಲಾಖೆಯ ಅಚ್ಚುಮೆಚ್ಚಿನ ಆನೆಯಾಗಿತ್ತು. ಎಲ್ಲ ಕಾರ್ಯಾಚರಣೆಗೂ ಮೊದಲ ಆದ್ಯತೆಯಾಗಿತ್ತು ಎಂದರು.
ಕಾಡಾನೆ ಕಾರ್ಯಾಚರಣೆಯ ವೇಳೆ ಅಧಿಕಾರಿಗಳು ಎಲ್ಲ ಮಾನದಂಡ ಅನುಸರಿಸಿದ್ದಾರೆ. ಆದರೂ ಕೆಲವರು ಕಾರ್ಯಾಚರಣೆ ವೇಳೆ ಲೋಪವಾಗಿದೆ, ಸಾಕಾನೆಗೆ ಅರವಳಿಕೆ ಚುಚ್ಚುಮದ್ದು ತಾಕಿದೆ ಎಂದು ಆರೋಪಿಸಿದ್ದಾರೆ. ಹೀಗಾಗಿ ಈ ಕಾರ್ಯಾಚರಣೆಯಲ್ಲಿ ಪ್ರಮಾಣಿತ ಕಾರ್ಯಾಚರಣೆ ವಿಧಾನ (ಎಸ್.ಓ.ಪಿ.)ದಲ್ಲಿ ಲೋಪವಾಗಿದೆಯೇ, ಅರ್ಜುನನಿಗೆ ಆಕಸ್ಮಿಕವಾಗಿ ತೋಟ ತಾಗಿದೆಯೇ ಎಂಬ ನಿಟ್ಟಿನಲ್ಲೂ ಪಾರದರ್ಶಕವಾಗಿ ತನಿಖೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಯಸಳೂರು, ಬಳ್ಳೆಯಲ್ಲಿ ಸ್ಮಾರಕ:
ಅರ್ಜುನನ ಅಂತ್ಯ ಸಂಸ್ಕಾರ ನಡೆದ ಸಕಲೇಶಪುರ ತಾಲೂಕಿನ ಯಸಳೂರಿನಲ್ಲಿ ಮತ್ತು ಅರ್ಜುನ ಇಷ್ಟು ದಿನಗಳ ಕಾಲ ವಾಸವಾಗಿದ್ದ, ನಾಗರಹೊಳೆಯ ಬಳ್ಳೆಯಲ್ಲಿ ಎರಡು ಸ್ಮಾರಕ ನಿರ್ಮಾಣ ಮಾಡಲಾಗುವುದು ಎಂದರು.

Also read: ಯುವಕರು ಮಾತ್ರ ಸಮಾಜ ಮತ್ತು ದೇಶವನ್ನು ಉನ್ನತಿಗೊಯ್ಯಲು ಸಾಧ್ಯ : ಅಮಿತ್ ಶಾ

ಈ ಸ್ಮಾರಕಗಳಲ್ಲಿ ಅರ್ಜುನ ಚಿನ್ನದ ಅಂಬಾರಿ ಹೊತ್ತ ಚಿತ್ರಗಳು, ಅರ್ಜುನ ವಿವಿಧ ಆನೆ ಕಾರ್ಯಾಚರಣೆ, ಹುಲಿ ಮತ್ತು ಚಿರತೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಚಿತ್ರಗಳನ್ನು ಹಾಕುವ ಮೂಲಕ ಜನರ ಮನದಲ್ಲಿ ಅರ್ಜುನನ ಸಾಹಸ, ಸೇವೆ, ಕೊಡುಗೆ ಚಿರಸ್ಥಾಯಿಯಾಗಿ ಉಳಿಯುವಂತೆ ಮಾಡಲಾಗುವುದು ಎಂದು ಹೇಳಿದರು.
ಹಾಸನ ಜಿಲ್ಲೆಗೆ ಕಾಡಾನೆಗಳ ಹಿಂದು ಬಂದಿರುವ ಹಿನ್ನೆಲೆಯಲ್ಲಿ ಜನರು ಭಯಭೀತರಾಗಿದ್ದು, ಕಳೆದ ನ.24 ರಿಂದಲೇ ಆನೆ ಹಿಮ್ಮೆಟ್ಟಿಸಲು ಕಾರ್ಯಾಚರಣೆ ನಡೆಸಲಾಗುತ್ತಿದೆ, ಈವರೆಗೆ 5 ಆನೆಗಳನ್ನು ಹಿಡಿದು ರೇಡಿಯೋ ಕಾಲರ್ ಅಳವಡಿಸಲಾಗಿದೆ. ಈ ದುರ್ಘಟನೆ ಅನಿರೀಕ್ಷಿತ. ಇಡೀ ನಾಡಿಗೆ ಆಘಾತ ತಂದಿದೆ ಎಂದರು.

ವನ್ಯಜೀವಿಗಳ ಸೆರೆ ಕಾರ್ಯಾಚರಣೆ ಅತ್ಯಂತ ಅಪಾಯಕಾರಿ ಹಾಗೂ ಕಷ್ಟಕರವಾದದು, ಅರಣ್ಯ ಅಧಿಕಾರಿಗಳು ಎಚ್ಚರಿಕೆ ವಹಿಸಿದ್ದಾಗ್ಯೂ ದುರ್ಘಟನೆ ಸಂಭವಿಸಿದೆ, ಇನ್ನು ಮುಂದೆ ಈ ರೀತಿ ಅವಘಡಗಳು ಸಂಭವಿಸದಂತೆ ಕಟ್ಟು ನಿಟ್ಟಾಗಿ ಪ್ರಮಾಣಿತ ಕಾರ್ಯಾಚರಣೆ ವಿಧಾನ ಅನುಸರಿಸಲು, ಜಾಗರೂಕತೆ ವಹಿಸಲು ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.

ದೇಶದಲ್ಲಿಯೇ ಅತಿ ಹೆಚ್ಚು ಆನೆಗಳು ಕರ್ನಾಟಕದಲ್ಲಿವೆ. ಸುಮಾರು 6395 ಕಾಡಾನೆಗಳು ನಮ್ಮ ರಾಜ್ಯದಲ್ಲಿವೆ. ವನ್ಯ ಮೃಗಗಳು ಕಾಡಿನಿಂದ ಆಚೆ ಬರುತ್ತಿರುವುದಕ್ಕೆ ಕಾಡು ನಾಡಾಗುತ್ತಿರುವುದೂ ಒಂದು ಕಾರಣ. ನಾಗರೀಕರಣ ಹೆಚ್ಚಾದಂತೆ ಇಂತಹ ಸಮಸ್ಯೆಗಳು ಉದ್ಭವಿಸುತ್ತಿದೆ. ಕಾಡಾನೆ ಸಮಸ್ಯೆ ತಡೆಯುವ ನಿಟ್ಟಿನಲ್ಲಿ ಹಾಗೂ ವನ್ಯಜೀವಿಗಳ ಉಪಟಳ ನಿಯಂತ್ರಿಸಲು ಹಂತ ಹಂತವಾಗಿ ಇಲಾಖೆ ಕ್ರಮ ಕೈಗೊಳ್ಳಲಿದೆ.ಈಗಾಗಲೇ ಕಾಡಾನೆ ನಾಡಿಗೆ ಬಾರದಂತೆ ತಡೆಯಲು ಕಂದಕ ನಿರ್ಮಾಣ, ಸೌರ ತಂತಿ ಬೇಲಿ ಮತ್ತು ರೈಲ್ವೆ ಬ್ಯಾರಿಕೇಡ್ ಅಳವಡಿಸಲಾಗುತ್ತಿದೆ ಎಂದರು.
ಹೊರಗುತ್ತಿಗೆ ಸಿಬ್ಬಂದಿಗೆ ಸಕಾಲದಲ್ಲಿ ವೇತನ:
ಅರಣ್ಯ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಪ್ರತಿ ತಿಂಗಳೂ ನಿಗದಿತ ದಿನಾಂಕದೊಳಗೆ ಸಂಬಳ ಪಾವತಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಈ ಸಿಬ್ಬಂದಿಗಳಿಗೆ ಸಮವಸ್ತ್ರ ಹಾಗೂ ರಕ್ಷಣಾ ಸಲಕರಣೆ ಸೇರಿದಂತೆ ಎಲ್ಲ ರೀತಿಯ ಸೌಕರ್ಯವನ್ನು ಒದಗಿಸಲೂ ತಿಳಿಸಲಾಗಿದೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜಿತಾ, ಹಿರಿಯ ಐ.ಪಿ.ಎಸ್. ಅಧಿಕಾರಿ ಸುಭಾಷ್ ಮಾಲ್ಕಡೆ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸಂರಕ್ಷಣಾಧಿಕಾರಿ ಆರ್.ರವಿಶಂಕರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಮೋಹನ್ ಕುಮಾರ್ ಮತ್ತಿತರರು ಹಾಜರಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು
Kalahamsa Infotech private limited
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
    

Tags: HassanKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaMinister EshwarkhandreNewsinKannadaNewsKannadaಸಚಿವ ಈಶ್ವರ ಖಂಡ್ರೆಹಾಸನ
Share197Tweet123Send
Previous Post

ಯುವಕರು ಮಾತ್ರ ಸಮಾಜ ಮತ್ತು ದೇಶವನ್ನು ಉನ್ನತಿಗೊಯ್ಯಲು ಸಾಧ್ಯ : ಅಮಿತ್ ಶಾ

Next Post

ಶರಾವತಿ ಸಂತ್ರಸ್ತರಿಗೆ ಭೂ ಹಕ್ಕು ಕೊಡಿ: ಸಮುದಾಯದ ಪರವಾಗಿ ಸಚಿವ ಮಧು ಬಂಗಾರಪ್ಪ ಕೈ ಮುಗಿದು ಮನವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶರಾವತಿ ಸಂತ್ರಸ್ತರಿಗೆ ಭೂ ಹಕ್ಕು ಕೊಡಿ: ಸಮುದಾಯದ ಪರವಾಗಿ ಸಚಿವ ಮಧು ಬಂಗಾರಪ್ಪ ಕೈ ಮುಗಿದು ಮನವಿ

ಶರಾವತಿ ಸಂತ್ರಸ್ತರಿಗೆ ಭೂ ಹಕ್ಕು ಕೊಡಿ: ಸಮುದಾಯದ ಪರವಾಗಿ ಸಚಿವ ಮಧು ಬಂಗಾರಪ್ಪ ಕೈ ಮುಗಿದು ಮನವಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
National Safety Week 2026 Observed at Carriage Repair Workshop, Hubballi

National Safety Week 2026 Observed at Carriage Repair Workshop, Hubballi

March 18, 2026
7 ತಿಂಗಳಲ್ಲಿ 355 ವಿಶೇಷ ರೈಲುಗಳ ಸಂಚಾರದಿಂದ ನೈಋತ್ಯ ರೈಲ್ವೆ ಗಳಿಸಿದ್ದು ಎಷ್ಟು ಕೋಟಿ ಆದಾಯ?

ಹುಬ್ಬಳ್ಳಿ | ರೈಲ್ವೆ ಇಲಾಖೆ ಪರೀಕ್ಷೆ ಮುಂದೂಡಿಕೆ

March 18, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಯುಗಾದಿ ಹಬ್ಬ ಹಿನ್ನೆಲೆ: ಯಶವಂತಪುರ ಮತ್ತು ಹೊಸಪೇಟೆ ನಡುವೆ ವಿಶೇಷ ರೈಲು ಸೇವೆ

March 18, 2026
ನವೋದಯ ಪ್ರವೇಶ ಪರೀಕ್ಷೆ | ಅಪೂರ್ವಗೆ ಉತ್ತಮ ಅಂಕ

ನವೋದಯ ಪ್ರವೇಶ ಪರೀಕ್ಷೆ | ಅಪೂರ್ವಗೆ ಉತ್ತಮ ಅಂಕ

March 18, 2026
ಬಡವರ ಆರೋಗ್ಯದ ಜೊತೆ ಸರ್ಕಾರದ ಚೆಲ್ಲಾಟ | ಉಗ್ರಾಣಗಳಲ್ಲಿ 7 ತಿಂಗಳಾದರೂ ಔಷಧಿ ಪೂರೈಕೆಯಿಲ್ಲ: ಶಾಸಕ ಡಾ. ಧನಂಜಯ ಸರ್ಜಿ

ಬಡವರ ಆರೋಗ್ಯದ ಜೊತೆ ಸರ್ಕಾರದ ಚೆಲ್ಲಾಟ | ಉಗ್ರಾಣಗಳಲ್ಲಿ 7 ತಿಂಗಳಾದರೂ ಔಷಧಿ ಪೂರೈಕೆಯಿಲ್ಲ: ಶಾಸಕ ಡಾ. ಧನಂಜಯ ಸರ್ಜಿ

March 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL