ಕಲ್ಪ ಮೀಡಿಯಾ ಹೌಸ್ | ಕರಾಚಿ |
ಭಾರತಕ್ಕೆ ಬೇಕಿದ್ದ ಮೋಸ್ಟ್ ವಾಂಟೆಡ್ ಮೊತ್ತೊಬ್ಬ ಉಗ್ರ ಪಾಕಿಸ್ಥಾನದಲ್ಲಿ ಅಪರಿಚಿತರ ಗುಂಡಿನ ದಾಳಿಗೆ ಹತ್ಯೆಯಾಗಿದ್ದಾನೆ.
ಲಷ್ಕರ್-ಎ-ತೊಯ್ಬಾದ Lashkar-A-Thoiba ಟಾಪ್ ಕಮಾಂಡರ್ ಅದ್ನಾನ್ ಅಹ್ಮದ್ ಅಲಿಯಾಸ್ ಹಂಜಾಲಾ ಅದ್ನಾನ್’ನನ್ನು ಪಾಕಿಸ್ಥಾನದ ಕರಾಚಿಯಲ್ಲಿ ಅಪರಚಿತರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಈತ 2015ರಲ್ಲಿ ಜಮ್ಮು ಮತ್ತು ಕಾಶ್ಮೀರದ ಉಧಮ್ಪುರ ಮತ್ತು 2016ರಲ್ಲಿ ಪಾಂಪೋರ್ನಲ್ಲಿ ಸಿಆರ್’ಪಿಎಫ್ ಬೆಂಗಾವಲು ಪಡೆಯ ಮೇಲಿನ ದಾಳಿಯ ಮಾಸ್ಟರ್ ಮೈಂಡ್ ಆಗಿದ್ದ. ಪಾಂಪೋರ್ ದಾಳಿಯಲ್ಲಿ 8 ಯೋಧರು ಹುತಾತ್ಮರಾಗಿದ್ದರೆ, 22ಕ್ಕೂ ಹೆಚ್ಚು ಯೋಧರು ಗಾಯಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post