ಕಲ್ಪ ಮೀಡಿಯಾ ಹೌಸ್ | ಚಿಕ್ಕಬಳ್ಳಾಪುರ |
ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ದಂಪತಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಿಂತಾಮಣಿ ತಾಲೂಕಿನ ನಾಯಿಂದ್ರಹಳ್ಳಿ ಗ್ರಾಮದ ಗೇಟ್ ಬಳಿಯಲ್ಲಿ ಅಪಘಾತ ಸಂಭವಿಸಿದ್ದು, ಬೈಕ್ ಸವಾರನ ಅಜಾಗರೂಕ ಚಾಲನೆಯೇ ದುರ್ಘಟನೆಗೆ ಕಾರಣ ಎಂದು ಹೇಳಲಾಗಿದೆ.
ಮೃತರನ್ನು ಸುಬ್ಬರಾಮಪ್ಪ(60), ಗಾಯಿತ್ರಮ್ಮ(40) ಎಂದು ಗುರುತಿಸಲಾಗಿದೆ. ಮೃತ ದಂಪತಿ ಕೋಲಾರ ತಾಲೂಕಿನ ಚನ್ನಸಂದ್ರ ಗ್ರಾಮದವರು ಎಂದು ಹೇಳಲಾಗಿದೆ.
Also read: ಹೃದಯಾಘಾತಕ್ಕೆ ಬಲಿಯಾದನೇ ಖಲಿಸ್ಥಾನ್ ಉಗ್ರ ಲಖ್ಬೀರ್ ಸಿಂಗ್?
ಸ್ಥಳಕ್ಕೆ ಚಿಂತಾಮಣಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















