ಕಲ್ಪ ಮೀಡಿಯಾ ಹೌಸ್ | ಅಲಹಾಬಾದ್ |
ಮಹತ್ವದ ಬೆಳಣಿಗೆಯೊಂದರಲ್ಲಿ ಉತ್ತರ ಪ್ರದೇಶದ #UttarPradesh ಮಥುರಾದಲ್ಲಿರುವ #Mathura ಶ್ರೀಕೃಷ್ಣ ಜನ್ಮಭೂಮಿ ದೇಗುಲ ಪಕ್ಕದಲ್ಲಿರುವ ಶಾಹಿ ಈದ್ಗಾ ಸಂಕೀರ್ಣದ #ShahiIdgaComplex ಪ್ರಾಥಮಿಕ ಸಮೀಕ್ಷೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಈ ಕುರಿತಂತೆ ಮಾದ್ಯಮಗಳಿಗೆ ಮಾಹಿತಿ ನೀಡಿರುವ ಹಿಂದೂಗಳ ಪರ ವಕೀಲ ವಿಷ್ಣು ಶಂಕರ್ ಜೈನ್, ಅಲಹಾಬಾದ್ ಹೈಕೋರ್ಟ್ ನೀಡಿರುವ ಆದೇಶಕ್ಕೆ ಸುಪ್ರೀಂ ಕೋರ್ಟ್ #SupremeCourt ತಡೆ ನೀಡಲು ನಿರಾಕರಿಸಿದೆ ಎಂದಿದ್ದಾರೆ.
ವಿಚಾರಣೆಗೆ ತಡೆಯಾಜ್ಞೆ ನೀಡಲು ನಿರಾಕರಿಸಿರುವ ಸುಪ್ರೀಂಕೋರ್ಟ್, ಜನವರಿ 9 ರಂದು ವರ್ಗಾವಣೆ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ.
ಅಲಹಾಬಾದ್ #Alahabad ಹೈಕೋರ್ಟ್ ನೀಡಿರುವ ಆದೇಶಕ್ಕೆ ಸುಪ್ರೀಂ ಕೋರ್ಟ್ ಯಾವುದೇ ರೀತಿಯಲ್ಲೂ ತಡೆ ನೀಡಲು ನಿರಾಕರಿಸಿದೆ.
ಈ ಹಿಂದೆ ಮಥುರಾದಲ್ಲಿರುವ ಶಾಹಿ ಈದ್ಗಾ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆಗೆ ಅನುಮತಿ ನೀಡಿದ ನಂತರ ವಿಚಾರಣೆ ನಡೆಯುತ್ತಿರುವ ಶ್ರೀ ಕೃಷ್ಣ ಜನ್ಮಭೂಮಿ ಕೇಸಿನಲ್ಲಿ ಅಲಹಾಬಾದ್ ಹೈಕೋರ್ಟ್ ಪ್ರಮುಖವಾದ ತೀರ್ಪು ನೀಡಿದೆ. ವಾರಣಾಸಿಯ ಜ್ಞಾನವಾಪಿ ದೇವಸ್ಥಾನದಲ್ಲಿ ಯಾವ ರೀತಿಯಲ್ಲಿ ಸಮೀಕ್ಷೆ ನಡೆಸಲಾಗಿದೆಯೋ ಅದೇ ರೀತಿಯಲ್ಲಿ ಸಮೀಕ್ಷೆ ನಡೆಸಲಾಗುತ್ತದೆ.
ಸಮೀಕ್ಷೆಗಾಗಿ ಗುರುವಾರ ನ್ಯಾಯಾಲಯವು ವಕೀಲರ ನಿಯೋಗವನ್ನು ನೇಮಿಸಿ ಶಾಹಿ ಈದ್ಗಾ ಸಂಕೀರ್ಣದ ಸಮೀಕ್ಷೆಗೆ ತಾತ್ವಿಕ ಒಪ್ಪಿಗೆ ನೀಡಿದೆ. ವಕೀಲರ ಕಮೀಷನ್ ಸಮೀಕ್ಷೆ ವಿಧಾನಗಳನ್ನು ಡಿ.18 ರಂದು ನಿರ್ಧರಿಸಲಾಗುತ್ತದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post