ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಾಲ್ಕನೇ ಪರ್ಯಾಯ ಮಹೋತ್ಸವದ ಅಂಗವಾಗಿ ವೃತ್ತಿಕೆ ಮಠದ ಶ್ರೀ ಸ್ವಾಮೀಜಿಯವರು ಭದ್ರಾವತಿ ರಾಘವೇಂದ್ರ ಸ್ವಾಮಿ ಮಠದಲ್ಲಿ ಆಹ್ವಾನ ಪತ್ರಿಕೆ ನೀಡಲು ಆಗಮಿಸಿದಾಗ ಪುರಾಣ ಪ್ರಸಿದ್ಧ ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ದೇವಸ್ಥಾನಕ್ಕೆ ಪುತ್ತಿಗೆ ಮಠದ ಶ್ರೀ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ತದನಂತರ ರಾಘವೇಂದ್ರ ಸ್ವಾಮಿ ಮಠದಲ್ಲಿ ಉಪನ್ಯಾಸ, ಪೂಜಾ ಕಾರ್ಯಕ್ರಮ ಮತ್ತು ಫಲ ಮಂತ್ರಾಕ್ಷತೆ ವಿತರಿಸಿದರು.ಇದೇ ಸಂದರ್ಭದಲ್ಲಿ ವಿವಿಧ ಭಜನಾ ಮಂಡಳಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಮಾಲಾರ್ಪಣೆ ಕಾರ್ಯಕ್ರಮ ಜರಗಿತು. ಗುರುರಾಜ ಸೇವಾ ಸಮಿತಿ ವತಿಯಿಂದ ಅವರಿಗೆ ಗೌರವ ಸಮರ್ಪಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಸಮಿತಿಯ ಅಧ್ಯಕ್ಷ ಮುರುಳಿಧರ್ ತಂತ್ರಿ, ಉಪಾಧ್ಯಕ್ಷ ಸುಮಾರಾ ರಾಘವೇಂದ್ರ, ಪ್ರಧಾನ ಕಾರ್ಯದರ್ಶಿ ಜಿ. ರಮಾಕಾಂತ್, ನಿರಂಜನಾಚಾರ್ಯ, ಗೋಪಾಲಕೃಷ್ಣ ಆಚಾರ್, ಮಧುರ ಸುಧೀಂದ್ರ, ಜಯತೀರ್ಥ, ವಿದ್ಯಾನಂದ ನಾಯಕ, ಶುಭ ಗುರುರಾಜ್, ಸುಪ್ರಿತ ತಂತ್ರಿ, ಸತ್ಯನಾರಾಯಣ ಚಾರ್ ಹಾಗೂ ಎಲ್ಲಾ ವಿವಿಧ ಸಂಘ ಸಂಸ್ಥೆಗಳಿಂದ ಗೌರವ ಪೂರ್ವಕ ಸಮಾರಂಭ ಜರಗಿತು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















