ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ರಾಜ್ಯದಲ್ಲಿ ತೀವ್ರ ಬರ ಆವರಿಸಿರುವ ಬೆನ್ನಲ್ಲೇ ತಮಿಳುನಾಡಿಗೆ ಪ್ರತಿನಿತ್ಯ 3128 ಕ್ಯೂಸೆಕ್ಸ್ ನೀರು ಹರಿಸುವಂತೆ ಕಾವೇರಿ Cauveri ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ನಿರ್ದೇಶನ ನೀಡಿದೆ.
ಈ ಕುರಿತಂತೆ ಆದೇಶ ನೀಡಿರುವ ಸಮಿತಿ, ಡಿಸೆಂಬರ್ ಅಂತ್ಯದವರೆಗೆ ಪ್ರತಿನಿತ್ಯ 3128 ಕ್ಯೂಸೆಕ್ ನೀರು ಹರಿಸುವಂತೆ ಮತ್ತು ಮುಂದಿನ ವರ್ಷ ಜನವರಿಯಲ್ಲಿ ನಿತ್ಯ 1030 ಕ್ಯೂಸೆಕ್ ನೀರು ಹರಿಸುವಂತೆ ಸೂಚಿಸಿದೆ.

Also read: Modi govt is determined to implement UCC: Shah
ಈ ವೇಳೆ ಸಮಿತಿ ಮುಂದೆ ವಾದ ಮಂಡಿಸಿದ ಕರ್ನಾಟಕ, 2023ರ ಡಿಸೆಂಬರ್ 18ರವರೆಗೆ ಕರ್ನಾಟಕದ ನಾಲ್ಕು ಜಲಾಶಯಗಳಿಗೆ ಒಳಹರಿವಿನ ಕೊರತೆ ಶೇ.52.84ರಷ್ಟು ಇದೆ. ತಮಿಳುನಾಡಿನ ಕಾವೇರಿ ಜಲಾಯನ ಪ್ರದೇಶದಲ್ಲಿ ಈಶಾನ್ಯ ಮಾನ್ಯೂನ್ ಖುತುವಿನಲ್ಲಿ ಸಮತೋಲನ ಮಳೆಯನ್ನು ನಿರೀಕ್ಷಿಸಬಹುದು. ಆದ್ದರಿಂದ ಬೆಳೆದಿರುವ ಬೆಳೆಗಳನ್ನು ಉಳಿಸಿಕೊಳ್ಳಲು ಸಾಕಷ್ಟು ಮಣ್ಣಿನ ತೇವಾಂಶವನ್ನು ತಮಿಳುನಾಡಿನ ಕಾವೇರಿ ಜಲಾನಯನ ಪ್ರದೇಶವು ಹೊಂದಿದೆ ಎಂದಿದೆ.










Discussion about this post