ಕಲ್ಪ ಮೀಡಿಯಾ ಹೌಸ್ | ದೆಹಲಿ |
ಕರ್ನಾಟಕ ರಾಜ್ಯಕ್ಕೆ ಹೊಸದಾಗಿ 19 ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ 50 ಮೆಟ್ರಿಕ್ ನಂತರದ ಹಾಸ್ಟೆಲ್ ನಿರ್ಮಾಣಕ್ಕೆ 675 ಕೋಟಿ ರೂ. ಅನುದಾನ ಒದಗಿಸಲು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ Minister Zameer Ahmed Khan ಮನವಿ ಸಲ್ಲಿಸಿದ್ದಾರೆ.
ಮಂಗಳವಾರ ಸಂಸತ್ ಭವನದಲ್ಲಿ ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ Minister Smruthi Irani ಅವರನ್ನು ಭೇಟಿ ಮಾಡಿದ ಅವರು, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಬೇಡಿಕೆ ಇದ್ದು 19 ಶಾಲೆ ಗಳಿಗೆ 475 ಕೋಟಿ ರೂ. ನೆರವು ಒದಗಿಸುವಂತೆ ಕೋರಿದರು.
ಅದೇ ರೀತಿ 50 ಮೆಟ್ರಿಕ್ ನಂತರದ ಹಾಸ್ಟೆಲ್ ಗಳ ನಿರ್ಮಾಣಕ್ಕೆ 200 ಕೋಟಿ ರೂ. ಅನುದಾನ ಒದಗಿಸಬೇಕು. 2.93 ಲಕ್ಷ ವಿದ್ಯಾರ್ಥಿಗಳಿಗೆ 2022-23 ನೇ ಸಾಲಿನ ಎಂ ಸಿಎಂ ವಿದ್ಯಾರ್ಥಿ ವೇತನ ಮೊತ್ತ ಬಿಡುಗಡೆ ಗೆ ಬಾಕಿ ಇದ್ದು ತಕ್ಷಣ ಬಿಡುಗಡೆ ಮಾಡಬೇಕು. 2023-24 ನೇ ಸಾಲಿನ ವಿದ್ಯಾರ್ಥಿ ವೇತನ ಕ್ಕೆ ಅರ್ಜಿ ಆಹ್ವಾನ ಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಿದರು.
Also read: ಉನ್ನತ ಮಟ್ಟದ ಸಮಿತಿ ಸಭೆ ನಡೆಸಿ, ಬರ ಪರಿಹಾರ ಬಿಡುಗಡೆ ಮಾಡಲು ಆಗ್ರಹ
ಇದೇ ಸಂದರ್ಭದಲ್ಲಿ ರಾಜ್ಯದ ಲ್ಲಿ ಇಲಾಖೆ ವತಿಯಿಂದ ರೂಪಿಸಿರುವ ಕಾರ್ಯಕ್ರಮ ಗಳ ಬಗ್ಗೆ ಕೇಂದ್ರ ಸಚಿವರಿಗೆ ಮಾಹಿತಿ ನೀಡಿದರು. ಅಲ್ಪಸಂಖ್ಯಾತರ ನಿರ್ದೇಶನಾಲಯ ನಿರ್ದೇಶಕ ಜಿಲಾನಿ ಮೊಕಾಶಿ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post