ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ |
ಶಿವಮೊಗ್ಗ ಜಿಲ್ಲೆಯಲ್ಲಿ ಅಪರಾಧ ಚಟುವಟಿಕೆಗಳು ನಿಯಂತ್ರಣದಲ್ಲಿದ್ದು ವಾತಾವರಣವನ್ನು ಇನ್ನಷ್ಟು ಉತ್ತಮಗೊಳಿಸಲು ಸಾರ್ವಜನಿಕ ಸಹಕಾರ ಅಗತ್ಯ ಎಂದು ಶಿವಮೊಗ್ಗ ಜಿಲ್ಲಾ ಪೋಲೀಸ್ ರಕ್ಷಣಾಧಿಕಾರಿ ಮಿಥುನ್ ಕುಮಾರ್ SPMithunkumar ತಿಳಿಸಿದರು.
ಕುವೆಂಪು ವಿವಿಯ ಬಸವ ಸಭಾಭವನದಲ್ಲಿ ಕರ್ನಾಟಕ ರಾಜ್ಯ ಅಪರಾಧ ತಡೆ ಮಾಸಾಚರಣೆ 2023ರ ಸಲುವಾಗಿ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಅಪರಾಧ ಹೆಚ್ಚಾಗುತ್ತಿವೆ. ಸೈಬರ್ ವಂಚನೆಗಳನ್ನು ತಡೆಯಲು ಯುವಕರು ಒಟಿಪಿಗಳನ್ನು ಎಲ್ಲಿಯೂ ಹಂಚಿಕೊಳ್ಳಬಾರದು. ಕಳೆದು ಹೋದ ಮೊಬೈಲ್‌ಗಳನ್ನು ಹುಡುಕಿಕೊಡಲು ಪ್ರಸ್ತುತ ವೆಬ್‌ವ್ಯವಸ್ಥೆ ರೂಪಿಸಿದ್ದು ಅದರಲ್ಲಿ ನೊಂದಾಯಿಸಿಕೊಳ್ಳಬೇಕು ಎಂದರು.

Also read: 50 ಮೆಟ್ರಿಕ್ ನಂತರದ ಹಾಸ್ಟೆಲ್ ನಿರ್ಮಾಣಕ್ಕೆ 675 ಕೋಟಿ ರೂ. ಅನುದಾನಕ್ಕೆ ಮನವಿ
ಈ ಸಂದರ್ಭದಲ್ಲಿ ಮಾತನಾಡಿದ ಕುಲಪತಿ ಪ್ರೊ. ವೆಂಕಟೇಶ್ ಎಸ್, ವಿವಿಯಲ್ಲಿ ಉತ್ತಮ ಶೈಕ್ಷಣಿಕ ವಾತಾವರಣವಿದ್ದು, ಶಿವಮೊಗ್ಗದ ಮಲೆನಾಡಿನ ಈ ಜಾಗದಲ್ಲಿ ವಿದ್ಯಾರ್ಥಿಗಳು ಹೆಚ್ಚು ಓದಿನ ಕಡೆಗೆ ತೊಡಗಬೇಕು. ಹಸಿರು ಪರಿಸರವು ದುಶ್ಚಟಗಳಿಂದ ದೂರವಿಡಲು ಸಹಕಾರಿ ಇದನ್ನು ಬಳಸಿಕೊಳ್ಳಬೇಕು ಎಂದರು.










Discussion about this post