ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನೆರೆಯ ರಾಜ್ಯಗಳಲ್ಲಿ ಕೋವಿಡ್ ಉಪತಳಿ ವರದಿಯಾದ ಹಿನ್ನೆಲೆ ಎಲ್ಲರೂ ಕೋವಿಡ್ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಹಾಗೂ ಎಲ್ಲ ಆಸ್ಪತ್ರೆಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಅಗತ್ಯವಾದ ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ DCSelvamani ತಿಳಿಸಿದರು.
ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಕೋವಿಡ್ -19 Covid-19 ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ ಅಗತ್ಯ ಸಿದ್ದತೆ ಮಾಡಿಕೊಳ್ಳುವ ಕುರಿತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಎಲ್ಲ ಆಸ್ಪತ್ರೆಗಳಲ್ಲಿ ಬೆಡ್‍ಗಳು, ಆಕ್ಸಿಜನ್ ಬೆಡ್‍ಗಳು, ಐಸಿಯು, ವೆಂಟಿಲೇಟರ್, ಆಕ್ಸಿಜನ್, ಆಂಬುಲೆನ್ಸ್, ಪ್ರಯೋಗಾಲಯ, ಅಗತ್ಯ ಔಷಧಿ ಇತರೆ ಎಲ್ಲ ವ್ಯವಸ್ಥೆ ಸಿದ್ದವಿರುವಂತೆ ನೋಡಿಕೊಳ್ಳಬೇಕು. ಅಗತ್ಯ ಸಂಖ್ಯೆಯ ಪರೀಕ್ಷೆಗಳನ್ನು ನಡೆಸಲು ಪ್ರಯೋಗಾಲಯ ಹಾಗೂ ಆರ್‍ಟಿಪಿಸಿಆರ್ ಕಿಟ್‍ಗಳನ್ನು ಸಿದ್ದಪಡಿಸಿಕೊಳ್ಳಬೇಕು. ಪಿಹೆಚ್‍ಸಿ ಯಿಂದ ಹಿಡಿದು ಎಲ್ಲ ಆಸ್ಪತ್ರೆಗಳಲ್ಲಿ ಎಸ್‍ಎಆರ್‍ಐ ಮತ್ತು ಐಎಲ್‍ಐ ಲಕ್ಷಣಗಳುಳ್ಳ ಪ್ರಕರಣಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು. ಹೊರ ರಾಜ್ಯ ಮತ್ತು ದೇಶಗಳಿಗೆ ಪ್ರಯಾಣ ಮಾಡುವವರು ಅಲ್ಲಿನ ಪರಿಸ್ಥಿತಿ ಅರಿತು ಪ್ರಯಾಣ ಬೆಳೆಸಬೇಕು.

Also read: ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಎಚ್ಚರಿಕೆ ವಹಿಸಿ: ಡಿಸಿ ಸೂಚನೆ
ಡಿಹೆಚ್‍ಓ ಡಾ.ರಾಜೇಶ್ ಸುರಗಿಹಳ್ಳಿ ಮಾತನಾಡಿ, ಕೋವಿಡ್ ಹೊಸ ರೂಪಾಂತರಿ ತಳಿಯ ತೀವ್ರತೆ ಬಗ್ಗೆ ದಾಖಲೆ ಇಲ್ಲ. ಆದ್ದರಿಂದ ಗಾಬರಿ ಮತ್ತು ಆತಂಕ ಪಡುವ ಅಗತ್ಯವಿಲ್ಲ. ನಮ್ಮ ಜಿಲ್ಲೆಯಲ್ಲಿ 130 ಕೋವಿಡ್ ಪರೀಕ್ಷೆ ಗುರಿ ನೀಡಲಾಗಿದೆ. ಡಿಸೆಂಬರ್ 1 ರಿಂದ 21 ರವರೆಗೆ ಒಟ್ಟು 554 ಕೋವಿಡ್ ಪರೀಕ್ಷೆ ಮಾಡಲಾಗಿದೆ.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ, ಎಸಿ ಸತ್ಯನಾರಾಯಣ್, ಜಿ.ಪಂ ಉಪ ಕಾರ್ಯದರ್ಶಿ ಸುಜಾತ, ತಹಶೀಲ್ದಾರರು, ಮೆಗ್ಗಾನ್ ಬೋಧನಾ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕರು, ಜಿಲ್ಲಾ ಶಸ್ತ್ರಚಿಕಿತ್ಸಕರು, ಜಿಲ್ಲಾ ಹಾಗೂ ತಾಲ್ಲೂಕು ವೈದ್ಯಾಧಿಕಾರಿಗಳು ಹಾಜರಿದ್ದರು.









Discussion about this post