ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಶಾಸಕ ಬಿ.ಕೆ. ಸಂಗಮೇಶ್ವರ್ #BKSangameshwar ಅವರ ಆಪ್ತ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ಈಶ್ವರ್(47) ಅವರು ಇಂದು ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ #Accident ಮೃತರಾಗಿದ್ದಾರೆ.
ಇಂದು ರಾತ್ರಿ 9 ಗಂಟೆ ವೇಳೆಗೆ ಚನ್ನಗಿರಿ #Channagiri ರಸ್ತೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅವರು ಮೃತಪಟ್ಟಿದ್ದಾರೆ.
ಕೂಡ್ಲಿಗೆರೆ ಗ್ರಾಮಕ್ಕೆ ತೆರಳಿದ್ದ ಈಶ್ವರ್, ಕೆಲಸ ಮುಗಿಸಿಕೊಂಡು ಭದ್ರಾವತಿಗೆ #Bhadravathi ಹಿಂತಿರುಗುತ್ತಿದ್ದ ವೇಳೆ ಲಾರಿಯೊಂದು ಬೈಕ್’ಗೆ #Bike ಹೊಡೆದಿದೆ ಎನ್ನಲಾಗಿದೆ. ಪರಿಣಾಮವಾಗಿ ಈಶ್ವರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಮೃತರಿಗೆ ಪತ್ನಿ, ಇಬ್ಬರು ಮಕ್ಕಳಿದ್ದಾರೆ. ಈಶ್ವರ್ ಅವರ ಪಾರ್ಥಿವ ಶರೀರವನ್ನು ಸದ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ ಎಂದು ತಿಳಿದುಬಂದಿದೆ.
ಈಶ್ವರ್ ಅವರ ಅಕಾಲಿಕ ನಿಧನ ಶಾಸಕ ಬಿ.ಕೆ. ಸಂಗಮೇಶ್ವರ್ ಹಾಗೂ ಕುಟುಂಬಸ್ಥರಿಗೂ ಸಹ ಆಘಾತ ನೀಡಿದ್ದು, ಮೃತರ ಆತ್ಮಕ್ಕೆ ಸಂತಾಪ ಸೂಚಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post