ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗದ ಮಾನಸ ಟ್ರಸ್ಟ್ ನ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಕನ್ನಡ ವಿಭಾಗದ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ಸಿ.ಜಿ. ಪವಿತ್ರ ರವರು ಪ್ರೊ. ಶಿವಾನಂದ ಕೆಳಗಿನಮನಿಯವರ ಮಾರ್ಗದರ್ಶನದಲ್ಲಿ “ಆಧುನಿಕ ಕನ್ನಡ ಕಾದಂಬರಿಗಳಲ್ಲಿ ಅಲಕ್ಷಿತ ಮಹಿಳೆಯರು : ಸಾಂಸ್ಕೃತಿಕ ಅಧ್ಯಯನ (ಪ್ರಾತಿನಿಧಿಕ)” ಎಂಬ ವಿಷಯದ ಕುರಿತು ಸಂಶೋಧನಾ ಪ್ರಬಂಧ ಮಂಡಿಸಿದ್ದರು. ಇದಕ್ಕೆ ಕುವೆಂಪು ವಿಶ್ವವಿದ್ಯಾಲಯವು ಪಿ ಎಚ್ ಡಿ ಪದವಿ ನೀಡಿ ಗೌರವಿಸಿದೆ.
ಪವಿತ್ರರವರು ಕನ್ನಡ ಎಂಎ ಪದವಿಯನ್ನು ಪ್ರಥಮ ರ‍್ಯಾಂಕ್ ನೊಂದಿಗೆ ಉತ್ತೀರ್ಣರಾಗಿ ಚಿನ್ನದ ಪದಕವನ್ನು ಪಡೆದಿದ್ದರು. ಇವರು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಚಿಕ್ಕಂಗಳ ಗ್ರಾಮದ ಯಶೋಧ.ಟಿ ರವರ ಮಗಳಾಗಿದ್ದು ಇವರಿಗೆ ಕುಟುಂಬದವರು ಹಾಗೂ ಕಾಲೇಜು ಆಡಳಿತ ಮಂಡಳಿ, ಅಧ್ಯಾಪಕ ವೃಂದ, ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.
Also read: ವೈಕುಂಠ ಏಕಾದಶಿ ಪ್ರಯುಕ್ತ ಸುಶ್ರಾವ್ಯ ಸುಪ್ರಭಾತ ಗೀತೆ ಗಾಯನ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post