ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ವಿಶ್ವ ವಿಖ್ಯಾತ ಹಂಪಿ ಉತ್ಸವ Hampi Utsav ಫೆ.2 ರಿಂದ ಮೂರು ದಿನಗಳ ಕಾಲ ನಡೆಸಲು ತೀರ್ಮಾನಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ CMSiddaramaiah ಅವರು ಫೆ.2 ರಿಂದ ಮೂರು ದಿನಗಳ ಕಾಲ ಹಂಪಿ ಉತ್ಸವ ನಡೆಸಲು ಒಪ್ಪಿಗೆ ನೀಡಿದ್ದು, ಮೊದಲ ದಿನ ಉತ್ಸವ ಉದ್ಘಾಟನೆ ಮಾಡಲಿದ್ದಾರೆ. ಈ ಸಂಬAಧ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ದಿವಾಕರ್ ಅವರಿಗೆ ಸೂಚನೆ ನೀಡಿದ್ದಾರೆ.
ಈ ಬಾರಿಯ ಹಂಪಿ ಉತ್ಸವ ವಿಜೃಂಭಣೆಯಿಂದ ಮಾಡುವಂತೆ ಹಾಗೂ ಸ್ಥಳೀಯ ಕಲಾವಿದರು ಹಾಗೂ ಸಾಂಸ್ಕೃತಿಕ ಕಲೆಗಳಿಗೆ ಒತ್ತು ನೀಡಲು ಉಸ್ತುವಾರಿ ಸಚಿವರು ನಿರ್ದೇಶನ ನೀಡಿದ್ದಾರೆ.
Also read: ಎಪ್ರಿಲ್ ವೇಳೆಗೆ 1400 ಹೊಸ ಎಲೆಕ್ಟ್ರಿಕ್ ಬಿಎಂಟಿಸಿಗೆ ಸೇರ್ಪಡೆ
ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು, ಸಂಘಟನೆಗಳು ಹಾಗೂ ಸಾಂಸ್ಕೃತಿಕ ವಲಯದವರನ್ನು ಜತೆಗೂಡಿಸಿಕೊಂಡು ಉತ್ಸವ ಯಶಸ್ವಿಗೊಳಿಸಲು ತಿಳಿಸಿದ್ದಾರೆ.
ಹಂಪಿ ಉತ್ಸವ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯ ಶಾಸಕರು ಸೇರಿ ಜನಪ್ರತಿನಿಧಿಗಳನ್ನು ಒಳಗೊಂಡಂತೆ ಸದ್ಯದಲ್ಲೇ ಸಭೆ ಸಹ ನಡೆಸಲಿದ್ದಾರೆ.
(ವರದಿ: ಡಿ.ಎಲ್. ಹರೀಶ್)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















