ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಹಿಂದೂ ಬೇರೆ-ಹಿಂದುತ್ವವೇ ಬೇರೆ. ನಾವು ರಾಮನನ್ನು ಪೂಜಿಸಲ್ವಾ, ನಮ್ಮೂರುಗಳಲ್ಲಿ ರಾಮಮಂದಿರ ಕಟ್ಟಿಲ್ವಾ, ರಾಮನ ಭಜನೆ ಮಾಡುವುದಿಲ್ವಾ. ಬಿಜೆಪಿಯವರದ್ದು ಡೋಂಗಿ ಹಿಂದುತ್ವ ಎಂದು ಸಿಎಂ CM ವ್ಯಂಗ್ಯವಾಡಿದರು.
ಈ ಕುರಿತಂತೆ ಮಾತನಾಡಿದ ಅವರು, ಸ್ವಾತಂತ್ರ್ಯಾ ನಂತರ ಭಾರತ ನಿರ್ಮಾಣದಲ್ಲಿ ಕಾಂಗ್ರೆಸ್ ಸರ್ವ ರಂಗಗಳಲ್ಲೂ ಪ್ರಗತಿ ಸಾಧಿಸಿತು. ದೇಶದಲ್ಲಿರುವ ಎಲ್ಲಾ ಅಣೆಕಟ್ಟುಗಳು ನಿರ್ಮಾಣ ಆಗಿದ್ದು ಕಾಂಗ್ರೆಸ್ ಮತ್ತು ನೆಹರೂ ಅವರ ಅವಧಿಯಲ್ಲಿ. ಬಿಜೆಪಿ ಯವರು ಒಂದೇ ಒಂದು ಅಣೆಕಟ್ಟನ್ನೂ ನಿರ್ಮಿಸಲು ಇದುವರೆಗೂ ಸಾಧ್ಯವಾಗಿಲ್ಲ. ಸತ್ಯದ ತಲೆ ಮೇಲೆ ಹೊಡೆದಂತೆ ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು ಎಂದರು.
Also read: ಯಾರೊಬ್ಬರೂ ಗೃಹಲಕ್ಷ್ಮೀಯಿಂದ ವಂಚಿತರಾಗಬಾರದೆಂದು ಅದಾಲತ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

(ವರದಿ: ಡಿ.ಎಲ್. ಹರೀಶ್)











Discussion about this post