ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಮಹಾಲಕ್ಷ್ಮೀಪುರದ ಹಿಂದೂ ಸಾದರ ಕ್ಷೇಮಾಭಿವೃದ್ಧಿ ಸಂಘದಲ್ಲಿ ನಡೆದ ಮಹಾಲಕ್ಷ್ಮೀಪುರ ಬ್ರಾಹ್ಮಣ ಸಭಾದ 18ನೇ ವಾರ್ಷಿಕೋತ್ಸವದ ಅಂಗವಾಗಿ ದುರ್ಗಾ ದೀಪ ನಮಸ್ಕಾರ ಕಾರ್ಯಕ್ರಮವನ್ನು ಉದ್ದೇಶಿಸಿ ಶಾಸಕ ಕೆ. ಗೋಪಾಲಯ್ಯ ಅವರು ಮಾತನಾಡಿದರು.
ಕಳೆದ 14 ವರ್ಷಗಳಿಂದ ಬ್ರಾಹ್ಮಣಸಭಾದ ದುರ್ಗಾ ದೀಪ ನಮಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೇನೆ ಎಂದು ಹೇಳಿದರು.
ಮುಂದಿನ ತಿಂಗಳು ರಾಮ ಮಂದಿರ ಉದ್ಘಾಟನೆಯಾಗಲಿರುವುದು ನಮ್ಮೆಲ್ಲರಿಗೂ ಬಹಳ ಸಂತೋಷ ಹಾಗೂ ನಮ್ಮೆಲ್ಲರ ದೊಡ್ಡ ಹಬ್ಬವಾಗಿದೆ. ಮಹಾಲಕ್ಷ್ಮಿ ಲೇಔಟ್ ಅನೇಕ ಧಾರ್ಮಿಕ ಸ್ಥಳಗಳು ಇರುವಂತಹ ಒಂದು ಸ್ಥಳವಾಗಿದೆ ಎಂದರು.
Also read: Job fair in last week of January | Group of ministers to be formed: Chief Minister Siddaramaiah
ಜನವರಿ 21, 22 ರಂದು ಅಖಿಲ ಕರ್ನಾಟಕ ಬ್ರಾಹ್ಮಣ ಸಂಘ ಹಾಗೂ ಮಹಾಲಕ್ಷ್ಮಿ ಲೇಔಟ್ ಒಳಗೊಂಡಂತೆ ಒಂದು ಬೃಹತ್ ಕಾರ್ಯಕ್ರಮವನ್ನು ಆಯೋಜಿಸಲಾಗುವುದು ಕಾರ್ಯಕ್ರಮಕ್ಕೆ ಎಲ್ಲರೂ ಕುಟುಂಬ ಸಮೇತರಾಗಿ ಆಗಮಿಸಬೇಕು ಎಂದು ಹೇಳಿದರು.
ಬ್ರಾಹ್ಮಣ ಸಭಾ ಹಾಗೂ ತಮ್ಮೆಲ್ಲರ ಸಹಕಾರದೊಂದಿಗೆ ನಾಲ್ಕು ಬಾರಿ ಶಾಸಕನಾಗಿದ್ದೇನೆ ಎಂದರು.
ಶ್ರೀ ಮಠ ಹರಿಹರಪುರದ ಪರಮಪೂಜ್ಯ ಶ್ರೀ ಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮಿಯವರ ದಿವ್ಯ ಸಾನಿಧ್ಯದಲ್ಲಿ ನಡೆಯಿತು.
ಇದೇ ವೇಳೆ ಮಾಜಿ ಉಪ ಮಹಾಪೌರರಾದ ಹೇಮಲತಾ ಗೋಪಾಲಯ್ಯ, ಅಶೋಕ ಹಾರನಹಳ್ಳಿ, ಡಾ ಐ.ಎಸ್. ರಾಘವೇಂದ್ರ ಭಟ್, ಆನಂದ ಪದ್ಮನಾಭ ಕೃಷ್ಣಮೂರ್ತಿ, ಸೇರಿದಂತೆ ಇತರರು ಉಪಸ್ಥಿತರಿದ್ದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















