ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಇಬ್ಬರು ಯುವಕರು ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಸೀಗೆಬಾಗಿ ಗ್ರಾಮದ ಬಳಿ ನಡೆದಿದೆ.
ಹೊನ್ನವಿಲೆ ಗ್ರಾಮದ ನಿವಾಸಿಗಳಾದ ರಮೇಶ್ (23), ಚೇತನ್ (23) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಉಂಟಾದ ಪರಿಣಾಮ ಬೈಕ್ನಲ್ಲಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇವರು ಹೊನ್ನವಿಲೆ ಗ್ರಾಮದಿಂದ ಭದ್ರಾವತಿಗೆ ತೆರಳುತ್ತಿದ್ದರು. ಬೊಲೆರೋ ಚಾಲಕನಿಗೂ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.
Also read: ಯುವಕರು ದೇಶದ ಅಭಿವೃದ್ಧಿಗೆ ಕೈಜೋಡಿಸಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕರೆ
ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post