ಕಲ್ಪ ಮೀಡಿಯಾ ಹೌಸ್ | ಕೊಪ್ಪಳ |
ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನದಲ್ಲಿ ನಾವು ಯಾವುದೇ ದ್ವೇಷದ ರಾಜಕಾರಣ ಮಾಡುವುದಾಗಲಿ, ನಿರಪರಾಧಿಗಳನ್ನು ಬಂಧಿಸುವ ಕೆಲಸವಾಗಲಿ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CMSiddaramaiah ಸ್ಪಷ್ಟಪಡಿಸಿದರು.
ಅವರು ಇಂದು ಕೊಪ್ಪಳ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಅತಿಥಿ ಉಪನ್ಯಾಸಕರು ಪಾದಯಾತ್ರೆ ಮಾಡುವ ಬಗ್ಗೆ ಮಾತನಾಡಿ ಅವರೊಂದಿಗೆ ಮಾತನಾಡಿದ್ದರೂ ಪಾದಯಾತ್ರೆ ಮಾಡುತ್ತಿದ್ದಾರೆ. ಅವರನ್ನು ಖಾಯಂ ಮಾಡಿ ಎಂದು ಬೇಡಿಕೆ ಇದೆ. ಖಾಯಂ ಮಾಡುವುದು ಕಷ್ಟದ ಕೆಲಸ ಎಂದರು.

Also read: ಪ್ರಬಲ ಭೂಕಪಂನದ ಬೆನ್ನಲ್ಲೇ ಜಪಾನ್‌ಗೆ ಸುನಾಮಿ ಭೀತಿ
ಬರ ಪರಿಹಾರ ನೀಡುವ ಪ್ರಕ್ರಿಯೆ ಪ್ರಾರಂಭವಾಗಿದ್ದು ಬೆಳೆ ನಷ್ಟಕ್ಕೆ ತಾತ್ಕಾಲಿಕ ಪರಿಹಾರವಾಗಿ 2 ಸಾವಿರ ರೂ.ಗಳನ್ನು ಒದಗಿಸಲಾಗಿದೆ. ಆಧಾರ್ ಲಿಂಕ್ ಮಾಡಿದ ನಂತರ ಮೊತ್ತ ರೈತರಿಗೆ ತಲುಪಲಿದೆ ಎಂದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು










Discussion about this post