ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ತಮ್ಮ ಜನ್ಮದಿನದ ಅಂಗವಾಗಿ ಕಟೌಟ್ ನಿಲ್ಲಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ ಮೃತರಾದ ಮೂವರು ಅಭಿಮಾನಿಗಳ ನಿವಾಸಕ್ಕೆ ನಟ ರಾಕಿಂಗ್ ಸ್ಟಾರ್ ಯಶ್ Rocking Star Yash ನಗರಕ್ಕೆ ಆಗಮಿಸಿದ್ದಾರೆ.
ವಿಮಾನದಲ್ಲಿ ಹುಬ್ಬಳ್ಳಿಗೆ ಬಂದಿಳಿದ ಯಶ್, ಕಾರಿನಲ್ಲಿ ರಸ್ತೆ ಮೂಲಕ ಗದಗದ ಲಕ್ಷ್ಮೇಶ್ವರ ಬಳಿಯಿರುವ ಸೂರಣಗಿ ಗ್ರಾಮಕ್ಕೆ ತೆರಳುತ್ತಿದ್ದಾರೆ.
ಮೂವರು ಅಭಿಮಾನಿಗಳು ಕಟೌಟ್ ನಿಲ್ಲಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ ಮೃತರಾಗಿರುವ ವಿಚಾರ ತಿಳಿದಾಕ್ಷಣ ತಮ್ಮೆಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಿ ಗದಗಕ್ಕೆ ಭೇಟಿ ನೀಡಿದ್ದಾರೆ.
Also read: ಸಹಕಾರಿ ಕ್ಷೇತ್ರದಲ್ಲಿ ರಾಜ್ಯಗಳ ಮೇಲೆ ಕೇಂದ್ರ ಸವಾರಿ ಮಾಡಲು ಹೊರಟಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಘಟನೆ ಹಿನ್ನೆಲೆ
ಯಶ್ ಜನ್ಮದಿನದ ಅಂಗವಾಗಿ ಗ್ರಾಮಸ್ಥರಿಗೆ ಸರ್ಪ್ರೈಸ್ ನೀಡಬೇಕು ಎಂಬ ಉದ್ದೇಶದಿಂದ ರಾತ್ರಿ ಗ್ರಾಮದ ಬೀದಿಗಳಲ್ಲಿ ಕಟೌಟ್ ಹಾಕಲು ಉದ್ದೇಶಿಸಿದ್ದರು.
ಹೀಗೆ ಸುಮಾರು 25 ಅಡಿ ಎತ್ತರದ ಕಟೌಟ್ ನಿಲ್ಲಿಸುವ ವೇಳೆ ವಿದ್ಯುತ್ ತಂತಿ ತಗುಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹಲವು ಯುವಕರು ಗಾಯಗೊಂಡಿದ್ದು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತ ಮೂರು ಯುವಕರ ಅಂತ್ಯಸಂಸ್ಕಾರವನ್ನು ಸಾಮೂಹಿಕವಾಗಿ ಒಂದೇ ಕಡೆಯಲ್ಲಿ ಇಂದು ಮುಂಜಾನೆ ನಡೆಸಲಾಗಿದೆ. ಇಡಿಯ ಗ್ರಾಮದಲ್ಲಿ ಶೋಕ ಸಾಗರದಲ್ಲಿ ಮುಳುಗಿದ್ದು, ಮೃತ ಯುವಕರ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಶಾಸಕರು ಹಾಗೂ ಪೊಲೀಸ್ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ನಟ ಯಶ್ ಗ್ರಾಮಕ್ಕೆ ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಬೇಕು ಎಂದು ಒತ್ತಾಯಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post