ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಒಂದು, ಎರಡು ತಿಂಗಳಲ್ಲಿ ರೈತರಿಗೆ ಪ್ರವಾಹ ಹಾನಿ ಪರಿಹಾರ ವಿತರಿಸಿತ್ತು. ಈಗಿನ ಕಾಂಗ್ರೆಸ್ ಸರ್ಕಾರ ಕೂಡಲೇ ಪರಿಹಾರ ವಿತರಿಸಲಿ, ಇಲ್ಲವಾದರೆ ಎಲ್ಲರೂ ರಾಜೀನಾಮೆ ನೀಡಲಿ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ R Ashok ಸವಾಲೆಸೆದರು.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Basavaraja Bommai ಹಾಗೂ ಇತರೆ ನಾಯಕರೊಂದಿಗೆ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ Governor Thawarchand Gehlot ಅವರನ್ನು ಆರ್.ಅಶೋಕ ಭೇಟಿ ಮಾಡಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

Also read: CM consents to increase the honorarium to guest lecturers from Rs. 5000 to Rs.8000
ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ಕೇಂದ್ರದ ನೆರವಿಗೆ ಕಾಯದೆ ರಾಜ್ಯ ಸರ್ಕಾರದಿಂದಲೇ ಪರಿಹಾರ ನೀಡಲಾಗಿತ್ತು. ಹಿಂದೆ ಕಾಂಗ್ರೆಸ್ ಇದ್ದಾಗ ಪರಿಹಾರ ನೀಡಲು ಏಳೆಂಟು ತಿಂಗಳು ತಡ ಮಾಡುತ್ತಿದ್ದರು. ಬಿಜೆಪಿ ಅವಧಿಯಲ್ಲಿ ಮೊದಲ ಬಾರಿಗೆ ಡಿಬಿಟಿ ಮುಖಾಂತರ ರೈತರಿಗೆ 3 ಸಾವಿರ ಕೋಟಿ ರೂ.ಗೂ ಅಧಿಕ ಪರಿಹಾರ ನೀಡಲಾಗಿತ್ತು. ಈಗಿನ ಸರ್ಕಾರ ಕೇವಲ 100 ಕೋಟಿ ರೂ. ಪರಿಹಾರ ನೀಡಲಿದೆ. ಬಿಜೆಪಿ ಇದ್ದಾಗ ರಾಜ್ಯದಿಂದ ಪರಿಹಾರ ನೀಡಿದ ಬಳಿಕ ಕೇಂದ್ರದಿಂದ ಪರಿಹಾರ ಬಂದಿತ್ತು. ನಮ್ಮ ಸರ್ಕಾರ ದುಪ್ಪಟ್ಟು ಪರಿಹಾರ ನೀಡಿತ್ತು. ಉದಾಹರಣೆಗೆ, 18 ಸಾವಿರ ರೂ. ಇದ್ದರೆ 10 ಸಾವಿರ ರೂ. ಸೇರಿಸಿ 28 ಸಾವಿರ ರೂ. ಪರಿಹಾರ ನೀಡಲಾಗಿತ್ತು. ಈಗಿನ ಕಾಂಗ್ರೆಸ್ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲದೆ, ಕೇಂದ್ರ ಸರ್ಕಾರದ ಮೇಲೆ ಆರೋಪ ಹೊರಿಸುತ್ತಿದೆ. ಬರಗಾಲ ಬರಲು ರೈತರು ಕಾಯುತ್ತಿದ್ದಾರೆ ಎಂದು ಸಚಿವರೇ ಹೇಳುತ್ತಾರೆ ಎಂದು ದೂರಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post