ಕಲ್ಪ ಮೀಡಿಯಾ ಹೌಸ್ | ದಾವಣಗೆರೆ |
ದಾವಣಗೆರೆ ನಗರದಲ್ಲಿ ನಡೆಯುತ್ತಿರುವ ವರ್ತುಲ ರಸ್ತೆಯ ಕಾಮಗಾರಿಗಳನ್ನು ಪೂರ್ಣಗೊಳಿಸಿ ಸಂಚಾರಕ್ಕೆ ಮುಕ್ತಗೊಳಿಸುವ ಮೂಲಕ ನಗರದಲ್ಲಿನ ವಾಹನ ದಟ್ಟಣೆಯನ್ನು ತಗ್ಗಿಸಲು ಕ್ರಮ ಜರುಗಿಸಬೇಕೆಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ S S Mallikarjun ತಿಳಿಸಿದರು.
ದಾವಣಗೆರೆ-ಹರಿಹರ ನಗರಾಭಿವೃದ್ದಿ ಪ್ರಾಧಿಕಾರದ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

Also read: ಹಾಸಿಗೆ ಹಿಡಿದ ವೃದ್ಧರ ಮನೆಗೆ ಭೇಟಿ ನೀಡಿ ಆರೈಕೆ ಮಾಡಿದ ಸಂಚಾರಿ ಘಟಕದ ವೈದ್ಯರು
ಹೆಗಡೆ ನಗರದ ಮೂಲಕ ಬೇತೂರು ರಸ್ತೆಯಿಂದ ಅವರಗೆರೆ ಮೂಲಕ ರಾಷ್ಟ್ರೀಯ ಹೆದ್ದಾರಿ ಸಂಪರ್ಕಿಸುವ ವರ್ತುಲ ರಸ್ತೆ ನಿರ್ಮಿಸಲು ಪ್ರಾಧಿಕಾರದಿಂದ ಯೋಜಿಸಿದ್ದು ಇದನ್ನು ತುಂಬಾ ವೈಜ್ಞಾನಿಕವಾಗಿ ಮಾಡಬೇಕು. ಈ ಭಾಗದಲ್ಲಿ ಯಾರಿಗೂ ತೊಂದರೆಯಾಗಂತೆ ಹಳ್ಳದ ಪಕ್ಕದಲ್ಲಿ ಸಿಗುವ ಸ್ಥಳದಲ್ಲಿ ಹಳ್ಳಕ್ಕೆ ಸ್ಥಳ ಬಿಟ್ಟು ರಸ್ತೆ ನಿರ್ಮಾಣ ಮಾಡಲು ಯೋಜನೆ ರೂಪಿಸಬೇಕು, ರೈತರಿಗಾಗಲಿ, ನಿವಾಸಿಗಳಿಗಾಗಲಿ ತೊಂದರೆಯಾಗದಂತೆ ಯೋಜನೆ ತಯಾರಿಸಲು ಸೂಚನೆ ನೀಡಿದರು.

ಮಾಯಕೊಂಡ ಶಾಸಕರಾದ ಕೆ.ಎಸ್. ಬಸವಂತಪ್ಪ, ಜಿಲ್ಲಾಧಿಕಾರಿ ಹಾಗೂ ಪ್ರಾಧಿಕಾರದ ಅಧ್ಯಕ್ಷರಾದ ಡಾ. ವೆಂಕಟೇಶ್ ಎಂ.ವಿ, ಹೆಚ್ಚುವರಿ ರಕ್ಷಣಾಧಿಕಾರಿ ವಿಜಯಕುಮಾರ್ ಎಂ. ಸಂತೋಷ್, ಪ್ರಾಧಿಕಾರದ ಆಯುಕ್ತರಾದ ಬಸವನಗೌಡ ಕೋಟೂರು, ಪಾಲಿಕೆ ಆಯುಕ್ತರಾದ ರೇಣುಕಾ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post