ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬೈಕ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹೊಸನಗರ ತಾಲೂಕಿನ ಮಾವಿನಹೊಳೆ ಕ್ರಾಸ್ ನಲ್ಲಿ ನಡೆದಿದೆ.
ಹೊಸನಗರ ಕಡೆಯಿಂದ ಸಾಗರಕ್ಕೆ ತೆರಳುತ್ತಿದ್ದ ಕಂಟೇನರ್ ಲಾರಿ ಮತ್ತು ಸಾಗರ ಕಡೆಯಿಂದ ಹೊಸನಗರ ಕಡೆಗೆ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.
Also read: ರೈತರಿಗೆ, ನಿವಾಸಿಗಳಿಗೆ ತೊಂದರೆಯಾಗದಂತೆ ವರ್ತುಲ ರಸ್ತೆ ಯೋಜನೆ ರೂಪಿಸಿ: ಸಚಿವ ಮಲ್ಲಿಕಾರ್ಜುನ್
ಬೈಕ್ ಸವಾರ ಗರ್ತಿಕೆರೆ ಮೂಲದ ಯುವಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















