ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಯಚೂರು ಜಿಲ್ಲೆ, ರಾಯಚೂರು ತಾಲ್ಲೂಕಿನ ಬೋಳಮಾನದೊಡ್ಡಿ ಏತ ನೀರಾವರಿ ಯೋಜನೆಯನ್ನು ಕೈಗೆತ್ತಿಕೊಳ್ಳುವ ನಿಟ್ಟಿನಲ್ಲಿ ಕಾರ್ಯಸಾಧ್ಯತಾ ವರದಿಯನ್ನು ಸಿದ್ದಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು Minister Boseraju ಹೇಳಿದರು.
ಸಚಿವರ ಅಧ್ಯಕ್ಷತೆಯಲ್ಲಿ ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಜಲ ಸಂಪನ್ಮೂಲ ಇಲಾಖೆ ಮತ್ತು ನಗರಾಭಿವೃದ್ದಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ರಾಕೇಶ್ ಸಿಂಗ್ ಅವರು ಹಾಗೂ ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತದ ಅಧಿಕಾರಿಗಳು ಭಾಗವಹಿಸಿದ್ದರು.
ಈ ಯೋಜನೆಯಿಂದ ಸುಮಾರು 6464 ಹೆಕ್ಟೇರ್ ಗೆ ನೀರಾವರಿ ಹಾಗೂ ಕೆರೆಗಳನ್ನು ತುಂಬಿಸಬಹುದಾಗಿದೆ. ಕೃಷ್ಣಾ ನದಿಯ ನೀರನ್ನ ಬಳಸಿಕೊಳ್ಳುವ ಮೂಲಕ ರೈತರ ಬೆಳೆಗೆ ಹಾಗೂ ಜನರಿಗೆ ಕುಡಿಯುವ ನೀರಿಗಾಗಿ ಉಪಯೋಗಿಸಬಹುದಾಗಿದೆ. ಈ ಬಗ್ಗೆ ತಾಂತ್ರಿಕ ಕಾರ್ಯಸಾಧ್ಯತಾ ವರದಿಯನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ವರದಿಯನ್ನ ಸರಕಾರಕ್ಕೆ ಸಲ್ಲಿಸಲಾಗುವುದು ಎಂದು ಸಚಿವರು ತಿಳಿಸಿದರು.
Also read: ಜನವರಿ ತಿಂಗಳಾಂತ್ಯಕ್ಕೆ ಭಾಗಮಂಡಲ ಸೇತುವೆ ಕಾರ್ಯ ಮುಕ್ತಾಯಕ್ಕೆ ಗಡುವು
ಇದೇ ವೇಳೆ ಮಸ್ಕಿ ವಿಧಾನಸಭಾ ಕ್ಷೇತ್ರದ 5ಎ ಕಾಲುವೆಯ ಪ್ರಸ್ತಾವನೆಯ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಮಸ್ಕಿ ಶಾಸಕರಾದ ಬಸವನಗೌಡ ತುರುವಿಹಾಳ್ ಉಪಸ್ಥಿತರಿದ್ದರು.
(ವರದಿ: ಡಿ.ಎಲ್. ಹರೀಶ್, ಬೆಂಗಳೂರು)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















