ಕಲ್ಪ ಮೀಡಿಯಾ ಹೌಸ್ | ಯುಕೆ |
ಭಾರತ ದೇಶವೇ ಬೆಚ್ಚಿ ಬೀಳುವಂತೆ ಮುಂಬೈನಲ್ಲಿ ನಡೆದ ದಾಳಿಯ ಮಾಸ್ಟರ್ ಮೈಂಡ್, ಜಮಾತ್ ಉದ್ ದವಾ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಸ್ ಸಯೀದ್ Mumbai attack master mind Hafiz ಪಾಕಿಸ್ಥಾನದ ವಶದಲ್ಲಿದ್ದಾನೆ ಎಂದು ವರದಿಯಾಗಿದೆ.
ಈ ಕುರಿತಂತೆ ಸ್ವತಃ ವಿಶ್ವಸಂಸ್ಥೆಯೇ ಮಾಹಿತಿ ಪ್ರಕಟಿಸಿದ್ದು, 2008 ರಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಿಂದ ನಿರ್ಬಂಧಕ್ಕೊಳಗಾಗಿರುವ ಜಾಗತಿಕ ಭಯೋತ್ಪಾದಕ ಸಯೀದ್, ಪಾಕಿಸ್ಥಾನ ಸರ್ಕಾರದ ವಶದಲ್ಲಿದಲ್ಲಿದ್ದಾನೆ ಎಂದಿದೆ.
ಹಲವು ಪ್ರಕರಣಗಳಲ್ಲಿ 78 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದಾನೆ. 2020 ರಿಂದ ಆತ ಪಾಕ್ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾನೆ ಎಂದಿದೆ.
Also read: ಅಲೆಮಾರಿ ಸಮುದಾಯದ ದೇವಾಲಯಕ್ಕೆ ಚಿಂತಾಮಣಿ ಸ್ವಾಮಿಗಳ ಭೇಟಿ
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಮಿತಿಯು ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಮತ್ತು ಲೆವೆಂಟ್ ಮತ್ತು ಅಲ್-ಖೈದಾ ಮೇಲಿನ ನಿರ್ಬಂಧಗಳಾದ ಸ್ವತ್ತುಗಳು ಜಪ್ತಿ, ಪ್ರಯಾಣ ನಿಷೇಧ ಮತ್ತು ಶಸ್ತ್ರಾಸ್ತ್ರ ನಿರ್ಬಂಧಕ್ಕೆ ಒಳಪಟ್ಟಿರುವ ವ್ಯಕ್ತಿಗಳು ಮತ್ತು ಸಂಘಟನೆಗಳ ನಿಯಮಗಳಿಗೆ ಕೆಲವು ತಿದ್ದುಪಡಿಗಳನ್ನು ಮಾಡಿದೆ. ಅದರಲ್ಲಿ ಹಫೀಜ್ ಪಾಕಿಸ್ಥಾನದಲ್ಲಿ ಜೈಲು ಶಿಕ್ಷೆಗೆ ಒಳಗಾಗಿರುವ ಬಗ್ಗೆ ವಿವರಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post