ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಮ್ಮ ರಾಜ್ಯ ಸರ್ಕಾರ ನೀಡಿದ ಗ್ಯಾರೆಂಟಿಗಳ ಬಗ್ಗೆ ಅಪಹಾಸ್ಯ ಮಾಡಿದ್ದ ಬಿಜೆಪಿ ಮಧ್ಯಪ್ರದೇಶ ಚುನಾವಣೆಯಲ್ಲಿ ನಮ್ಮ ಗ್ಯಾರೆಂಟಿಗಳನ್ನೇ ಕಾಪಿ ಮಾಡಿದೆ ಎಂದು ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ್ BK Sangameshwar ಲೇವಡಿ ಮಾಡಿದರು.
ನಗರದಲ್ಲಿ ಮಾತನಾಡಿದ ಅವರು, ಕರ್ನಾಟಕ ಸರ್ಕಾರ ನೀಡಿದ ಗ್ಯಾರಂಟಿ ಬಗ್ಗೆ ಅಪಹಾಸ್ಯ ಮಾಡುತ್ತಿದ್ದ ಬಿಜೆಪಿ ಮಧ್ಯಪ್ರದೇಶ ಚುನಾವಣೆಯಲ್ಲಿ ನಮ್ಮ ಗ್ಯಾರಂಟಿಗಳನ್ನು ನಕಲು ಮಾಡಿದೆ. ಈಗ ಕೇಂದ್ರ ಸರ್ಕಾರ ಕೂಡ ಅದೇ ಹಾದಿ ಹಿಡಿದಿದೆ ಎಂದರು.

Also read: ಯುವನಿಧಿ | ಹರಿದು ಬಂದ ಜನಸಾಗರ | ನಗರದ ಪ್ರಮುಖ ರಸ್ತೆಗಳಲ್ಲಿ ಹೆಚ್ಚಿದ ಸಂಚಾರ ದಟ್ಟಣೆ
ಜೆಡಿಎಸ್ ಜಾತ್ಯತೀತದ ಸೋಗಿನಲ್ಲಿರುವ ಅತ್ಯಂತ ದೊಡ್ಡ ಕೋಮುವಾದಿ ಪಕ್ಷ. ದೇವೇಗೌಡರು ಮತ್ತು ಕುಮಾರಸ್ವಾಮಿ ಜಾತ್ಯತೀತ ನಾಟಕವಾಡಿ ಈಗ ಬಿಜೆಪಿ ಜೊತೆಗೆ ಜನರಿಗೆ ದ್ರೋಹ ಮಾಡಿದ್ದಾರೆ. ನಿನ್ನೆ ಎಸ್’ಪಿ ಕಚೇರಿಯಲ್ಲಿ ನನ್ನ ವಿರುದ್ಧ ಪ್ರತಿಭಟನೆ ನಡೆಸಿದ ಭದ್ರಾವತಿಯ ಕೆಲವು ಮುಖಂಡರು ಅವರೇ ಕಾನೂನುಬಾಹಿರ ಚಟುವಟಿಕೆಯಲ್ಲಿ ತೊಡಗಿಸಿಕೊಂಡವರು. ಅವರಣ್ಣ ಬಣ್ಣ ಮುಚ್ಚಿಹಾಕಲು ನನ್ನ ಮೇಲೆ ದೂರು ನೀಡಿದ್ದಾರೆ. ಭದ್ರಾವತಿ ಜನತೆಗೆ ನನ್ನ ಬಗ್ಗೆ ಸಂಪೂರ್ಣ ಮಾಹಿತಿ ಇದೆ ಎಂದರು.
ಯುವಕರು ಯುವನಿಧಿ ಯೋಜನೆಯ ಸಂಪೂರ್ಣ ಲಾಭ ಪಡೆಯಿರಿ ಎಂದು ವಿನಂತಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post