ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಭಾರತೀಯ ಭೂ ಸೇನಾ ದಿನಾಚರಣೆ ಹಾಗೂ ಸಂಕ್ರಾಂತಿ ಹಬ್ಬವನ್ನು ಮಾಜಿ ಸೈನಿಕರ ಸಂಘದ ವತಿಯಿಂದ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಸಂಕ್ರಾಂತಿ ಹಬ್ಬದ ನಿಮಿತ್ತ ಮಾಜಿ ಸೈನಿಕರ ಸಂಘದ ಕಚೇರಿ ಇರುವ ಸಿದ್ದಾಪುರದಿಂದ ಭದ್ರಾವತಿ ಸರ್ಕಾರಿ ಆಸ್ಪತ್ರೆಯವರೆಗೂ ಬೈಕ್ ರ್ಯಾಲಿ ನಡೆಸಿ ಆಸ್ಪತ್ರೆಯ ಸಿಬ್ಬಂದಿ ವರ್ಗದವರ ಜೊತೆ ಸೇರಿ ಆಚರಿಸಲಾಯಿತು.
ನಂತರ ಭದ್ರಾವತಿ ಸರ್ಕಾರಿ ಆಸ್ಪತ್ರೆಯಲ್ಲಿನ ರೋಗಿಗಳಿಗೆ ಹಣ್ಣ ಹಂಪಲು ವಿತರಣೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
Also read: ಹಾವೇರಿ ಗ್ಯಾಂಗ್ ರೇಪ್ ಪ್ರಕರಣ ಮುಚ್ಚಿ ಹಾಕುವುದು ಗ್ಯಾರೆಂಟಿ: ಸಿಎಂ ಬೊಮ್ಮಾಯಿ ಅನುಮಾನ
ಕಾರ್ಯಕ್ರಮದಲ್ಲಿ ಮಾಜಿ ಸೈನಿಕರು, ಸ್ವಯಂಸೇವಕರು, ಭದ್ರಾವತಿಯ ನಾಗರಿಕರು ಕಾರ್ಯಕ್ರಮವನ್ನು ಅದ್ದೂರಿಯಾಗಿ ಯಶಸ್ವಿಗಳಿಸಿಕೊಟ್ಟರು. ಇವರೆಲ್ಲರಿಗೂ ಮಾಜಿ ಸೈನಿಕರ ಸಂಘ ಅಭಿನಂದನೆ ಸಲ್ಲಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















