ಕಲ್ಪ ಮೀಡಿಯಾ ಹೌಸ್ | ಅಯೋಧ್ಯಾ |
ರಾಮಮಂದಿರದಲ್ಲಿ #RamaMandir ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಕೇವಲ ಮೂರು ದಿನ ಬಾಕಿಯಿರುವ ಮುನ್ನವೇ ನಗರದಲ್ಲಿ ಮೂವರು ಅನುಮಾನಾಸ್ಪದ ವ್ಯಕ್ತಿಗಳನ್ನು ಭಯೋತ್ಪಾದನಾ ನಿಗ್ರಹ ದಳ #ATS ಬಂಧಿಸಿದೆ.
ನಿನ್ನೆ ರಾತ್ರಿ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಅಯೋಧ್ಯೆಯಲ್ಲಿ #Ayodhya ಮೂವರು ಶಂಕಿತರನ್ನು ಎಟಿಎಸ್ ಅಧಿಕಾರಿಗಳು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದೆ.
ರಾಜ್ಯ ಸರ್ಕಾರ ಮತ್ತು ಪೊಲೀಸ್ ಪ್ರಧಾನ ಕಚೇರಿಯ ಸೂಚನೆಯ ಮೇರೆಗೆ ನಡೆಸುತ್ತಿರುವ ತಪಾಸಣೆ ಅಭಿಯಾನದ ಭಾಗವಾಗಿ, ಅಯೋಧ್ಯೆ ಜಿಲ್ಲೆಯ ಯುಪಿ-ಎಟಿಎಸ್’ನಿಂದ #ATS ಮೂವರು ಅನುಮಾನಾಸ್ಪದ ವ್ಯಕ್ತಿಗಳನ್ನು ಬಂಧಿಸಲಾಗಿದೆ.
ಇಲ್ಲಿಯವರೆಗೆ ಯಾವುದೇ ಭಯೋತ್ಪಾದಕ ಸಂಘಟನೆಯೊಂದಿಗೆ ಅವರ ಸಂಪರ್ಕ ಬೆಳಕಿಗೆ ಬಂದಿಲ್ಲ ಎಂದು ಹೇಳಲಾಗಿದೆ.
ಇನ್ನು, ಅಯೋಧ್ಯೆಯಲ್ಲಿ ಉತ್ತರ ಪ್ರದೇಶ ಸರ್ಕಾರವು ಡ್ರೋನ್’ಗಳ ಮೂಲಕ ಕಣ್ಗಾವಲು ಹೆಚ್ಚಿಸಿದ್ದು, ನಗರದಲ್ಲಿ ಹೆಜ್ಜೆ ಹೆಜ್ಜೆಗೂ ತಪಾಸಣೆ ನಡೆಸಲಾಗುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















