ಕಲ್ಪ ಮೀಡಿಯಾ ಹೌಸ್ | ಚಿತ್ರದುರ್ಗ |
ಲಾರಿ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಿಶ್ಚಿತಾರ್ಥವಾಗಿ ಮದುವೆ ಕನಸು ಕಾಣುತ್ತಿದ್ದ ಯುವಕ ದಾರುಣವಾಗಿ ಸಾವನ್ನಪ್ಪಿರುವ ದುರ್ಘಟನೆ ಚಿತ್ರದುರ್ಗದ ತಿರುಮಲ ಡಾಬಾ ಬಳಿಯಲ್ಲಿ ನಡೆದಿದೆ.
ಮೃತ ಯುವಕನನ್ನು ಕೃಷಿ ಇಲಾಖೆಯ ಅಧಿಕಾರಿ ವಿಶಾಲ್ ಕುಮಾರ್ ಎಂದು ಗುರುತಿಸಲಾಗಿದೆ.
ಹೊಳೆಲ್ಕೆರೆ ರಸ್ತೆಯ ತಿರುಮಲ ಡಾಬಾ ಬಳಿಯಲ್ಲಿ ಎದುರುಗಡೆಯಿಂದ ಬರುತ್ತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಅಪಘಾತದ ರಭಸಕ್ಕೆ ವಿಶಾಲ್ ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದು, ತೀವ್ರ ರಕ್ತಸ್ರಾವ ಸಂಭವಿಸಿ ಅವರು ಸಾವನ್ನಪ್ಪಿದ್ದಾರೆ.
Also read: ರೈತರಿಗೆ ಪರಿಹಾರ ನೀಡಿ, ಬೆಂಬಲ ಬೆಲೆಯಂತೆ ಬೆಳೆ ಮಾರಾಟಕ್ಕೆ ಅವಕಾಶ ಕೊಡಿ: ಆರ್. ಅಶೋಕ್ ಆಗ್ರಹ
ವಿಶಾಲ್ ಅವರಿಗೆ ಇತ್ತೀಚೆಗಷ್ಟೇ ನಿಶ್ಚಿತಾರ್ಥವಾಗಿದ್ದು, ಮದುವೆ ಹಾಗೂ ಸುಖ ಸಂಸಾರದ ಕನಸು ಕಾಣಿಸುತ್ತಿದ್ದರು. ಆದರೆ, ವಿಧಿಯ ಆಟ ಅವರನ್ನು ಬಲಿ ಪಡೆದುಕೊಂಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















