ಕಲ್ಪ ಮೀಡಿಯಾ ಹೌಸ್ | ಅಯೋಧ್ಯೆ |
ಕೋಟ್ಯಾಂತರ ಹಿಂದೂಗಳು ಕಾತರದಿಂದ ಕಾಯುತ್ತಿದ್ದ ಅ ದಿನ ಇಂದು ಬಂದಿದ್ದು, ಅಯೋಧ್ಯೆಯಲ್ಲಿ #Ayodhya ಶ್ರೀರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ.
ಪ್ರಧಾನಿ ನರೇಂದ್ರ ಮೋದಿ #PMNarendraModi ಅವರ ಮುಖ್ಯ ಯಜಮಾನತ್ವದಲ್ಲಿ ವಿಧಿವಿಧಾನಗಳು ನಡೆಯಲಿದ್ದು, ಮಧ್ಯಾಹ್ನದ ವೇಳೆಗೆ ಇದು ಮುಕ್ತಾಯವಾಗುವ ನಿರೀಕ್ಷೆಯಿದೆ.
ಹೀಗಿದೆ ಇಂದಿನ ಕಾರ್ಯಕ್ರಮಗಳ ವಿವರ:
- ಬೆಳಗ್ಗೆ 10:25: ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನ
- ಬೆಳಗ್ಗೆ 10:55: ಶ್ರೀ ರಾಮ ಜನ್ಮಭೂಮಿಗೆ ಮೋದಿ ಆಗಮನ
- ಬೆಳಗ್ಗೆ 10 ರಿಂದ 11: ರಾಮಜನ್ಮಭೂಮಿಯಲ್ಲಿ ಮಂಗಳವಾದ್ಯಗಳಿಂದ ಮಂಗಳನಾದ
- ಮಧ್ಯಾಹ್ನ 12:20 ರಿಂದ 12:55 ರವರೆಗೆ ಮೋದಿ ಅಮೃತ ಹಸ್ತದಿಂದ ರಾಮ ಪ್ರಾಣ ಪ್ರತಿಷ್ಠಾಪನೆ
- ಮಧ್ಯಾಹ್ನ 12:55 : ಪೂಜಾ ಸ್ಥಳದಿಂದ ನರೇಂದ್ರ ಮೋದಿ ನಿರ್ಗಮನ
- ಮಧ್ಯಾಹ್ನ 1:00: ಮಂದಿರದ ಬಳಿಯ ಸಾರ್ವಜನಿಕ ಸ್ಥಳಕ್ಕೆ ಮೋದಿ ಆಗಮನ
- ಮಧ್ಯಾಹ್ನ 1:00 ರಿಂದ 2:00: 7000 ಗಣ್ಯರು, ದೇಶದ ಜನರನ್ನು ಉದ್ದೇಶಿಸಿ ಮೋದಿ ಭಾಷಣ
- ಮಧ್ಯಾಹ್ನ 2:10: ಮೋದಿ ಅವರಿಂದ ಕುಬೇರ ಟೀಲಾದಲ್ಲಿ ಜಟಾಯು ಪ್ರತಿಮೆ ದರ್ಶನ, ಶಿವನ ಪೂಜೆ
- ಸಂಜೆ 4: ಪ್ರಧಾನಿ ಮೋದಿ ದಿಲ್ಲಿಗೆ ವಾಪಸ್
- ಸಂಜೆ 7: ಅಯೋಧ್ಯೆ ಸರಯೂ ನದಿ ತಟದಲ್ಲಿ 10 ಲಕ್ಷ ದೀಪೋತ್ಸವ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post