ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಇಲ್ಲಿನ ಕ್ರೈಸ್ಟ್‌ಕಿಂಗ್ Christ King ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ನಕ್ರೆ ಜೆಬಿ ಕೊಕೊನಟ್ ಇಂಡಸ್ಟ್ರೀಸ್ ಮಾಲೀಕ ಹಾಗೂ ಪ್ರಗತಿಪರ ಕೃಷಿಕ ಬೊನಿಪಸ್ ಸಿಕ್ವೇರಾ ಧ್ವಜಾರೋಹಣ ನೆರವೇರಿಸಿದರು.
ಸಂಸ್ಥೆಯ ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಸುಕನ್ಯಾ ಜೈನ್ ಹಾಗೂ 9ನೇ ತರಗತಿಯ ವಿದ್ಯಾರ್ಥಿನಿ ವಿ. ಮೇಘ ಗಣರಾಜ್ಯೋತ್ಸವದ Republic Day ಕುರಿತು ಅನಿಸಿಕೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಪದವಿಪೂರ್ವ ಪ್ರಾಚಾರ್ಯ ಲಕ್ಷ್ಮೀನಾರಾಯಣ ಕಾಮತ್, ಮುಖ್ಯ ಶಿಕ್ಷಕರಾದ ಪ್ರೌಢಶಾಲಾ ವಿಭಾಗದ ಡೊಮಿನಿಕ್ ಅಂದ್ರಾದೆ, ಪ್ರಾಥಮಿಕ ವಿಭಾಗದ ಮೇರಿಯನ್ ಡಿ’ಸೋಜ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಪದವಿಪೂರ್ವ ವಿಭಾಗದ ಬಾಲಕೃಷ್ಣ ಶೆಟ್ಟಿ, ಪ್ರೌಢಶಾಲಾ ವಿಭಾಗದ ಹೇಮಲತಾ ಉಪಸ್ಥಿತರಿದ್ದರು.
Also read: ಸಂಪೂರ್ಣ ದೇಶಭಕ್ತಿಯಿಂದ ಮಾತ್ರ ಗಣರಾಜ್ಯದ ಪರಿಕಲ್ಪನೆ ಪರಿಪೂರ್ಣ ಹೊಂದಲು ಸಾಧ್ಯ
ಶಿಕ್ಷಕಿಯರಾದ ಕು. ನೀತಿ ಆಚಾರ್ಯ ಸ್ವಾಗತಿಸಿ, ಶಕೀಲಾ ವಂದಿಸಿದರು. ರಮಿತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















