ಕಲ್ಪ ಮೀಡಿಯಾ ಹೌಸ್ | ಬಂಡೀಪುರ |
ಬಂಡಿಪುರ ಅರಣ್ಯ ಪ್ರದೇಶದೊಳಗಿನ ರಸ್ತೆಯ ಮೂಲಕ ಕೇರಳದ ವೈನಾಡಿಗೆ ಹೋಗುವ ಮಾರ್ಗದಲ್ಲಿ ರಾತ್ರಿ 9ರಿಂದ ಬೆಳಗ್ಗೆ 6ಗಂಟೆಯವರೆಗೆ ಸಂಚಾರ ನಿರ್ಬಂಧಿಸಿರುವ ಕುರಿತಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ Minister Eshwar Khandre ಖುದ್ದು ಪರಿಶೀಲನೆ ನಡೆಸಿದರು.
23ರ ಮಧ್ಯರಾತ್ರಿ 12 ಗಂಟೆಯಿಂದ 24ರ ನಸುಕಿನ 2 ಗಂಟೆಯವರೆಗೆ ಈ ಮಾರ್ಗವಾಗಿ ಕೇರಳದ ಗಡಿಯವರೆಗೂ ಅಧಿಕಾರಿಗಳೊಂದಿಗೆ ಪ್ರಯಾಣ ಮಾಡಿದ ಸಚಿವರು, ರಸ್ತೆಯನ್ನು ದಾಟುವ ಜಿಂಕೆಗಳು, ಆನೆಗಳನ್ನು ವೀಕ್ಷಿಸಿ, ಕರ್ನಾಟಕದ ಗಡಿಯೊಳಗಿನ ಚೆಕ್ ಪೋಸ್ಟ್ ನಲ್ಲಿ ಪರಿಶೀಲನೆ ನಡೆಸಿದರು.

Also read: ಪ್ರತಿಯೊಬ್ಬರು ಬಲಿಷ್ಟ ರಾಷ್ಟ್ರ ನಿರ್ಮಾಣದ ಸಂಕಲ್ಪ ಕೈಗೊಳ್ಳಬೇಕು: ತಹಶೀಲ್ದಾರ್ ಹುಸೇನ್ ಸರಕವಸ್
ಚೆಕ್ ಪೋಸ್ಟ್ ಸಿಬ್ಬಂದಿಯೊಂದಿಗೆ ಮಾತುಕತೆ ನಡೆಸಿದ ಸಚಿವರು, ಕುಂದುಕೊರತೆಯನ್ನೂ ಆಲಿಸಿದರು. ಚೆಕ್ ಪೋಸ್ಟ್ ಸಿಬ್ಬಂದಿಗೆ ನೀಡಿರುವ ಸೌಲಭ್ಯಗಳ ಪರಿಶೀಲನೆ ನಡೆಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post