ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದ ಸವಳಂಗ ರಸ್ತೆಯ ಸರ್ಜಿ ಕನ್ವೆನ್ಷನ್ ಹಾಲ್‌ನಲ್ಲಿ ಶನಿವಾರ ಬೆಳಗ್ಗೆ ಖ್ಯಾತ ಕೈಗಾರಿಕೋದ್ಯಮಿಗಳು ಹಾಗೂ ವಿಧಾನ ಪರಿಷತ್ ಸದಸ್ಯ ಎಸ್. ರುದ್ರೇಗೌಡರ ಅಮೃತಮಯಿ ಅಭಿನಂದನಾ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರು ಬಸವ ನಾಮಾಂಕಿತದ ಪ್ಲೇಟ್ ಬ್ಯಾಂಕ್ ಉದ್ಘಾಟನೆ ನೆರವೇರಿಸುವ ಮೂಲಕ ಲೋಕಾರ್ಪಣೆಗೊಳಿಸಿದರು.
ಈ ಸಂದರ್ಭದಲ್ಲಿ ಎಸ್. ರುದ್ರೇಗೌಡ್ರು ಅಭಿನಂದನಾ ಸಮಿತಿಯ ಅಧ್ಯಕ್ಷ ಡಿ.ಜಿ. ಬೆನಕಪ್ಪ, ಪ್ರಧಾನ ಕಾರ್ಯದರ್ಶಿ ಡಾ. ಧನಂಜಯ ಸರ್ಜಿ, ವಿಧಾನ ಪರಿಷತ್ ಸದಸ್ಯರಾದ ಎಸ್.ರುದ್ರೇಗೌಡ್ರು , ಓಪನ್ ಮೈಂಡ್‌ರಸ ವರ್ಲ್ದ್ ಸ್ಕೂಲ್‌ನ ಮ್ಯಾನೇಜಿಂಗ್ ಟ್ರಸ್ಟಿ ಕಿರಣ್ ಕುಮಾರ್ ಕೆ. , ಶ್ರೀ ಬಸವೇಶ್ವರ ವೀರಶೈವ ಸಮಾಜದ ಪದಾಧಿಕಾರಿಗಳಾದ ಎನ್.ರಾಜಶೇಖರ್, ರುದ್ರೇಶ್, ಬಳ್ಳೆಕೆರೆ ಸಂತೋಷ್, ಮೋಹನ್ ಬಾಳೆಕಾಯಿ,ಅನಿತಾ ರವಿಶಂಕರ್, ರೇಣುಕಾರಾಧ್ಯರು ಹಾಜರಿದ್ದರು. ಈ ಸಂದರ್ಭ ಅಭಿನಂದನಾ ಸಮಿತಿ ವತಿಯಿಂದ ಶ್ರೀ ಬಸವೇಶ್ವರ ವೀರಶೈವ ಸಮಾಜಕ್ಕೆ ಹಸ್ತಾಂತರಿಸಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















