No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Wednesday, August 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಮುಗ್ಧತೆ ಎಂದರೆ ರಾಷ್ಟ್ರಪತಿಗಳಿಗೆ ಏಕವಚನ ಬಳಸುವುದಾ? ಸಿಎಂ ಸಿದ್ದರಾಮಯ್ಯಗೆ ಹೆಚ್‌ಡಿಕೆ ತೀವ್ರ ತರಾಟೆ

kalpa News by kalpa News
January 29, 2024
in ಬೆಂಗಳೂರು ನಗರ
0
ಅಹಿಂದ ಎಲ್ಲಾ ನನ್ನ ಹಿಂದೆ ಎನ್ನುವ ಸಿದ್ದರಾಮಯ್ಯ ಅವರ ಮನಃಸ್ಥಿತಿಯನ್ನು ದಲಿತರು ಅರ್ಥ ಮಾಡಿಕೊಳ್ಳಲಿ: ಹೆಚ್‌ಡಿಕೆ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಸಾರ್ವಜನಿಕ ಸಭೆಯಲ್ಲಿ ರಾಷ್ಟ್ರಪತಿಗಳನ್ನು ವಿವೇಚನೆ ಇಲ್ಲದೆ ಏಕವಚನದಲ್ಲಿ ಸಂಬೋಧಿಸಿ, ಈಗ ವಿಷಾದ ವ್ಯಕ್ತಪಡಿಸಿದರೆ ಆಗುತ್ತದೆಯೇ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ H D Kumaraswamy ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಅವರಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಅಂಕೆ ಮೀರಿದ ಭಂಡತನಕ್ಕೆ ಮುಖ್ಯಮಂತ್ರಿ ನೀವೇ ಅತ್ಯುತ್ತಮ ಉದಾಹರಣೆ ಸಿದ್ದರಾಮಯ್ಯನವರೇ. ಭಾವುಕನಾಗಿ ಮಾತನಾಡುವ ಭರದಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳನ್ನು ಏಕವಚನದಲ್ಲಿ ಸಂಬೋಧಿಸಿದೆ ಎಂದು ನೀವು ಕೊಟ್ಟಿರುವ ಸಮಜಾಯಿಷಿ ಮೊಸಳೆಯನ್ನೂ ನಾಚಿಸುವಂತಿದೆ ಎಂದಿದ್ದಾರೆ ಅಲ್ಲದೆ, ಶಿಷ್ಟಾಚಾರಗೆಟ್ಟ ಮುಖ್ಯಮಂತ್ರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ಗ್ರಾಮೀಣ ಸೊಗಡಿನ ವ್ಯಕ್ತಿತ್ವ ನನ್ನದು. ನಾನು ಮಾತನಾಡುವುದೇ ಹಾಗೆ..” ಎಂದು ನೀವು ಸಮರ್ಥಿಸಿಕೊಳ್ಳುತ್ತಿರಿ. ಸಮರ್ಥನೆಗೂ ಒಂದು ಅಳತೆ, ಗೌರವ ಇರುತ್ತದೆ. ಅದಾವುದನ್ನೂ ನೀವು ಲೆಕ್ಕಕ್ಕೇ ಇಟ್ಟಿಲ. ಹೌದಲ್ಲವೇ? ಎಂದು ಸಿಎಂ ಅವರನ್ನು ಪ್ರಶ್ನೆ ಮಾಡಿರುವ ಸಿದ್ದರಾಮಯ್ಯ ಅವರು; 2ನೇ ಸಲ ಸಿಎಂ ಆಗಿ ಎಲ್ಲಾ ರೀತಿಯ ಶಿಷ್ಟಾಚಾರದ ಸುಖ ಅನುಭವಿಸುತ್ತಿದ್ದೀರಿ ಮತ್ತು ಪಾಲಿಸುತ್ತಿದ್ದೀರಿ, ಸರಿ. ಆದರೆ; ಭಾಷೆ ವಿಚಾರದಲ್ಲಿ ನೀವು ಯಾಕೆ ಶಿಷ್ಟಾಚಾರ ಕಲಿತಿಲ್ಲ, ಪಾಲಿಸುತ್ತಿಲ್ಲ? ನಿಮ್ಮ ನಾಯಕರಾದ ಸೋನಿಯಾ ಗಾಂಧಿ, Sonia Gandhi ರಾಹುಲ್ ಗಾಂಧಿ Rahul Gandhi ಅವರಿಗೆ ಏಕವಚನ ಪ್ರಯೋಗಿಸುವಿರಾ? ಈ ಸೋಗಲಾಡಿತನವನ್ನು ಅರ್ಥ ಮಾಡಿಕೊಳ್ಳದಷ್ಟು ಮುಗ್ಧರೇ ನಮ್ಮ ಜನರು ಎಂದು ಕಿಡಿಕಾರಿದ್ದಾರೆ.

ಸಿದ್ದರಾಮಯ್ಯನವರೇ, ಶೋಷಿತರ ಜಾಗೃತಿ ಸಮಾವೇಶದಲ್ಲಿ ನಿಮ್ಮ ಭಾಷಣದಲ್ಲಿ ಭಾವುಕತೆ, ಮುಗ್ಧತೆ ಇತ್ತೇ? ಸುಳ್ಳು ಹೇಳುವುದಕ್ಕೂ ಸಂಕೋಚ ಬೇಡವೇ? ನಿಮ್ಮ ಭಾಷಣ ದುರಾಹಂಕಾರದ ಪರಮಾವಧಿ ಮತ್ತು ಆ ಸಮಾವೇಶದ ಕರ್ತೃ,ಕರ್ಮ, ಕ್ರಿಯೆ ಎಲ್ಲವೂ ನೀವೇ. ಹೌದೋ ಅಲ್ಲವೋ? ದೇಶದ ಅತ್ಯುನ್ನತ ಸ್ಥಾನದಲ್ಲಿರುವ ಗೌರವಾನ್ವಿತ ರಾಷ್ಟ್ರಪತಿಗಳ ಬಗ್ಗೆ, ಅದರಲ್ಲೂ ಮಹಿಳೆಯ ಬಗ್ಗೆ ಏಕವಚನ ಪ್ರಯೋಗಿಸುವಾಗ ಭಾವುಕತೆಯಲ್ಲಿ ನಿಮ್ಮ ವಿವೇಕ ಸತ್ತು ಹೋಗಿತ್ತಾ? ಅವರು ಸಿದ್ದರಾಮಯ್ಯ ಅವರನ್ನು ಕೇಳಿದ್ದಾರೆ.
Kalahamsa Infotech private limitedಎರಡು ಬಾರಿ ಸಿಎಂ ಆದವರು, ಡಿಸಿಎಂ, ಹಣಕಾಸು ಸಚಿವರೂ ಆಗಿದ್ದವರು.. ವಕೀಲರೂ, ಸ್ವಯಂಘೋಷಿತ ಸಂವಿಧಾನ ತಜ್ಞರೂ ಆಗಿರುವ ನಿಮ್ಮಂತಹ ಪಂಡಿತರೇ ಭಾವುಕತೆಯಿಂದ ಬಾಯಿ ತಪ್ಪಿದರೆ ಹೇಗೆ?

ಇನ್ನು ಆ ನಿಮ್ಮ ಭಾಷಣ! ಅದನ್ನು ಭಾಷಣ ಎನ್ನಲು ಸಾಧ್ಯವೇ? ನಿಮ್ಮ ಭಾಷಣ ನಿಮ್ಮ ಹೃದಯದಲ್ಲಿ ತುಂಬಿದ್ದ ಅಸಹನೆಯ ನಂಜು. ಅನ್ಯಜಾತಿಗಳ ಮೇಲೆ ಮಡುಗಟ್ಟಿದ ದ್ವೇಷ. ಜಾತಿ-ಧರ್ಮಗಳ ನಡುವೆ ಬೆಂಕಿ ಇಡಲು ನೀವು ಕಕ್ಕಿದ ಕಾರ್ಕೋಟಕ ವಿಷಜ್ವಾಲೆ. ಜಾತಿ ವ್ಯವಸ್ಥೆ ಇರುವರೆಗೆ ಇಂಥ ಸಮಾವೇಶಗಳು ನಡೆಯಬೇಕು ಎನ್ನುತ್ತೀರಿ! ಅಂದರೆ ಕಾರ್ಕೋಟಕ ವಿಷಜ್ವಾಲೆ ನಿರಂತರ ಎಂದಾಯಿತು! ನಿರಂತರವಾಗಿ ಅಧಿಕಾರದಲ್ಲಿ ಸುಖಿಸಿದ ನೀವು ಶೋಷಿತ ವರ್ಗಕ್ಕೆ ಮಾಡಿದ್ದೇನು? ಎಂದು ಕುಮಾರಸ್ವಾಮಿ ಅವರು ಟಾಂಗ್ ನೀಡಿದ್ದಾರೆ.

ಮೀಸಲಾತಿ ಬಗ್ಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದ್ದೇನು? ಅವರ ನಿಲುವು ಏನಾಗಿತ್ತು? ಸಂವಿಧಾನವೇ ನನ್ನ ಧರ್ಮಗ್ರಂಥ ಎನ್ನುವ ನೀವು, ಇಷ್ಟು ಬೇಗ ಸಂವಿಧಾನ ಬರೆದವರ ಮಾತನ್ನೇ ಮರೆತರೆ ಹೇಗೆ? 14 ಬಜೆಟ್ ಮಂಡಿಸಿದ ಅಪರ ವಿತ್ತವಿಶಾರದರಾದ ತಮಗೆ ಮರೆವೇ? ಇನ್ನೆಷ್ಟು ವರ್ಷ ಸುಳ್ಳುಗಳನ್ನೇ ಹೇಳಿ ಸತ್ಯವನ್ನು ಸಾಗ ಹಾಕುತ್ತೀರಿ? ಎಂದು ಸಿಎಂಗೆ ಬಿಸಿ ಮುಟ್ಟಿಸಿದ್ದಾರೆ.

ನನ್ನಂತೆಯೇ ಶೋಷಿತ ಸಮಾಜದಿಂದ ಬಂದವರು, ಅವರ ಬಗ್ಗೆ ಅಪಾರ ಗೌರವವಿದೆ. ಅವರನ್ನು ಏಕವಚನದಲ್ಲಿ‌ ಸಂಬೋಧಿಸಬಾರದಿತ್ತು. ಅಚಾತುರ್ಯದಿಂದ ಆಗಿರುವ ಈ ಪ್ರಮಾದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದಿದ್ದೀರಿ. ವಿಷಾದ ವ್ಯಕ್ತಪಡಿಸುವ ಸೌಜನ್ಯ ತೋರಿಸಿದ್ದೀರಿ, ಸಂತೋಷ. ಆದರೆ; ನಿಮ್ಮ ನಂಜಿನ ವಿಷ ರಾಜ್ಯವನ್ನೆಲ್ಲಾ, ದೇಶವನ್ನೆಲ್ಲಾ ವ್ಯಾಪಿಸುತ್ತಿದೆ. ಇದಕ್ಕೆ ಏನಂತೀರಿ? ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಸಂವಿಧಾನ ಹಾಳು ಮಾಡಿದವರು:
ಜೆಡಿಎಸ್ ಬಿಜೆಪಿ ಮೈತ್ರಿಕೂಟದ ಬೆಂಗಳೂರು ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎ.ಪಿ.ರಂಗನಾಥ್ ಅವರು ನಾಮಪತ್ರ ಸಲ್ಲಿಸಿದ ನಂತರ ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಕುಮಾರಸ್ವಾಮಿ ಅವರು; ನಾನು ಸಂವಿಧಾನ ತಜ್ಞ ಅಂತಾರೆ. ಆದರೆ, ರಾಷ್ಟ್ರಪತಿಗಳನ್ನು ಗೌರವಿಸಬೇಕು ಎನ್ನುವುದು ಗೊತ್ತಿಲ್ಲವೇ? ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದರು.

ಯಾವ ಭಾವನಾತ್ಮಕ ಭಾಷೆ ಅದು. ಸಂವಿಧಾನ ಹಾಳು ಮಾಡೋಕೆ ಹೊರಟಿರೋದು ಇದೇ ಸಿದ್ದರಾಮಯ್ಯ. ವಿಷಾದ ವ್ಯಕ್ತಪಡಿಸಿ ಜಾರಿಕೊಳ್ಳಲು ಸಾಧ್ಯವಿಲ್ಲ ಎಂದು ಕುಟುಕಿದರು ಮಾಜಿ ಮುಖ್ಯಮಂತ್ರಿಗಳು.

Also read: ತುಂಗಾ ನದಿ ಉದ್ಯಾನವನದಲ್ಲಿ ಮಹಿಳೆಯರು, ಮಕ್ಕಳ ರಕ್ಷಣೆಗೆ ಗಮನಹರಿಸಿ: ಸಚಿವ ಮಧು ಬಂಗಾರಪ್ಪ

ಈ ದೇಶದ ಪ್ರಧಾನಿ ಯಾರು? ಶೋಷಿತ ಸಮುದಾಯದಿಂದ ಬಂದು ಉನ್ನತ ಸ್ಥಾನಕ್ಕೆ ಏರಿದ್ದಾರೆ ಮೋದಿ ಅವರು. ಅವರ ಬಗ್ಗೆಯೂ ಇವರು ಲಘುವಾಗಿ ಮಾತನಾಡುತ್ತಾರೆ. ಹಾಗಾದರೆ ನಿಮ್ಮ ಸಾಧನೆ ಏನು? ಅಸೂಯೆಯಿಂದ‌ ಮಾತಾಡ್ತಾರೆ ಅಂತಾರೆ‌ ಅವರು. ಅವರ ಬಜೆಟ್ ನಲ್ಲಿ ಎಷ್ಟು ಶೋಷಿತ ಜನರನ್ನು ಮೇಲೆ ಎತ್ತಿದ್ದಾರೆ ಇವರು? ಸಿದ್ದರಾಮಯ್ಯ ಅವರು ಅಂಕಿ ಅಂಶ ಇಡಲಿ ನೋಡೊಣ ಎಂದು ಕುಮಾರಸ್ವಾಮಿ ಅವರು ಸವಾಲು ಹಾಕಿದರು.

ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಜಿ.ಟಿ.ದೇವೇಗೌಡರು, ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ, ಮಾಜಿ ಸದಸ್ಯರಾದ ಚೌಡರೆಡ್ಡಿ ತೂಪಲ್ಲಿ, ಜೆಡಿಎಸ್ ನಗರ ಘಟಕದ ಅಧ್ಯಕ್ಷರಾದ ಹೆಚ್.ಎಂ.ರಮೇಶ್ ಗೌಡ, ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯ ಜೆಡಿಎಸ್-ಬಿಜೆಪಿ ಮೈತ್ರಿ (NDA) ಅಭ್ಯರ್ಥಿಯಾದ ಎ.ಪಿ.ರಂಗನಾಥ್ ಸೇರಿದಂತೆ ಹಲವಾರು ನಾಯಕರು ಮಾಜಿ ಮುಖ್ಯಮಂತ್ರಿಗಳ ಜತೆಯಲ್ಲಿ ಇದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು    

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
   

Tags: BangaloreCM SiddaramaiahH D KumaraswamyKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaRahul GandhiSonia Gandhiಬೆಂಗಳೂರುಮುಖ್ಯಮಂತ್ರಿ ಸಿದ್ದರಾಮಯ್ಯರಾಹುಲ್ ಗಾಂಧಿಸೋನಿಯಾ ಗಾಂಧಿಹೆಚ್.ಡಿ. ಕುಮಾರಸ್ವಾಮಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ತುಂಗಾ ನದಿ ಉದ್ಯಾನವನದಲ್ಲಿ ಮಹಿಳೆಯರು, ಮಕ್ಕಳ ರಕ್ಷಣೆಗೆ ಗಮನಹರಿಸಿ: ಸಚಿವ ಮಧು ಬಂಗಾರಪ್ಪ

Next Post

ಜಿಂಕೆ ಪ್ರತಿಮೆ ಬಿದ್ದು ಬಾಲಕಿ ಸಾವು

kalpa News

kalpa News

Next Post
ಜಿಂಕೆ ಪ್ರತಿಮೆ ಬಿದ್ದು ಬಾಲಕಿ ಸಾವು

ಜಿಂಕೆ ಪ್ರತಿಮೆ ಬಿದ್ದು ಬಾಲಕಿ ಸಾವು

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL