ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಚಾಲುಕ್ಯನಗರದ ಸಾಹಿತ್ಯ ಗ್ರಾಮದಲ್ಲಿ ಶಿವಮೊಗ್ಗ ಜಿಲ್ಲಾ 18ನೇ ಕನ್ನಡ ಸಾಹಿತ್ಯ ಸಮ್ಮೇಳನ ಏರ್ಪಡಿಸಲಾಗಿದ್ದು, ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಸಾಹಿತಿ ಡಾ.ಎಸ್.ಪಿ. ಪದ್ಮಪ್ರಸಾದ್ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಕ.ಸಾ.ಪ. ಅಧ್ಯಕ್ಷ ಡಿ. ಮಂಜುನಾಥ್ ತಿಳಿಸಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಮ್ಮೇಳನದಲ್ಲಿ 9 ಗೋಷ್ಠಿಗಳಿದ್ದು, ಮಹಾವೇದಿಕೆಗೆ ಡಿ.ಎಸ್.ನಾಗಭೂಷಣ್ ಹಾಗೂ ಮಹಾದ್ವಾರಗಳಿಗೆ ಕೆ.ವಿ.ಸುಬ್ಬಣ್ಣ, ಎಸ್.ವಿ.ಪರಮೇಶ್ವರಭಟ್ಟ, ಪ್ರೊ. ಬಿ.ಕೃಷ್ಣಪ್ಪ ಹೆಸರಿಡಲಾಗಿದ್ದು, ಸಮ್ಮೇಳನದಲ್ಲಿ ಭಾಗವಹಿಸುವ ಸರ್ಕಾರಿ ನೌಕರರಿಗೆ ಓಓಡಿ ಸೌಲಭ್ಯವಿದೆ ಹಾಗೂ ಪುಸ್ತಕಗಳ, ಕೈಮಗ್ಗ ಹಾಗೂ ಖಾದಿ ಬಟ್ಟೆಗಳ ಮತ್ತು ಸಿರಿಧಾನ್ಯಗಳ ಪ್ರದರ್ಶನ ಹಾಗೂ ಮಾರಾಟವಿದೆ ಎಂದರು.

ಬೆಳಗ್ಗೆ 11ಕ್ಕೆ ನಡೆಯುವ ಜ್ಯೋತಿ ಬೆಳಗೋಣ ಬನ್ನಿ ಉದ್ಘಾಟನಾ ಸಮಾರಂಭದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಿಲ್ಲಾ ಕಸಾಪ ಅಧ್ಯಕ್ಷರಾದ ಡಿ. ಮಂಜುನಾಥ ಆಶಯ ಮಾತುಗಳನ್ನಾಡಲಿದ್ದಾರೆ.
ಕಸಾಪ ರಾಜ್ಯಾಧ್ಯಕ್ಷರಾದ ನಾಡೋಜ ಮಹೇಶ ಜೋಷಿ, ಹಿರಿಯ ಸಾಹಿತಿ ಎಲ್.ಎನ್.ಮುಕುಂದರಾಜ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಹಿರಿಯ ಸಾಹಿತಿ ಡಾ.ಎಸ್.ಪಿ.ಪದ್ಮಪ್ರಸಾದ್ ಸಮ್ಮೇಳನಾಧ್ಯಕ್ಷರ ಮಾತುಗಳನ್ನಾಡಲಿದ್ದು, ನಿಕಟಪೂರ್ವ ಸಮ್ಮೇಳನಾಧ್ಯಕ್ಷರಾದ ಲಕ್ಷ್ಮಣ ಕೊಡಸೆ ಉಪಸ್ಥಿತರಿರುವರು. ಶಾಸಕರಾದ ಶಾರದಾ ಪೂರ್ಯಾನಾಯ್ಕ, ಎಸ್.ಎನ್.ಚನ್ನಬಸಪ್ಪ, ಬೇಳೂರು ಗೋಪಾಲಕೃಷ್ಣ, ಎಸ್.ಎಲ್.ಭೋಜೇಗೌಡ, ಡಿ.ಎಸ್.ಅರುಣ್, ವೈದ್ಯ ಧನಂಜಯ ಸರ್ಜಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Also read: ವ್ಯಕ್ತಿಯ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ: ಫಾ. ಮ್ಯಾಕ್ಸಿಂ ನಜರತ್
ಸಂಜೆ 6 ಗಂಟೆಗೆ ನಡೆಯುವ ಕನ್ನಡ ಸಾಹಿತ್ಯ ಸವಾಲುಗಳು ಕುರಿತು ಸಾಹಿತಿ ಡಾ.ಮಾರ್ಷಲ್ ಶರಾಮ್ ಅಧ್ಯಕ್ಷತೆ ವಹಿಸಲಿದ್ದು, ಕನ್ನಡ ಸಾಹಿತ್ಯ ಸಾಂವಿಧಾನಿಕ ಆಶಯಗಳು ಕುರಿತು ಎಲ್.ಎನ್. ಮುಕುಂದರಾಜ್, ಕನ್ನಡ ಸಾಹಿತ್ಯ ಜೀವವಿರೋಧಿ ನಿಲುವು ಕುರಿತು ಸಾಹಿತಿ ಬಿ.ಚಂದ್ರೇಗೌಡ, ಜಾನಪದ ಜಾಗತೀಕರಣ ಕುರಿತು ಪ್ರಾಧ್ಯಾಪಕ ಮೋಹನ ಚಂದ್ರಗುತ್ತಿ ಮಾತನಾಡಲಿದ್ದಾರೆ. ಉಪವಿಭಾಗಾಧಿಕಾರಿ ಸತ್ಯನಾರಾಯಣ.ಜಿ.ಹೆಚ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಕಥೆ ಹೇಳುವೆವು ಬನ್ನಿ ಕಥಾಗೋಷ್ಟಿಯಲ್ಲಿ ಸಾಹಿತಿ ಕಂ.ನಾಡಿಗ ನಾರಾಯಣ ಅಧ್ಯಕ್ಷತೆ ವಹಿಸಲಿದ್ದು, ಅರಣ್ಯ ಇಲಾಖೆ ನಿವೃತ್ತ ಹಿರಿಯ ವ್ಯವಸ್ಥಾಪಕರಾದ ರಘುರಾಮ ದೇವಾಡಿಗ ಉಪಸ್ಥಿತರಿರುವರು. ಕಥೆಗಾರರಾದ ರವಿ ಸಸಿತೋಟ, ಡಾ.ಕಲೀಂಉಲ್ಲಾ, ತುರುವನೂರು ಮಲ್ಲಿಕಾರ್ಜುನ, ಡಾ.ಜಿ.ಆರ್.ಲವ, ಸಿ.ಎಂ.ನೃಪತುಂಗ, ಪರಮೇಶ್ವರ ಕರೂರು, ಡಿ.ಹೆಚ್.ಸೂರ್ಯಪ್ರಕಾಶ್ ಕಥಾ ವಾಚನ ಮಾಡಲಿದ್ದಾರೆ. ನವಮಾಧ್ಯಮ ಬಿಕ್ಕಟ್ಟುಗಳು ಗೋಷ್ಟಿಯಲ್ಲಿ ಖ್ಯಾತ ವೈದ್ಯ ಡಾ. ಕೆ.ಆರ್.ಶ್ರೀಧರ್ ಅಧ್ಯಕ್ಷತೆ ವಹಿಸಲಿದ್ದು, ಹೆಚ್ಚುವರಿ ಜಿಲ್ಲಾ ಪೋಲೀಸ್ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮೊಬೈಲ್ ಮತ್ತು ಯುವ ಮನಸ್ಸು ಕುರಿತು ಡಾ. ಎಸ್.ಟಿ.ಅರವಿಂದ, ಮೊಬೈಲ್ ಪೋಷಕರು ಮಕ್ಕಳು ಕುರಿತು ಡಾ. ಪ್ರೀತಿ ಶಾನುಭಾಗ್ ಮಾತನಾಡಲಿದ್ದು, ವಿದ್ಯಾರ್ಥಿನಿ ಸಾನಿಕಾ ಎಂ. ಹೆಗಡೆ, ಪೋಷಕರ ಪರವಾಗಿ ಶೋಭಾ ವೆಂಕಟರಮಣ, ಶಿಕ್ಷಕರ ಪರವಾಗಿ ಬಿ. ಪಾಪಯ್ಯ ಪ್ರತಿಕ್ರಿಯೆ ನೀಡಲಿದ್ದಾರೆ.

ಸಂಜೆ 06:30 ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಕುವೆಂಪು ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಡಾ.ಜಿ. ಪ್ರಶಾಂತನಾಯಕ ಸಮಾರೋಪ ಮಾತುಗಳನ್ನಾಡಲಿದ್ದಾರೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಆರ್.ಎಂ. ಮಂಜುನಾಥಗೌಡ, ಸಂಸದರಾದ ಬಿ.ವೈ.ರಾಘವೇಂದ್ರ, ಶಾಸಕರಾದ ಆರಗ ಜ್ಞಾನೇಂದ್ರ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಶಾಸಕರಾದ ಎಸ್. ರುದ್ರೇಗೌಡ, ಬಿ.ಕೆ. ಸಂಗಮೇಶ್, ಬಿ.ವೈ. ವಿಜಯೇಂದ್ರ, ಉದ್ಯಮಿ ಎಂ. ಶ್ರೀಕಾಂತ್, ಜಿಲ್ಲಾ ಪೊಲೀಸ್ ರಕ್ಷಣಾಧಿಕಾರಿ ಮಿಥುನ್ ಕುಮಾರ್, ಜಿಲ್ಲಾ ಪಂಚಾಯತಿ ಸಿಇಓ ಸ್ನೇಹಲ್ ಸುಧಾಕರ ಲೋಕಂಡೆ, ಮಹಾನಗರ ಪಾಲಿಕೆ ಆಯುಕ್ತ ಕೆ.ಮಾಯಣ್ಣಗೌಡ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಇದೇ ವೇಳೆ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಗುತ್ತಿದೆ.
ಸುದ್ದಿಗೋಷ್ಟಿಯಲ್ಲಿ ಜಿಲ್ಲಾ ಕಸಾಪ ಪದಾಧಿಕಾರಿಗಳಾದ ಎಂ.ನವೀನ್ ಕುಮಾರ್, ಡಿ.ಗಣೇಶ್, ಎಸ್.ಷಣ್ಮುಖಪ್ಪ, ಮಧುಸೂಧನ ಐತಾಳ್, ತಾಲ್ಲೂಕು ಕಸಾಪ ಅಧ್ಯಕ್ಷರಾದ ಮಹಾದೇವಿ, ಬಿ.ಟಿ.ಅಂಬಿಕಾ, ಭೈರಾಪುರ ಶಿವಪ್ಪಗೌಡ, ಸೋಮಿನಕಟ್ಟಿ, ಅನುರಾಧ, ನಳೀನಾಕ್ಷಿ, ಎಸ್.ಶಿವಮೂರ್ತಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post