ಕಲ್ಪ ಮೀಡಿಯಾ ಹೌಸ್ | ಉಳ್ಳಾಲ |
ಮೀನುಗಾರಿಕೆ ಮುಗಿಸಿ ಉಳ್ಳಾಲ ಸಮುದ್ರ ತೀರದ Ullala Beach ಮೂಲಕ ದಡಕ್ಕೆ ಆಗಮಿಸುತ್ತಿದ್ದ ಟ್ರ್ರಾಲ್ ಬೋಟೊಂದು ಶುಕ್ರವಾರ ನಸುಕಿನ ಜಾವ ಸಮುದ್ರದ ಕಲ್ಲೊಂದಕ್ಕೆ ಬಡಿದು ಮುಳುಗಿದ್ದು, ಬೋಟ್‍ನಲ್ಲಿ ಮೀನು, ಬಲೆ ಸಮುದ್ರ ಪಾಲಾಗಿದ್ದು, ಲಕ್ಷಾಂತರ ಮೌಲ್ಯದ ಬೋಟ್‍ಗೆ ಹಾನಿಯಾಗಿದೆ.
ಮೀನುಗಾರಿಕೆಗೆ ತೆರಳಿದ್ದ ಎರಡು ಬೋಟ್‍ನ ಮೀನುಗಾರರು ಬೋಟ್‍ನಲ್ಲಿದ್ದ ಐವರನ್ನು ರಕ್ಷಿಸಿದ್ದಾರೆ. ಉಳ್ಳಾಲ ನಿವಾಸಿ ನಯನಾ ಪಿ. ಸುವರ್ಣ ಅವರಿಗೆ ಸೇರಿದ ‘ನವಾಮಿ – ಶಿವಾನಿ’ ಬೋಟ್ ದುರಂತಕ್ಕೀಡಾಗಿದ್ದು, ಬೋಟ್ ಚಲಾಯಿಸುತ್ತಿದ್ದ ನಯನಾ ಅವರ ಪತಿ ಪ್ರವೀಣ್ ಸುವರ್ಣ, ಉತ್ತರ ಪ್ರದೇಶದ ಮೀನುಗಾರರಾದ ಸಮರ ಬಹದ್ದೂರ್, ರಾಮ್ ಮನೋಜ್, ರೋಹಿತ್, ಪ್ರಕಾಶ್, ವಾಸು ಅವರಲ್ಲಿ ಮೂವರನ್ನು ನಾಡದೋಣಿಯಲ್ಲಿ ಆಗಮಿಸಿದ ರಾಮ ಸುವರ್ಣ ಮತ್ತು ವಯತೀಶ್ ಸುವರ್ಣ ರಕ್ಷಿಸಿದರೆ, ಉಳಿದ ಇಬ್ಬರನ್ನು ಮತ್ತು ಬೋಟನ್ನು ಪ್ರಕಾಶ್ ಖಾರ್ವಿ ಮಾಲಕತ್ವದ ದುರ್ಗಾ ಲಕ್ಷ್ಮಿ ಮತ್ತು ಮನೋಜ್ ಖಾರ್ವಿ ಮಾಲಕತ್ವದ ಶ್ರೀಗೌರಿ ಬೋಟ್‍ನ ಮೀನುಗಾರರು ರಕ್ಷಿಸಿದ್ದಾರೆ.
Also read: ಕಲಿತ ಶಿಕ್ಷಣದಿಂದ ಸಮಸಮಾಜ ನಿರ್ಮಾಣ ಮಾಡಲು ಸಂಘಟಿತರಾಗಿ: ಡಾ. ಬಸವರಾಜ್ ಕರೆ
ಗುರುವಾರ ಸಂಜೆ ಪ್ರವೀಣ್ ಸುವರ್ಣ ಸೇರಿದಂತೆ ಉತ್ತರ ಪ್ರದೇಶದ ಐವರು ಮೀನುಗಾರರು ಮೀನುಗಾರಿಕೆಗೆ ತೆರಳಿದ್ದು, ಇಂದು ನಸುಕಿನ ಜಾವ ನಾಲ್ಕು ಗಂಟೆಗೆ ಮೀನುಗಾರಿಕೆ ಮುಗಿಸಿ ಮೀನಿನೊಂದಿಗೆ ಉಳ್ಳಾಲ ಸಮುದ್ರ ತೀರದ ಮೂಲಕ ದಡಕ್ಕೆ ಆಗಮಿಸುತ್ತಿದ್ದರು. ಈ ಸಂದರ್ಭದಲ್ಲಿ ಬೋಟ್‍ನ ಬ್ರೊಫೈಲರ್ರ್ ಗೆ ಸಮುದ್ರದಲ್ಲಿ ಯಾವುದೋ ವಸ್ತು ತಾಗಿ ಪ್ರೊಫೈಲರ್ ನಿಂತಿದ್ದು, ಬೆಳಗಿನ ಜಾವ ಸಮುದ್ರ ಇಳಿತದಿಂದ ಸಮುದ್ರದಲ್ಲಿ ನಿಂತಿದ್ದ ಬೋಟ್ ಸಮುದ್ರದ ತೆರೆಗಳ ಹೊಡೆತಕ್ಕೆ ಕಡಲ್ಕೊರೆತದ ಶಾಶ್ವತ ಕಾಮಗಾರಿಯಾದ ರೀಫ್ ಬಳಿ ಹಾಕಿದ್ದ ಸರ್ವೇಕಲ್ಲಿಗೆ ಬಡಿದು ಬೋಟ್ ಮುಳುಗಲು ಆರಂಭಗೊಂಡಿದೆ. ಹಡಗು ಮುಳುಗುತ್ತಿರುವ ವಿಚಾರ ತಿಳಿಯುತ್ತಿದ್ದಂತೆ ಮೀನುಗಾರಿಕೆಗೆ ತೆರಳಿದ್ದ ಇತರೆ ಬೋಟ್‍ನ ಮೀನುಗಾರರು ರಕ್ಷಿಸಿ, ಮುಳುಗುತ್ತಿದ್ದ ಬೋಟನ್ನು ದಡಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















