ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ವಿದ್ಯಾರ್ಥಿಗಳು ತಮ್ಮಲ್ಲಿ ವೈಜ್ಞಾನಿಕ ಚಿಂತನೆಗಳನ್ನು ಬೆಳೆಸಿಕೊಂಡಾಗ ವಿಜ್ಞಾನ ಕ್ಷೇತ್ರದಲ್ಲಿ ಸಾಧನೆಯನ್ನು ಮಾಡಲು ಸಾಧ್ಯ ಎಂದು ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಡಾ. ವಿನಯ್ ಹೇಳಿದರು.
ಕ್ರೈಸ್ಟ್‌ಕಿಂಗ್ ಪ್ರೌಢಶಾಲೆಯಲ್ಲಿ ಸಂಸ್ಥೆಯ ಅಟಲ್ ಟಿಂಕರಿಂಗ್ ಲ್ಯಾಬ್‌ನ ಸಹಯೋಗದಲ್ಲಿ ಭೌಗೋಳಿಕ ಮಾಹಿತಿ ವ್ಯವಸ್ಥೆ(ಜಿಐಎಸ್) ಮಾಹಿತಿ ಕಾರ್ಯಾಗಾರ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅವರು, ವಿದ್ಯಾರ್ಥಿಗಳು ಈ ದಿಕ್ಕಿನಲ್ಲಿ ಸಾಧನೆಯನ್ನು ಮಾಡಿ ಕಲಿತ ಶಾಲೆಗೆ, ದೇಶಕ್ಕೆ ಹೆಸರು ತರುವಂತವರಾಗ ಬೇಕು ಎಂದು ಕರೆ ನೀಡಿದರು.
ಸಂಸ್ಥೆಯ ಪದವಿಪೂರ್ವ ವಿಭಾಗದ ಪ್ರಾಚಾರ್ಯ ಲಕ್ಷ್ಮೀನಾರಾಯಣ ಕಾಮತ್ ಮಾತನಾಡಿ ವಿಜ್ಞಾನ ಕ್ಷೇತ್ರದ ಬಗ್ಗೆ ವಿದ್ಯಾರ್ಥಿಗಳು ಆಸಕ್ತಿಯನ್ನು ಬೆಳೆಸಿಕೊಂಡು ಭವಿಷ್ಯದಲ್ಲಿ ತಮ್ಮನ್ನು ಸಂಶೋಧನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.
Also read: ಶಿಕಾರಿಪುರ: ಬಿಜೆಪಿ ವಿವಿಧ ಘಟಕಗಳಿಗೆ ಪದಾಧಿಕಾರಿಗಳ ಆಯ್ಕೆ
ವೇದಿಕೆಯಲ್ಲಿ ಮುಖ್ಯ ಶಿಕ್ಷಕರಾದ ಪ್ರೌಢಶಾಲಾ ವಿಭಾಗದ ಡೊಮಿನಿಕ್ ಅಂದ್ರಾದೆ, ಪ್ರಾಥಮಿಕ ವಿಭಾಗದ ಮೇರಿಯನ್ ಡಿಸೋಜ, ಪ್ರೌಢಶಾಲಾ ವಿಜ್ಞಾನ ಶಿಕ್ಷಕಿ ಹಾಗೂ ಅಟಲ್ ಟಿಂಕರಿಂಗ್ ಲ್ಯಾಬ್ ಸಂಯೋಜಕಿ ಜೋಸ್ನ ಸ್ನೇಹಲತಾ ಉಪಸ್ಥಿತರಿದ್ದರು.
ಕಾರ್ಕಳದ ವಿವಿಧ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿ ತರಬೇತಿಯನ್ನು ಪಡೆದುಕೊಂಡರು ವಿದ್ಯಾರ್ಥಿಗಳಾದ ಎಂಟನೇ ತರಗತಿಯ ಸಾನ್ವಿ ಮಾರ್ಟಿಸ್‌ರವರು ಸ್ವಾಗತಿಸಿ, ಏಳನೇ ತರಗತಿಯ ಶೆರಿನ್ ವಂದಿಸಿದರು. ಒಂಬತ್ತನೇ ತರಗತಿಯ ಅನನ್ಯ ವಿ ಕಾರ್ಯಕ್ರಮವನ್ನು ನಿರೂಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















