ಕಲ್ಪ ಮೀಡಿಯಾ ಹೌಸ್ | ಜಾರಸುಗುಡ |
ಪ್ರಧಾನಿ ನರೇಂದ್ರ ಮೋದಿ PM Narendra Modi ಅವರು ತಾವು ಹಿಂದುಳಿದ ವರ್ಗದವರು ಸುಳ್ಳು ಹೇಳಿಕೊಂಡು ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ Rahul Gandhi ಗಂಭೀರ ಆರೋಪ ಮಾಡಿದ್ದಾರೆ.
ಒಡಿಶಾದ ಜಾರಸುಗುಡದಲ್ಲಿ ತಮ್ಮ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಮಾತನಾಡಿದ ಅವರು, ಮೋದಿ ಅವರು ಇತರೆ ಹಿಂದುಳಿದ ವರ್ಗದ ಕುಟುಂಬದಲ್ಲಿ ಜನಿಸಿಲ್ಲ. ತಮ್ಮನ್ನು ತಾವು ಒಬಿಸಿ ಎಂದು ಬಂಬಿಸಿಕೊಳ್ಳುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
Also read: 100 ಬಿಲಿಯನ್ ಕ್ಲಬ್ ಪ್ರವೇಶಿಸಿದ ಗೌತಮ್ ಅದಾನಿ ವಿಶ್ವದ ಎಷ್ಟನೇ ಶ್ರೀಮಂತ
ಮೋದಿ ಮೇಲ್ಜಾತಿಗೆ ಸೇರಿದವರಾಗಿದ್ದು, ಹಿಂದುಳಿದ ಒಬಿಸಿಗೆ ಸೇರಿದ್ದೇನೆ ಎಂದು ಹೇಳಿಕೊಂಡು ಜನರ ದಾರಿ ತಪ್ಪಿಸುತ್ತಿದ್ದಾರೆ. ಮೋದಿ, 2000ರಲ್ಲಿ ಗುಜರಾತ್ನಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಒಬಿಸಿ ಪಟ್ಟಿಗೆ ಸೇರಿಸಲ್ಪಟ್ಟ ತೇಲಿ ಜಾತಿಯ ಕುಟುಂಬದಲ್ಲಿ ಜನಿಸಿದವರು. ಆದ್ದರಿಂದ ಮೋದಿ ಹುಟ್ಟಿನಿಂದ ಒಬಿಸಿ ಅಲ್ಲ ಎಂದು ಆರೋಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post