ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಅವರು ನಾಳೆ ಮಂಡಿಸಲಿರುವ 15ನೇ ಬಜೆಟ್ ಆಶಾಕಿರಣ ಬಜೆಟ್ ಆಗಲಿದ್ದು ಜನಪರ ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ Ayanuru Manjunath ವಿಶ್ವಾಸ ವ್ಯಕ್ತಪಡಿಸಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಭೀಕರ ಬರಗಾಲವಿಲ್ಲ ಕಾರ್ಮಿಕರ ಸಮಸ್ಯೆಗಳಿವೆ, ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ವ್ಯವಸ್ಥೆ ಬರಬೇಕಾಗಿದೆ. ವೇತನ ಆಯೋಗದ ಸಂಪೂರ್ಣ ಜಾರಿಯಾಗಬೇಕಾಗಿದೆ. ಅಸಂಘಟಿತ ಕಾರ್ಮಿಕರ ಸಮಸ್ಯೆಗಳಿವೆ. ಈ ಎಲ್ಲಾ ಸಮಸ್ಯೆಗಳಿಗೆ ಉತ್ತರ ಎಂಬಂತೆ ನಾಳಿನ ಬಜೆಟ್ ಮಂಡನೆಯಾಗಲಿದೆ ಎಂದರು.

Also read: ನಿಯಮ ಉಲ್ಲಂಘನೆ | ಮೂರು ಸ್ಕ್ಯಾನಿಂಗ್ ಸೆಂಟರ್ ವಿರುದ್ಧ ದೂರು ದಾಖಲು
ಮುಖ್ಯವಾಗಿ ರೈತರು ಸಂಕಷ್ಟದಲ್ಲಿದ್ದಾರೆ. ಹಲವು ಕಡೆ ಕುಡಿಯುವ ನೀರಿನ ಸಮಸ್ಯೆಯೂ ಇದೆ. ಕೃಷಿ ಕಾರ್ಮಿಕರು ವಲಸೆ ಹೋಗದ ರೀತಿಯಲ್ಲಿ ನೋಡಬೇಕಾಗಿದೆ. ಒಕ್ಕೂಟದ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ತನ್ನ ಮಲತಾಯಿ ಯೋಜನೆಯನ್ನು ಮುಂದುವರೆಸಿದೆ. ಅನುದಾನವನ್ನು ಕೊಡದೇ ಕೇವಲ ರಾಜಕಾರಣಕ್ಕಾಗಿ ರಾಜ್ಯದ ಹಕ್ಕನ್ನೇ ಕಸಿದುಕೊಂಡಿದೆ. ಇದರ ವಿರುದ್ಧ ಕರ್ನಾಟಕ ಸರ್ಕಾರವೇ ದೆಹಲಿಗೆ ಹೋಗಿ ಪ್ರತಿಭಟನೆ ನಡೆಸಿದರು ಪ್ರಯೋಜನವಾಗಲಿಲ್ಲ. ಕೇಂದ್ರ ಸರ್ಕಾರಕ್ಕೆ ಕರ್ನಾಟಕದ ಸಮಸ್ಯೆಗಳು ತಿಳಿಯಲೇ ಇಲ್ಲ. ಇಂತಹ ಹಲವು ಸನ್ನಿವೇಶಗಳ ನಡುವೆಯೂ ರಾಜ್ಯದ ಬಜೆಟ್ ಕರ್ನಾಟಕದ ಜನತೆಗೆ ಒಂದು ರೀತಿಯಲ್ಲಿ ಖಂಡಿತ ಆಶಾಕಿರಣವಾಗಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಸದಸ್ಯ ವೈ.ಹೆಚ್.ನಾಗರಾಜ್, ಪ್ರಮುಖರಾದ ಧೀರರಾಜ್ ಹೊನ್ನವಿಲೆ ಶಿ.ಜು.ಪಾಶ. ಜಿ.ಪದ್ಮನಾಭ್, ಕೃಷ್ಣ, ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post