ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಈ ಅವಧಿಯ ಕಾಂಗ್ರೆಸ್ ಸರ್ಕಾರದ ಆಯವ್ಯಯವನ್ನು State Budget ಮಂಡಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, CM Siddaramaiah ರಾಜ್ಯದ ಜನರ ಮೇಲೆ ತೆರಿಗೆಯ ಬರೆ ಎಳೆದಿದ್ದಾರೆ.
ಲೋಕಸಭಾ ಚುನಾವಣೆಗೂ Parliament Election ಮುನ್ನ ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ ಆರ್ಥಿಕ ಕ್ರೋಢೀಕರಣಕ್ಕೆ ಮುಂದಾಗಿದ್ದು, ಇದಕ್ಕಾಗಿ ರಾಜ್ಯದ ಜನರ ಮೇಲೆ ತೆರಿಗೆಯ ಹೊರ ಏರಿಸಿದ್ದಾರೆ.
2023-24ನೇ ಸಾಲಿನ ಜನವರಿ ತಿಂಗಳ ಅಂತ್ಯದವರೆಗೆ, ಅಬಕಾರಿ ತೆರಿಗೆಯಿಂದ 28,181 ಕೋಟಿ ರೂ.ಗಳು ಸ್ವೀಕೃತವಾಗಿರುತ್ತದೆ. 2024-25ನೇ ಸಾಲಿಗೆ 38,525 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ ಎಂದಿದ್ದಾರೆ.
Also read: ಮದ್ಯ ಪ್ರಿಯರಿಗೆ ಬಿಗ್ ಶಾಕ್ | ಬಿಯರ್ ಬೆಲೆ ಮೇಲೆ ಕಾಂಗ್ರೆಸ್ ಸರ್ಕಾರದ ಕಣ್ಣು
2023-24ರಲ್ಲಿ ದೇಶದ ಇತರೆ ರಾಜ್ಯಗಳಿಗೆ ಹೋಲಿಸಿದರೆ ಒಟ್ಟು ಜಿಎಸ್’ಟಿ ತೆರಿಗೆ ಸಂಗ್ರಹಣೆಯಲ್ಲಿ ಕರ್ನಾಟಕ ರಾಜ್ಯವು 2ನೇ ಸ್ಥಾನದಲ್ಲಿದೆ. ಜನವರಿ ತಿಂಗಳ ಅಂತ್ಯದವರೆಗೂ 58,180 ಕೋಟಿ ರೂ.ಗಳ ಖಎಖS ತೆರಿಗೆ ಸ್ವೀಕೃತವಾಗಿದ್ದು, ಕಳೆದ ಸಾಲಿಗೆ ಹೋಲಿಸಿದರೆ ಶೇ.14 ರಷ್ಟು ಬೆಳವಣಿಗೆಯಾಗಿದೆ ಎಂದಿದ್ದಾರೆ.
2024-25ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 3,71,383 ಕೋಟಿ ರೂ.3.8 ಲಕ್ಷ ಕೋಟಿ ರೂಪಾಯಿ ಆಗಿದ್ದು, ಈ ಬಾರಿಯೂ ವಲಯವಾರು ವಿಂಗಡಣೆ ಮಾಡಿ ಮುಖ್ಯಮಂತ್ರಿ ಸಿದ್ಜರಾಮಯ್ಯ ಅವರು ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡಿದ್ದಾರೆ.
ಯಾವುದಕ್ಕೆ ಎಷ್ಟು ತೆರಿಗೆ ಏರಿಕೆ?
ಅಬಕಾರಿ ಸಂಕು: ಶೇ.20ರಷ್ಟು ಏರಿಕೆ
ಮೋಟಾರು ವಾಹನ ತೆರಿಗೆ: ಶೇ.7ರಷ್ಟು ಏರಿಕೆ
ನೊಂದಣಿ ಶುಲ್ಕು: ಶೇ.14ರಷ್ಟು ಏರಿಕೆ
ಬಹುಮಹಡಿ ಕಟ್ಟಡ ಶುಲ್ಕ: ಶೇ.1ರಷ್ಟು ಸೆಸ್ ಏರಿಕೆ
ಇತರೆ ತೆರಿಗೆ: ಶೇ.1ರಷ್ಟು ಏರಿಕೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post