ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಲೋಕಸಭಾ ಚುನಾವಣೆಗೂ ಮುನ್ನ ರಾಜ್ಯ ಕಾಂಗ್ರೆಸ್ ಸರ್ಕಾರದ ಆಯವ್ಯಯ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಶಿವಮೊಗ್ಗ ಜಿಲ್ಲೆಗೂ ಸಹ ಕೆಲವೊಂದು ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ.
ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಕೆಲವೊಂದು ಘೋಷಣೆ ಮಾಡಿರುವ ಸಿದ್ದರಾಮಯ್ಯ ಅನುದಾನವನ್ನೂ ಸಹ ಮೀಸಲಿಡುವುದಾಗಿ ಹೇಳಿದ್ದಾರೆ.
Also read: ರಾಜ್ಯದ ಜನರ ಮೇಲೆ ಕಾಂಗ್ರೆಸ್ ಸರ್ಕಾರದ ‘ತೆರಿಗೆ’ಯ ಬರೆ

- ಫುಡ್ ಪಾರ್ಕ್: ಶಿವಮೊಗ್ಗದ ಸೋಗಾನ ವಿಮಾನ ನಿಲ್ದಾಣದ ಬಳಿಯಲ್ಲಿ ಆಹಾರ ಪಾರ್ಕ್ ನಿರ್ಮಾಣ
- ಶಿವಮೊಗ್ಗದಲ್ಲಿ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ: ಮುಂದಿನ 4 ವರ್ಷಗಳಲ್ಲಿ ಪ್ರತಿ ಜಿಲ್ಲಾ ಆಸ್ಪತ್ರೆಯಲ್ಲಿ ಸಂಯೋಜಿತ ಮತ್ತು ಸಾರ್ವಜನಿಕ ಆರೋಗ್ಯ ಪ್ರಯೋಗಾಲಯವನ್ನು ಸ್ಥಾಪಿಸುವ ಮೂಲಕ ಸಾರ್ವಜನಿಕರಿಗೆ ಕೈಗೆಟಕುವ ದರದಲ್ಲಿ ಉತ್ತಮ ಪ್ರಯೋಗಾಲಯ ಸೇವೆಗಳನ್ನು ಒದಗಿಸಲು ಕ್ರಮ
- ರೈಲ್ವೆ ಮೇಲ್ಸೇತುವೆ: ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿರುವ ಬೊಮ್ಮನಕಟ್ಟೆ ರೈಲ್ವೆ ಲೆವೆಲ್ ಕ್ರಾಸಿಂಗ್’ನಲ್ಲಿ ಮೇಲ್ಸೇತುವೆ ನಿರ್ಮಾಣ
- ತಾರಾಲಯ: ಶಿವಮೊಗ್ಗದಲ್ಲಿ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ವಿಜ್ಞಾನ ಕೇಂದ್ರ/ತಾರಾಲಯಗಳನ್ನು ಹೊಸದಾಗಿ ಸ್ಥಾಪಿಸಲಾಗುವುದು.
- ಶಿವಮೊಗ್ಗ, ರಾಯಚೂರು, ಚಿಕ್ಕಮಗಳೂರು, ಯಾದಗಿರಿ ಮತ್ತು ಮೈಸೂರಿನಲ್ಲಿ ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ವಿಜ್ಞಾನ ಕೇಂದ್ರ/ತಾರಾಲಯಗಳನ್ನು ಹೊಸದಾಗಿ ಸ್ಥಾಪನೆ
- ಜಿಲ್ಲೆಯಲ್ಲಿ 100 ಕೋಟಿ ರೂ.ಗಳ ವೆಚ್ಚದಲ್ಲಿ ಹೊಸ ಹೈ-ಸೆಕ್ಯೂರಿಟಿ ಕಾರಾಗೃಹವನ್ನು ನಿರ್ಮಾಣ
- ಭದ್ರಾವತಿಯಲ್ಲಿ ಅತ್ಯಾಧುನಿಕ ಹೈಟೆಕ್ ಮೀನು ಮಾರುಕಟ್ಟೆ ನಿರ್ಮಾಣ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















