ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಅವರು ಇಂದು ಮಂಡಿಸಿರುವ ಬಜೆಟಲ್ಲಿ ಅಲ್ಪ ಸಂಖ್ಯಾತ ಸಮುದಾಯಗಳ ಅಭಿವೃದ್ಧಿಗೆ ನೂರಾರು ಕೋಟಿ ರೂ. ಹಣವನ್ನು ನೀಡಿದ್ದು, ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಬಿಜೆಪಿ ಸಂಸದ ತೇಜಸ್ವಿ ಸೂರ್ಯ, MP Tejaswi Surya ಸಿದ್ದರಾಮಯ್ಯ ಬಜೆಟ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಂದೂ ದೇವಾಲಯಗಳಿಂದ ಬಂದ ಹಣವನ್ನು ಹಿಂದೂಯೇತರ ಧರ್ಮಗಳ ಧಾರ್ಮಿಕ ಸಂಸ್ಥೆಗಳಿಗೆ ಧನಸಹಾಯಕ್ಕೆ ಸಿದ್ದರಾಮಯ್ಯನಂತಹ ಜಾತ್ಯಾತೀತ ನಾಯಕರ ಎಸ್’ಒಪಿಯಾಗಿದೆ ಎಂದಿದ್ದಾರೆ.
ಸಿದ್ದರಾಮಯ್ಯನವರ ಸೆಕ್ಯುಲರಿಸಂ ಕೇವಲ ಹಿಂದೂವನ್ನು ಹೊಡೆಯುವ ಕೋಲು ಮಾತ್ರವಲ್ಲ, ಹಿಂದೂಗಳ ಹಣದಲ್ಲಿ ಇತರರನ್ನು ಆರ್ಥಿಕವಾಗಿ ಶ್ರೀಮಂತಗೊಳಿಸುವ ಸಾಧನವೂ ಆಗಿದೆ ಎಂದು ತೇಜಸ್ವಿ ಸೂರ್ಯ ಆಕ್ರೋಶ ಹೊರಹಾಕಿದ್ದಾರೆ.
ಮುಜರಾಯಿ ಇಲಾಖೆಯ ಎ ಮತ್ತು ಬಿ ಕೆಟಗರಿ ಹಿಂದೂ ದೇವಾಲಯಗಳಿಂದ ಸರ್ಕಾರಕ್ಕೆ ಅಂದಾಜು 450 ಕೋಟಿ ರೂ. ಆದಾಯ ಸಂಗ್ರಹವಾಗುತ್ತದೆ. ಈ ಆದಾಯದಲ್ಲಿ 330 ಕೋಟಿ ರೂಪಾಯಿ ಹಣವನ್ನು ಹಜ್ ಭವನ ನಿರ್ಮಾಣ, ವಕ್ಫ್ ಬೋರ್ಡ್, ಕ್ರಿಶ್ಚಿಯನ್ ಸಮುದಾಯಕ್ಕೆ ಅನುದಾನ ನೀಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶಕ್ಕೆ ಸೃಷ್ಠಿಸಿದೆ.
Also read: ‘ಎಐ’ ತಂತ್ರಜ್ಞಾನ ವೈದ್ಯಕೀಯ ಕ್ಷೇತ್ರಕ್ಕೆ ಸಹಕಾರಿ: ಡಾ. ವಿನಯ ಶ್ರೀನಿವಾಸ್
ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ಹಿಂದೂ ದೇವಾಲಯಗಳನ್ನು ಸರ್ಕಾರದ ಮುಜರಾಯಿ ಇಲಾಖೆಯಿಂದ ಮುಕ್ತಗೊಳಿಸಿ. ಇಲ್ಲದಿದ್ದರೆ ಎಲ್ಲ ಸಮುದಾಯಗಳ ಧಾರ್ಮಿಕ ಮಂದಿರ ಹಾಗೂ ಕೇಂದ್ರಗಳನ್ನು ಸರ್ಕಾರದ ಸುಪರ್ದಿಗೆ ತನ್ನಿ ಎಂದು ಆಕ್ರೋಶ ವ್ಯಕ್ತವಾಗಿದೆ.
ಸಿಎಂ ಸಿದ್ದರಾಮಯ್ಯ ಅವರು ಇಂದು ಮಂಡಿಸಿರುವ ಬಜೆಟ್’ನಲ್ಲಿ ಅಲ್ಪಸಂಖ್ಯಾತ ಅಬಿವೃದ್ಧಿ ನಿಗದಮಕ್ಕೆ 393 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ.
ಇದರಲ್ಲಿ ಪ್ರಮುಖವಾಗಿ ವಕ್ಫ್ ಆಸ್ತಿಗಳ ರಕ್ಷಣೆಗಾಗಿ 100 ಕೋಟಿ ರೂಪಾಯಿ ಅನುದಾನವನ್ನು ಸಿದ್ದರಾಮಯ್ಯ ತಮ್ಮ ಬಜೆಟ್’ನಲ್ಲಿ ನೀಡಿದ್ದಾರೆ. ಇನ್ನು ಮಂಗಳೂರಿನಲ್ಲಿ ಹಜ್ ಭವನ ನಿರ್ಮಾಣಕ್ಕೆ 10 ಕೋಟಿ ರೂಪಾಯಿ ಅನುದಾನ ನೀಡಿದ್ದು, ಇತ್ತ ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗೆ 200 ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ.
ಇನ್ನು ಅಲ್ಪಸಂಖ್ಯಾತ ಮಹಿಳಾ ಸ್ವ ಸಹಾಯ ಗುಂಪುಗಳಿಗೆ 10 ಕೋಟಿ ರೂಪಾಯಿ ಅನುದಾನ ನೀಡಲಾಗಿದ್ದು, ಸರಿಸುಮಾರು ಮುಸ್ಲಿಮ್ ಹಾಗೂ ಕ್ರಿಶ್ಚಿಯನ್ ಸಮುದಾಯಕ್ಕೆ 330 ಕೋಟಿ ರೂಪಾಯಿ ಅನುದಾನವನ್ನು ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















